ವಾಷಿಂಗ್ಟನ್: ಸದ್ಯ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕ್ವಾಡ್ ಶೃಂಗಸಭೆಯಲ್ಲಿ (Quad Summit) ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಪನೀಸ್ ಮತ್ತು ಜಪಾನ್‌ನ ಪ್ರಧಾನಿ ಫುಮಿಯೊ ಕಿಶಿಡಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನೂ ಹಂಚಿಕೊಂಡಿದ್ದಾರೆ.
Had a very good meeting with PM Kishida. Discussed cooperation in infrastructure, semiconductors, defence, green energy and more. Strong India-Japan ties are great for global prosperity. @kishida230 pic.twitter.com/qK4VJnUDtq
— Narendra Modi (@narendramodi) September 22, 2024
Advertisement
ದ್ವಿಪಕ್ಷೀಯ ಮಾತುಕತೆಯಲ್ಲಿ ಉಭಯ ರಾಷ್ಟ್ರಗಳೊಂದಿಗೆ ಪರಸ್ಪರ ಹಿತಾಸಕ್ತಿಯ ಕ್ಷೇತ್ರಗಳಲ್ಲಿ ಯುಎಸ್-ಭಾರತದ (India – USA) ದ್ವಿಪಕ್ಷೀಯ ಪಾಲುದಾರಿಕೆಯನ್ನು ಸುಧಾರಿಸುವ ಬಗ್ಗೆ ಚರ್ಚಿಸಿದ್ದಾರೆ. ಜೊತೆಗೆ ಇಂಡೋ-ಪೆಸಿಫಿಕ್ ಗಡಿ ಭಾಗದ ಬಗ್ಗೆಯೂ ಉಭಯ ನಾಯಕರು ತಮ್ಮ ಅಭಿಪ್ರಾಯಗಳನ್ನ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಲೆಬನಾನ್ ಪೇಜರ್ ಸ್ಫೋಟದ ಹಿಂದೆ ಟ್ಯಾಲೆಂಟೆಡ್ ಬ್ಯೂಟಿ!
Advertisement
Glad to have met Quad Leaders during today’s Summit in Wilmington, Delaware. The discussions were fruitful, focusing on how Quad can keep working to further global good. We will keep working together in key sectors like healthcare, technology, climate change and capacity… pic.twitter.com/xVRlg9RYaF
— Narendra Modi (@narendramodi) September 22, 2024
Advertisement
ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಪನೀಸ್ ಅವರೊಂದಿಗೆ ಮೋದಿ ವಿಸ್ತ್ರತ ಚರ್ಚೆ ನಡೆಸಿದ್ದಾರೆ. ವ್ಯಾಪಾರ, ಭದ್ರತೆ, ಬಾಹ್ಯಾಕಾಶ ಮತ್ತು ಸಂಸ್ಕೃತಿಯಂತಹ ಕ್ಷೇತ್ರಗಳಲ್ಲಿ ಇನ್ನಷ್ಟು ಗತಿ ಪಡೆಯಲು ಪರಿಶ್ರಮಿಸುತ್ತೇವೆ. ಆಸ್ಟ್ರೇಲಿಯಾದೊಂದಿಗಿನ ಬಾಂಧವ್ಯವನ್ನು ಭಾರತ ಸದಾ ಗೌರವಿಸುತ್ತದೆ ಎಂದು ಇದೇ ವೇಳೆ ಮೋದಿ ಹೇಳಿದ್ದಾರೆ. ಇದನ್ನೂ ಓದಿ: ಪೇಜರ್ ಬ್ಲಾಸ್ಟ್ ಕೇಸ್‌ನಲ್ಲಿ ಟ್ಟಿಸ್ಟ್ – ಘಟನೆ ಹಿಂದೆ ಭಾರತೀಯ ಮೂಲದ ಉದ್ಯಮಿಯ ಕೈವಾಡ ಇರೋದು ನಿಜವೇ?
Advertisement
Deepening cultural connect and strengthening the fight against illicit trafficking of cultural properties.
I am extremely grateful to President Biden and the US Government for ensuring the return of 297 invaluable antiquities to India. @POTUS @JoeBiden pic.twitter.com/0jziIYZ1GO
— Narendra Modi (@narendramodi) September 22, 2024
ಮಗದೊಂದು ಪೋಸ್ಟ್‌ನಲ್ಲಿ ಜಪಾನ್ ಪ್ರಧಾನಿ ಫುಮಿಯೊ ಕಿಶಿಡಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿರುವುದು ಕಂಡುಬಂದಿದೆ. ಮೂಲಸೌಕರ್ಯ, ಸೆಮಿಕಂಡಕ್ಟರ್, ರಕ್ಷಣಾ ವಲಯ, ಗ್ರೀನ್ ಎನರ್ಜಿ ಮತ್ತು ಇತರೆ ವಿಷಯಗಳಲ್ಲಿ ಉಭಯ ದೇಶಗಳ ಸಹಕಾರದ ಕುರಿತು ಚರ್ಚಿಸಲಾಯಿತು. ಭಾರತ-ಜಪಾನ್ ನಡುವಣ ಗಟ್ಟಿ ಬಾಂಧವ್ಯವು ಜಾಗತಿಕ ಏಳಿಗೆಗೆ ಪೂರಕವಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.
ಕ್ವಾಡ್ ಶೃಂಗದಲ್ಲಿ ಭಾಗಿಯಾಗಲು ಶನಿವಾರವಷ್ಟೇ ಪ್ರಧಾನಿ ಮೋದಿ ಅಮೆರಿಕಕ್ಕೆ ಭೇಟಿ ನೀಡಿದ್ದರು. ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡೆಲವೇರ್‌ನ ವಿಮ್ಮಿಂಗ್ಟನ್‌ನಲ್ಲಿರುವ ಬೈಡನ್ ಅವರ ನಿವಾಸದಲ್ಲಿ ಉಭಯ ನಾಯಕರು ಭಾರತ-ಅಮೆರಿಕ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸುವ ಸಂಬಂಧ ಚರ್ಚಿಸಿದ್ದರು. ಇದನ್ನೂ ಓದಿ: ಗಾಜಾದಲ್ಲಿ ಹಮಾಸ್ ಉಗ್ರರ ಮೇಲೆ ಇಸ್ರೇಲ್ ದಾಳಿ – 13 ಮಕ್ಕಳು ಸೇರಿ 22 ಮಂದಿ ಸಾವು
ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಡೆಲವೇರ್ ರಾಜ್ಯದಲ್ಲಿರುವ ಅಮೆರಿಕದ ಅಧ್ಯಕ್ಷ ಜೋ ಬಿಡನ್ ಅವರ ನಿವಾಸದಲ್ಲಿ ಕ್ವಾಡ್ ಶೃಂಗಸಭೆಯ ಸಂದರ್ಭದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ MQ-9B ಸ್ಕೈ ಗಾರ್ಡಿಯನ್ ಮತ್ತು ಸೀ ಗಾರ್ಡಿಯನ್ ಡ್ರೋನ್ ಒಪ್ಪಂದ ಮತ್ತು ಕೋಲ್ಕತ್ತಾದಲ್ಲಿ ಸೆಮಿಕಂಡಕ್ಟರ್ ಪ್ಲಾಂಟ್ ಸ್ಥಾಪನೆ ಸೇರಿದಂತೆ ಹಲವು ವಿಷಯಗಳನ್ನು ನಾಯಕರು ಚರ್ಚಿಸಿದ್ದಾರೆ .
ಭಾರತದ ಸಶಸ್ತ್ರ ಪಡೆಗಳ ಗುಪ್ತಚರ, ಕಣ್ಗಾವಲು ಮತ್ತು ವಿಚಕ್ಷಣ (ISR) ಸಾಮರ್ಥ್ಯಗಳನ್ನು ಹೆಚ್ಚಿಸುವ 31 ಜನರಲ್ ಅಟಾಮಿಕ್ಸ್ MQ-9B (16 ಸ್ಕೈ ಗಾರ್ಡಿಯನ್ ಮತ್ತು 15 ಸೀ ಗಾರ್ಡಿಯನ್) ಡ್ರೋನ್‌ಗಳ ಖರೀದಿ ಬಗ್ಗೆ ಮಾತುಕತೆ ನಡೆಸಿದ್ದಾರೆ. ಇದಕ್ಕೆ ಬೈಡನ್ ಅವರಿಂದ ಗ್ರೀನ್ ಸಿಗ್ನಲ್ ಸಹ ಸಿಕ್ಕಿದೆ ಎನ್ನಲಾಗಿದೆ, ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.