ಕೋಲಾರ: ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ತೊಪ್ಪನಹಳ್ಳಿ ಗ್ರಾಮದಲ್ಲಿ ತೋಟವೊಂದರಲ್ಲಿ ಅಡಗಿದ್ದ ಬೃಹತ್ ಗಾತ್ರದ ಹೆಬ್ಬಾವನ್ನ ಉರಗ ತಜ್ಞರೊಬ್ಬರು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ.
ತೊಪ್ಪನಹಳ್ಳಿ ಗ್ರಾಮದ ಪಾಪಣ್ಣ ಎಂಬವರಿಗೆ ಸೇರಿದ ತೋಟದಲ್ಲಿ ಇಂದು ಹೆಬ್ಬಾವು ಪ್ರತ್ಯಕ್ಷವಾಗಿತ್ತು. ತೋಟದ ಮಾಲೀಕ ಪಾಪಣ್ಣ ಹೆಬ್ಬಾವು ಇರುವುದನ್ನ ಖಚಿತಪಡಿಸಿಕೊಂಡಿದ್ದು, ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಫೋನ್ ಮಾಡಿ ಮಾಹಿತಿ ತಿಳಿಸಿದ್ದಾರೆ.
Advertisement
Advertisement
ಮಾಹಿತಿ ತಿಳಿದ ನಂತರ ಉರಗ ತಜ್ಞ ಸತೀಶ್ ಸ್ಥಳಕ್ಕೆ ಬಂದಿದ್ದಾರೆ. ನಂತರ ಸುಮಾರು 18 ಕೆಜಿ ತೂಕವುಳ್ಳ 12 ಅಡಿ ಉದ್ದದ ಬೃಹತ್ ಗಾತ್ರದ ಹೆಬ್ಬಾವನ್ನು ಯಶಸ್ವಿಯಾಗಿ ಹಿಡಿದಿದ್ದಾರೆ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳು ರಕ್ಷಣೆಯಾದ ಹೆಬ್ಬಾವನ್ನು ತಮಿಳುನಾಡು ಗಡಿಯಲ್ಲಿರುವ ಅರಣ್ಯ ಪ್ರದೇಶಕ್ಕೆ ಬಿಟ್ಟು ಬಂದಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv