ಬೆಂಗಳೂರು: ಏಳು ದಿನದೊಳಗೆ ಟೋಲ್ ದರ ಏರಿಕೆ ಹಿಂತೆಗೆದುಕೊಳ್ಳದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ನಂದಿ ಇನ್‍ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‍ಪ್ರೈಸಸ್ (ನೈಸ್)ಗೆ ಲೋಕೋಪಯೋಗಿ ಇಲಾಖೆ ನೋಟಿಸ್ ಜಾರಿ ಮಾಡಿದೆ.
ನೈಸ್ ಕಂಪೆನಿ ಜುಲೈ 1 ರಿಂದ ಶೇ 33 ರಷ್ಟು ಟೋಲ್ ದರ ಹೆಚ್ಚಳ ಮಾಡಿರುವುದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವುದರಿಂದ ಈ ಕಂಪೆನಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.
Advertisement
Advertisement
ಕ್ರಿಯಾ ಒಪ್ಪಂದ (ಫ್ರೇಮ್ ವರ್ಕ್ ಅಗ್ರಿಮೆಂಟ್) ಜಾರಿಗೊಳಿಸದೇ ಕರ್ತವ್ಯ ಲೋಪ ಎಸಗಿರುವ ಸಂಬಂಧ ಹೈಕೋರ್ಟ್‍ನಲ್ಲಿ ಸಲ್ಲಿಸಿರುವ ರಿಟ್ ಅರ್ಜಿ ಇನ್ನೂ ಇತ್ಯರ್ಥ ಆಗಿಲ್ಲ. ಅಷ್ಟರಲ್ಲೇ ಟೋಲ್ ದರ ಹೆಚ್ಚಿಸಿರುವುದು ಅಕ್ರಮ. ಕೂಡಲೇ ಈ ತೀರ್ಮಾನ ಹಿಂದಕ್ಕೆ ಪಡೆಯಬೇಕು ಎಂದು ನೋಟಿಸ್‍ನಲ್ಲಿ ಹೇಳಲಾಗಿದೆ.