Bengaluru City
35ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಪುತ್ತೂರು-ಬೆಂಗ್ಳೂರು KSRTC ಬಸ್ ಪಲ್ಟಿ

ಬೆಂಗಳೂರು: ನೆಲಮಂಗಲದ ಸೋಲೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‍ಆರ್ ಟಿಸಿ ಬಸ್, ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿದೆ. ಕೂಡಲೇ ಕಾರ್ಯಾಚರಣೆ ನಡೆಸಿದ ಸ್ಥಳೀಯರು, ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ.
ಅಪಘಾತಕ್ಕೀಡಾದ ಬಸ್, ಪುತ್ತೂರಿನಿಂದ ಬೆಂಗಳೂರಿಗೆ ಬರುತ್ತಿತ್ತು. ಅಪಘಾತದಲ್ಲಿ 35ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.
