Bengaluru RuralKarnatakaLatestNational

ಮೇಕೆಯನ್ನು ನುಂಗಲು ಯತ್ನಿಸಿದ ಹೆಬ್ಬಾವು

ಬೆಂಗಳೂರು: ಹೊಲದಲ್ಲಿ ಮೇಯುತ್ತಿದ್ದ ಮೇಕೆಯನ್ನು ಭಾರೀ ಗಾತ್ರದ ಹೆಬ್ಬಾವೊಂದು ತಿನ್ನಲು ಯತ್ನಿಸಿದಂತಹ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಸಮೀಪದಲ್ಲಿ ನಡೆದಿದೆ.

ವ್ಯಕ್ತಿಯೊಬ್ಬರು ತನ್ನ ಹೊಲದಲ್ಲಿ ಮೇಕೆಗಳನ್ನು ಮೇಯಿಸುತ್ತಿದ್ದರು. ಈ ವೇಳೆ ಭಾರೀ ಗಾತ್ರದ ಹೆಬ್ಬಾವೊಂದು ಮೇಕೆಯನ್ನು ಸುತ್ತುವರಿದು ಬಂಧಿಸಿ, ತಿನ್ನಲು ಯತ್ನಿಸಿದೆ. ಇದನ್ನು ನೋಡಿದ ಮಾಲೀಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹೆಬ್ಬಾವಿನಿಂದ ಮೇಕೆಯನ್ನು ಬೇರ್ಪಡಿಸಿದ್ದಾರೆ. ಆದರೆ ಮೇಕೆ ಸಾವನ್ನಪ್ಪಿತ್ತು. ಬಳಿಕ ಹೆಬ್ಬಾವನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶದಲ್ಲಿ ಬಿಟ್ಟಿದ್ದಾರೆ. ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ತಮ್ಮ ಮೊಬೈಲ್‍ನಲ್ಲಿ ದೃಶ್ಯ ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Related Articles

Leave a Reply

Your email address will not be published. Required fields are marked *