ನಟ ಪುನೀತ್ ರಾಜ್‍ಕುಮಾರ್ ಕ್ರೇಜ್ ಸ್ಯಾಂಡಲ್‍ವುಡ್ ಅಭಿಮಾನಿಗಳಿಗೆ ಯಾವತ್ತು ಕಡಿಮೆ ಆಗುವುದಿಲ್ಲ. ಸಿನಿಮಾ ಮಾತ್ರವಲ್ಲದೆ ಸಾಮಾಜಿಕ ಕೆಲಸದ ಮೂಲಕವಾಗಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದ ಅಪ್ಪು, ಕುರಿತಾಗಿ ಈಗ ಮತ್ತೊಂದು ವಿಚಾರ ಹೆಚ್ಚಾಗಿ ಸದ್ದು ಮಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಪತ್ರಿಕೆ ಒಂದು ಹರಿದಾಡುತ್ತಿದೆ. ಅದರಲ್ಲಿ ನಟ ಪುನೀತ್ ರಾಜ್‍ಕುಮಾರ್ ಬಗ್ಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿದೆ.
ಬೆಂಗಳೂರಿನ ಖಾಸಗಿ ಶಾಲೆಯೊಂದರ ಪರೀಕ್ಷೆಯಲ್ಲಿ ಮಕ್ಕಳಿಗೆ ಪುನೀತ್ ರಾಜ್‍ಕುಮಾರ್ ಕುರಿತು ಪ್ರಶ್ನೆ ಕೇಳಲಾಗಿದೆ. ನಾಲ್ಕನೇ ತರಗತಿಯ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ವಿಷಯದ ಪರೀಕ್ಷೆ ನಡೆಸಲಾಗಿದ್ದು, ಅದರ ಪ್ರಶ್ನೆ ಪತ್ರಿಕೆಯಲ್ಲಿ ಪುನೀತ್ ರಾಜ್‍ಕುಮಾರ್ ಕುರಿತು ಪ್ರಶ್ನೆ ಕೇಳಲಾಗಿದೆ. ಅದರ ಫೋಟೋ ವೈರಲ್ ಆಗಿದೆ. ಕೆಳಗೆ ಕೊಟ್ಟಿರುವ ಗದ್ಯ ಭಾಗವನ್ನು ಓದಿ, ಪ್ರಶ್ನೆಗಳಿಗೆ ಉತ್ತರಿಸಿ ಎಂಬ ವಿಭಾಗದಲ್ಲಿ ಪುನೀತ್ ರಾಜ್‍ಕುಮಾರ್ ಅವರ ಕಿರು ಪರಿಚಯ ಮತ್ತು ಸಾಧನೆ ಬಗ್ಗೆ ಮಾಹಿತಿ ನೀಡಲಾಗಿದೆ. ಅದನ್ನು ಓದಿಕೊಂಡು, ಮುಂದಿನ ಪ್ರಶ್ನೆಗಳಿಗೆ ವಿದ್ಯಾರ್ಥಿಗಳು ಉತ್ತರ ಬರೆಯಬೇಕು. ಇದನ್ನೂ ಓದಿ: ಡ್ಯಾನ್ಸ್ ಮಾಸ್ಟರ್‌ಗೆ ದುಬಾರಿ ಗಿಫ್ಟ್ ಕೊಟ್ಟ ಕಿಚ್ಚ
ಮಕ್ಕಳಿಗೆ ಪುನೀತ್ ಕುರಿತು ತಿಳಿಸಲು ಶಾಲೆಯವರು ಮಾಡಿರುವ ಪ್ರಯತ್ನಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಶಾಲೆಯ ಪಠ್ಯದಲ್ಲಿ ಪುನೀತ್ ರಾಜ್‍ಕುಮಾರ್ ಅವರ ಸಾಧನೆ ಮತ್ತು ಜನಪರ ಕಾರ್ಯಗಳ ಬಗ್ಗೆ ಪಾಠ ಅಳವಡಿಸಬೇಕು ಎಂಬ ಅಭಿಪ್ರಾಯ ಕೂಡ ಅನೇಕರಿಂದ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಸಿನಿಜರ್ನಿಯನ್ನ ಕೊನೆಗೊಳಿಸುತ್ತಾರಾ ನಾಟ್ಯಸುಂದರಿ ಸಾಯಿ ಪಲ್ಲವಿ?
ಪರೀಕ್ಷೆಯಲ್ಲಿ ಕೇಳಿರೋ ಪ್ರಶ್ನೆಗಳು:
– ಪುನೀತ್ ರಾಜ್‍ಕುಮಾರ್ ಅವ್ರನ್ನ ಅಭಿಮಾನಿಗಳು ಏನೆಂದು ಕರೆಯುತ್ತಿದ್ದರು..?
– ಪುನೀತ್ ರಾಜ್‍ಕುಮಾರ್ ಯಾವಾಗ ಜನಿಸಿದರು.?
– ಪುನೀತ್ ರಾಜ್‍ಕುಮಾರ್ ಅವರ ತಂದೆಯ ಹೆಸರೇನು.?
ಬಿಟ್ಟ ಸ್ಥಳ ತುಂಬಿ
– ಪುನೀತ್ ರಾಜ್‍ಕುಮಾರ್ ————— ಎಂದೇ ಖ್ಯಾತರಾಗಿದ್ದರು
– ಪುನೀತ್ ರಾಜ್‍ಕುಮಾರ್ ಅವರ ತಾಯಿಯ ಹೆಸರೇನು……?
ಪರೀಕ್ಷೆಯಲ್ಲಿ ಪುನೀತ್ ರಾಜ್‍ಕುಮಾರ್ ಕುರಿತಾದ ಪ್ರಶ್ನೆ ಪತ್ರಿಕೆ ವಿತರಣೆಯಾಗುತ್ತಿದ್ದಂತೆ ಅದರ ಫೋಟೋ ವೈರಲ್ ಆಗಿದೆ. ಅಪ್ಪು ಅಭಿಮಾನಿಗಳು ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ.