ಮಂಗಳೂರು: ಸಹಪಾಠಿ ವಿದ್ಯಾರ್ಥಿನಿಗೆ ಮತ್ತು ಬರಿತ ಆಹಾರ ನೀಡಿ ಅತ್ಯಾಚಾರ ನಡೆಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪುತ್ತೂರಿನ ಖಾಸಗಿ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ತನ್ನದೇ ಕಾಲೇಜಿನ ಸಹಪಾಠಿ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ವಿದ್ಯಾರ್ಥಿಗಳು ವಿದ್ಯಾರ್ಥಿನಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರ ನಡೆಸಿದ್ದಾರೆ. ಅತ್ಯಾಚಾರ ನಡೆಸಿದಲ್ಲದೆ ಅದನ್ನು ವಿಡಿಯೋವನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲೂ ಹರಿಬಿಟ್ಟಿದ್ದಾರೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ದಕ್ಷಿಣ ಕನ್ನಡ ಎಸ್ಪಿ ಬಿ.ಎಂ ಲಕ್ಷ್ಮಿ ಪ್ರಸಾದ್ ಪುತ್ತೂರಿಗೆ ಭೇಟಿ ನೀಡಿದ್ದಾರೆ. ಒಟ್ಟು 4 ಯುವಕರು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ವಿಡಿಯೋದಲ್ಲಿ ಇಬ್ಬರ ಮುಖ ಕಾಣಿಸಿಕೊಂಡಿದ್ದರಿಂದ ಪೊಲೀಸರು ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಮತ್ತೆ ಇಬ್ಬರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಈ ವಿಡಿಯೋವನ್ನು ಶೇರ್ ಮಾಡಬಾರದು. ಶೇರ್ ಮಾಡಿದರೆ ಅದು ಅಪರಾಧವಾಗುತ್ತದೆ ಎಂದು ಎಸ್ಪಿ ಲಕ್ಷ್ಮಿ ಪ್ರಸಾದ್ ವಿದ್ಯಾರ್ಥಿಗಳಿಗೆ ಖಡಕ್ ಸಂದೇಶ ನೀಡಿದ್ದಾರೆ.
ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿ ಈಗ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ.