ರಾಯಚೂರು: ನಗರದ ಜಹಿರಾಬಾದ್ನಲ್ಲಿ ಇಬ್ಬರು ಅಪ್ರಾಪ್ತರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಚಾಕು ಹಾಕುವ ಹಂತಕ್ಕೆ ತಿರುಗಿದ ಘಟನೆ ನಡೆದಿದೆ.
ಮಾತಿಗೆ ಮಾತು ಬೆಳೆದು ಸ್ನೇಹಿತ ಎನ್ನುವುದನ್ನೇ ಮರೆತು ದವಡೆಗೆ ಚಾಕು ಹಾಕಿದ್ದಾನೆ. ರಾತ್ರಿ ವೇಳೆ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಶುರುವಾದ ಜಗಳ ಚಾಕು ಹಾಕುವ ಹಂತಕ್ಕೆ ತಿರುಗಿದೆ. ಹಲ್ಲೆಗೊಳಗಾದ 17 ವರ್ಷದ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ರಾಯಚೂರಿನ ರಿಮ್ಸ್ ಆಸ್ಪತ್ರೆ (RIIMS Hospital) ಗೆ ದಾಖಲಾಗಿದ್ದಾನೆ.
ಶಸ್ತ್ರಚಿಕಿತ್ಸೆ ಮೂಲಕ ವೈದ್ಯರು ಚಾಕು ಹೊರ ತೆಗೆದಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಯುವಕ ಚೇತರಿಸಿಕೊಳ್ಳುತ್ತಿದ್ದಾನೆ. ಘಟನೆ ಹಿನ್ನೆಲೆ ಸದರಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಫೋನಲ್ಲಿ ಮಾತನಾಡುತ್ತಿದ್ದ ವಿವಾಹಿತೆಯ ಮೇಲೆ ಅತ್ಯಾಚಾರ ಯತ್ನ – ಆರೋಪಿಗಳಿಗಾಗಿ ಪೊಲೀಸರ ಶೋಧ