Bengaluru City
ಫೆ.28ಕ್ಕೆ ಎಫ್ಡಿಎ ಪರೀಕ್ಷೆ ಮರು ನಿಗದಿ

ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಮುಂದೂಡಿಕೆಯಾಗಿದ್ದ ಪ್ರಥಮ ದರ್ಜೆ ಸಹಾಯಕ(ಎಫ್ಡಿಎ) ಪರೀಕ್ಷೆಯನ್ನು ಫೆ.28 ರಂದು ನಡೆಸಲು ಕರ್ನಾಟಕ ಲೋಕಸೇವಾ ಆಯೋಗ ತೀರ್ಮಾನಿಸಿದೆ.
ಇಂದು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ ಆಯೋಗ ಫೆ.28 ಭಾನುವಾರ ನಡೆಸುವುದಾಗಿ ಅಧಿಕೃತವಾಗಿ ತಿಳಿಸಿದೆ.
ಕೆಪಿಎಸ್ಸಿ ಕಚೇರಿಯಿಂದಲೇ ಎಫ್ಡಿಎ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಜ.24ರಂದು ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆಯಾಗಿತ್ತು. ಖಚಿತ ಮಾಹಿತಿಯ ಆಧಾರದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ ಬಳಿಕ ಸೋರಿಕೆ ಪ್ರಕರಣ ಬೆಳಕಿಗೆ ಬಂದಿತ್ತು.
2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕ ಹುದ್ದೆಯ 1,114 ಪೋಸ್ಟ್ ಗಳಿಗೆ 3.74 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.
