ಜೈಪುರ್: ಚಪ್ಪಲಿಯೊಳಗೆ ಬ್ಲ್ಯೂಟೂತ್ ಹಾಗೂ ಮೊಬೈಲ್ ಫೋನ್ ಇಟ್ಟುಕೊಂಡು ಪರೀಕ್ಷೆ ಬರೆಯಲು ಮುಂದಾದ ಐವರನ್ನು ಬಂಧಿಸಿರುವ ಘಟನೆ ನಡೆದಿದೆ.
ರಾಜಸ್ಥಾನ ಶಿಕ್ಷಕರ ನೇಮಕಾತಿ ಪರೀಕ್ಷೆಯ (REET) ವೇಳೆ ಅಭ್ಯರ್ಥಿಗಳು ಚಪ್ಪಲಿಯೊಳಗೆ ಬ್ಲೂಟೂತ್ ಹಾಗೂ ಮೊಬೈಲ್ ಫೋನ್ ಅಡಗಿಸಿಟ್ಟುಕೊಂಡು ಚೀಟ್ ಮಾಡುತ್ತಿದ್ದ ವಿಷಯವೊಂದು ಬಯಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಗೋಕರ್ಣದಲ್ಲಿ ಸಮುದ್ರದ ಪಾಲಾಗುತಿದ್ದ ಪ್ರವಾಸಿಗನ ರಕ್ಷಣೆ
Advertisement
Advertisement
ಮೋಸ ಮಾಡಲು ಮುಂದಾದ ಅಭ್ಯರ್ಥಿಗಳಿಂದ ಒಟ್ಟು 6 ಲಕ್ಷ ಮೌಲ್ಯದ ಚಪ್ಪಲಿಯನ್ನು ವಶಪಡಿಸಿಕೊಳ್ಳಲಾಗಿದೆ. ಚಪ್ಪಲಿಯೊಳಗೆ ಬ್ಲ್ಯೂಟೂತ್ ಮತ್ತು ಮೊಬೈಲ್ ಫೋನ್?ಗಳನ್ನು ಇರಿಸಿಕೊಳ್ಳಲಾಗಿತ್ತು. ಜತೆಗೆ ಅಭ್ಯರ್ಥಿಗಳು ಬ್ಲ್ಯೂಟೂತ್ ಸಹಾಯದಿಂದ ಉತ್ತರವನ್ನು ಹೊರಗಡೆ ನಿಂತಿದ್ದ ವ್ಯಕ್ತಿಯಿಂದ ಕೇಳಿ ತಿಳಿದುಕೊಳ್ಳುವ ವ್ಯವಸ್ಥೆ ಮಾಡಿಕೊಂಡಿದ್ದರು. ಇದನ್ನೂ ಓದಿ: ಮತ್ತೆ ಚೀನಾ ಸೈನಿಕರ ಕಿರಿಕ್ – ಭಾರತ ಗಡಿ ಪ್ರವೇಶಿಸಿ ಸೇತುವೆ ಧ್ವಂಸ
Advertisement
Advertisement
ರಾಜಸ್ಥಾನ ಶಿಕ್ಷಕರ ಅರ್ಹತಾ ನೇಮಕಾತಿ ಪರೀಕ್ಷೆಯು ಭಾನುವಾರ ನಡೆಯಿತು. ರಾಜಸ್ಥಾನ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಾಗಲು ಖಇಇಖಿ ಉತ್ತೀರ್ಣರಾಗಬೇಕು. ಐವರು ಅಭ್ಯರ್ಥಿಗಳು ಬ್ಲ್ಯೂಟೂತ್ ಇದ್ದ ಚಪ್ಪಲಿಯನ್ನು ಧರಿಸಿ ಪರೀಕ್ಷಾ ಕೊಠಡಿಯನ್ನು ಪ್ರವೇಶಿಸುವ ಮೊದಲೇ ಅವರನ್ನು ತಡೆಯಲಾಗಿದೆ. ಜತೆಗೆ ಈ ದಂಧೆಯಲ್ಲಿ ಪಾಲ್ಗೊಂಡಿದ್ದ ಇತರರನ್ನೂ ಸಹ ಬಂಧಿಸಲಾಗಿದೆ. ಚೀಟಿಂಗ್ ಮಾಡಲು ಬಳಕೆ ಮಾಡಲಾಗುತ್ತಿದ್ದ ಚಪ್ಪಲಿಗಳನ್ನು ಬರೋಬ್ಬರಿ 2 ರಿಂದ 6 ಲಕ್ಷದ ವರೆಗೆ ಮಾರಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ.