ಬೆಂಗಳೂರು: ದೇಶದ ಕಾನೂನು ಮತ್ತು ಸುವ್ಯವಸ್ಥೆಗೆ ಸವಾಲನ್ನು ಹಾಕುವ ದೇಶದ್ರೋಹಿ ಶಕ್ತಿಗಳನ್ನು ಸಹಿಸಲಾಗುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಆರ್.ಟಿ.ನಗರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ತಮಿಳುನಾಡಿನಲ್ಲಿ ಕರ್ನಾಟಕದ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳೂ ಸೇರಿದಂತೆ ಒಟ್ಟು 3 ಜನ ನ್ಯಾಯಮೂರ್ತಿಗಳ ಮೇಲೆ ಕೊಲೆ ಬೆದರಿಕೆ ಬಂದಿದೆ. ಈ ಸಂಬಂಧ ಮೊಕದ್ದಮೆ ದಾಖಲಾಗಿದೆ. ನ್ಯಾಯಾಂಗದ ತೀರ್ಪನ್ನು ಎಲ್ಲರೂ ಒಪ್ಪಬೇಕಾಗುತ್ತದೆ. ಅರ್ಜಿದಾರರಿಗೆ ತೀರ್ಪು ಸಮಂಜಸವೆನಿಸದಿದ್ದರೆ ಮೇಲ್ಮನವಿ ಸಲ್ಲಿಸಲು ಎಲ್ಲ ಅವಕಾಶಗಳಿವೆ. ಆದರೂ ಈ ವಿಚ್ಛಿದ್ರಕಾರಿ ಶಕ್ತಿಗಳು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರನ್ನು ಪ್ರಚೋದಿಸಿ ವ್ಯವಸ್ಥೆಯ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿವೆ ಡೇಜರಸ್ ಫ್ಲೈ ಓವರ್‌ಗಳು
Advertisement
Advertisement
ತಮಿಳುನಾಡಿನಲ್ಲಿ ಪ್ರಕರಣ ದಾಖಲಾಗಿದೆ. ಕರ್ನಾಟಕ ಉಚ್ಛನ್ಯಾಯಾಲಯದ ಬಾರ್ ಕೌನ್ಸಿಲ್ ಅವರೂ ಸಹ ವಿಧಾನಸೌಧದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಈ ಬಗ್ಗೆ ಕೂಡಲೇ ತನಿಖೆ ನಡೆಸಲು ಸೂಚಿಸಲಾಗಿದೆ. ತಮಿಳುನಾಡಿನಿಂದ ರಾಜ್ಯದ ವಶಕ್ಕೆ ಆರೋಪಿಗಳನ್ನು ಪಡೆದು, ಕಠಿಣ ಕಾನೂನು ಕ್ರಮ ಕೈಗೊಳ್ಳಲು ಈಗಾಗಲೇ ಆದೇಶ ನೀಡಲಾಗಿದೆ. ಮೂರು ನ್ಯಾಯಾಧೀಶರಿಗೆ ಈಗಿರುವ ಭದ್ರತೆಯ ಜೊತೆಗೆ ‘ವೈ’ ಕೆಟಗರಿಯ ಭದ್ರತೆಯನ್ನು ನೀಡುವ ತೀರ್ಮಾವನ್ನು ಸರ್ಕಾರ ಕೈಗೊಂಡಿದೆ ಎಂದರು.
Advertisement
Advertisement
ಡೋಂಗಿ ಜಾತ್ಯತೀತರು ಮೌನವಹಿಸಿದ್ದಾರೆ
ಇದೇ ವೇಳೆ ನ್ಯಾಯಮೂರ್ತಿಗಳು ನೀಡುವ ತೀರ್ಪಿಗಾಗಿ ಅವರಿಗೆ ಕೊಲೆ ಬೆದರಿಕೆ ಹಾಕಿರುವ ಪ್ರಕರಣದ ಮೇಲೆ ಡೋಂಗಿ ಜಾತ್ಯತೀತರು ಮೌನ ವಹಿಸಿದ್ದಾರೆ. ಒಂದು ವರ್ಗದ ಜನರನ್ನು ಈ ರೀತಿ ಓಲೈಸುವುದು ಜಾತ್ಯತೀತತೆ ಅಲ್ಲ, ಕೋಮುವಾದ ಎಂದೆನಿಸುತ್ತದೆ. ಈ ಪ್ರಕರಣದ ಬಗ್ಗೆ ಎಲ್ಲರೂ ಒಗ್ಗಾಟ್ಟಾಗಿ ಕ್ರಮ ಕೈಗೊಂಡು ಈ ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಕಾಯ್ದುಕೊಳ್ಳಬೇಕಿದೆ. ಈ ರೀತಿಯ ಪ್ರಕರಣಗಳು ದೇಶದ ಪ್ರಜಾಪ್ರಭುತ್ವಕ್ಕೆ ಆತಂಕವನ್ನು ಒಡ್ಡುತ್ತವೆ. ಸರ್ಕಾರದಿಂದ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕವಾಗಿ ಈ ಪ್ರಕರಣವನ್ನು ಖಂಡಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಭಿಕ್ಷುಕನ ಜೊತೆ ಪತ್ನಿ ರೊಮ್ಯಾನ್ಸ್ ನೋಡಿ ಬೆಚ್ಚಿಬಿದ್ದ ಪತಿ
ತುಮಕೂರಿನ ಪಾವಗಡ ಬಸ್ ಅಪಘಾತ
ಶಾಲಾ ಕಾಲೇಜುಗಳು ಇರುವ ಸಂದರ್ಭದಲ್ಲಿ ಬಸ್‍ಗಳಲ್ಲಿ ಅದರ ಮಿತಿಗಿಂತ ಹೆಚ್ಚಿನ ಜನರನ್ನು ಒಯ್ಯುವ ಬಸ್‌ಗಳನ್ನು ಪತ್ತೆ ಹಚ್ಚಲು ಸೂಚಿಸಲಾಗಿದೆ. ಆ ರೀತಿಯ ಬಸ್‍ಗಳ ಲೈಸೆನ್ಸ್‌ಗಳನ್ನು ರದ್ದು ಮಾಡಲು ಸೂಚನೆ ನೀಡಲಾಗಿದೆ. ಇಂತಹ ಬಸ್‍ಗಳು ಸಂಚರಿಸುವ ಮಾರ್ಗದಲ್ಲಿ ನಿರಂತರ ತಪಾಸಣೆ ಮಾಡಲೂ ಸಹ ಸೂಚಿಸಲಾಗಿದೆ. ಗಾಯಾಳುಗಳಿಗೆ ಅವಶ್ಯಕತೆ ಇದ್ದಲ್ಲಿ ಬೆಂಗಳೂರಿಗೆ ಸ್ಥಳಾಂತರಿಸಲು ತಿಳಿಸಲಾಗಿದೆ. ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದರು.