Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 20 ದಿನಗಳ ಕಾಲ ಅಧಿವೇಶನ ನಡೆಸಬೇಕು – ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ದೀರ್ಘ ಚರ್ಚೆಯಾಗಲಿ: ಆರ್‌.ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 20 ದಿನಗಳ ಕಾಲ ಅಧಿವೇಶನ ನಡೆಸಬೇಕು – ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ದೀರ್ಘ ಚರ್ಚೆಯಾಗಲಿ: ಆರ್‌.ಅಶೋಕ್

Bengaluru City

20 ದಿನಗಳ ಕಾಲ ಅಧಿವೇಶನ ನಡೆಸಬೇಕು – ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ದೀರ್ಘ ಚರ್ಚೆಯಾಗಲಿ: ಆರ್‌.ಅಶೋಕ್

Public TV
Last updated: November 29, 2025 5:51 pm
Public TV
Share
3 Min Read
R Ashok 3
SHARE

– ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಜಗಳ ಬಿಟ್ಟು ಬೇರೇನೂ ಆಗುವುದಿಲ್ಲ ಎಂದ ವಿಪಕ್ಷ ನಾಯಕ

ಬೆಂಗಳೂರು: ಈ ಬಾರಿಯ ಅಧಿವೇಶನವನ್ನು 8 ದಿನಗಳ ಬದಲು 20 ದಿನಗಳ ಕಾಲ ನಡೆಸಬೇಕು, ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.

ಅಧಿವೇಶನ ಸಂಬಂಧ ನಡೆದ ಬಿಜೆಪಿ-ಜೆಡಿಎಸ್‌ ಸಮನ್ವಯ ಸಮಿತಿ ಸಭೆ ಬಳಿಕ, ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಿಜೆಪಿ ಮತ್ತು ಜೆಡಿಎಸ್‌ ಒಂದಾಗಿ ಕೆಲಸ ಮಾಡುತ್ತಿದ್ದೇವೆ. ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ, ಕಾಲ್ತುಳಿತ ಪ್ರಕರಣ ಸೇರಿದಂತೆ ಹಲವಾರು ಹೋರಾಟಗಳಲ್ಲಿ ಒಂದಾಗಿ ಕೆಲಸ ಮಾಡಿದ್ದೇವೆ. ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಎರಡೂ ಪಕ್ಷಗಳು ಕಿವಿ ಹಿಂಡುವ ಕೆಲಸ ಮಾಡಿವೆ. ಈಗ ಬೆಳಗಾವಿ ಅಧಿವೇಶನದಲ್ಲಿ ಯಾವೆಲ್ಲ ವಿಷಯಗಳನ್ನು ಪ್ರಸ್ತಾಪಿಸಬೇಕೆಂದು ಚರ್ಚಿಸಲಾಗಿದೆ. ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಲಹೆಗಳನ್ನು ಪಡೆಯಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಈ ಡ್ರಾಮಾ 2-3 ತಿಂಗಳು ಇರುತ್ತೆ, ಯಾಕಂದ್ರೆ ಸಿದ್ದರಾಮಯ್ಯ ದೇವರಾಜ ಅರಸು ರೆಕಾರ್ಡ್ ಬ್ರೇಕ್ ಮಾಡ್ಬೇಕು ಅಂತಿದ್ದಾರೆ – ಶೈಲೇಂದ್ರ ಬೆಲ್ದಾಳೆ

ಈ ಬಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚರ್ಚೆಯಾಗಬೇಕಿದೆ. ಆದರೆ, ಕೇವಲ ಬೆಂಗಳೂರು ಸಂಬಂಧಿತ ಮಸೂದೆಗಳನ್ನು ತರುತ್ತಿದ್ದಾರೆ. ಹೀಗಾದರೆ ಉತ್ತರ ಕರ್ನಾಟಕದಲ್ಲಿ ಅಧಿವೇಶನ ನಡೆಸುವ ಅಗತ್ಯವಿಲ್ಲ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕಿದೆ. 8 ದಿನದ ಬದಲು 20 ದಿನಗಳ ಕಾಲ ಅಧಿವೇಶನ ನಡೆಸಬೇಕೆಂದು ಒತ್ತಾಯಿಸುತ್ತಿದ್ದೇವೆ. ಕಳೆದ ಸಲ ಕೊನೆಯ ಎರಡು-ಮೂರು ದಿನ ಉತ್ತರ ಕರ್ನಾಟಕದ ಬಗ್ಗೆ ಚರ್ಚೆಗೆ ಅವಕಾಶ ನೀಡಲಾಗಿತ್ತು. ನಂತರ ಸಿಎಂ ಸಿದ್ದರಾಮಯ್ಯ ಒಂದಷ್ಟು ಭರವಸೆಗಳನ್ನು ನೀಡಿದ್ದರು. ಅದನ್ನು ಇಂದಿಗೂ ಈಡೇರಿಸಿಲ್ಲ ಎಂದರು.

ತುಂಗಭದ್ರಾ ಜಲಾಶಯದ ಗೇಟ್‌ ದುರಸ್ತಿಯ 12 ಕೋಟಿ ರೂ. ಬಿಲ್‌ ಇನ್ನೂ ಪಾವತಿಸಿಲ್ಲ. ಇದರಿಂದಾಗಿ ಗುತ್ತಿಗೆದಾರರು ಕೆಲಸ ಸ್ಥಗಿತಗೊಳಿಸಿದ್ದಾರೆ. ಒಟ್ಟು 32 ಗೇಟ್‌ಗಳನ್ನು ಅಳವಡಿಸಬೇಕಿದೆ. ಎರಡನೇ ಬೆಳೆಗೆ ರೈತರಿಗೆ ನೀರು ದೊರೆಯುತ್ತಿಲ್ಲ. ಎಕರೆಗೆ 25,000 ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಲಾಗಿದೆ. ಈಗಿನ ಸನ್ನಿವೇಶ ನೋಡಿದರೆ ಮುಂದಿನ ವರ್ಷಕ್ಕೂ ನೀರು ಸಿಗುವುದಿಲ್ಲ ಎನ್ನಿಸಿದೆ. ಈ ಸರ್ಕಾರ ಉತ್ತರ ಕರ್ನಾಟಕದ ರೈತರಿಗೆ ಮೋಸ ಮಾಡಿದೆ. ಜೊತೆಗೆ ಕಬ್ಬು ಬೆಳೆಗಾರರ ಸಮಸ್ಯೆ ಆಲಿಸಿಲ್ಲ. ಮೆಕ್ಕೆಜೋಳದ ಖರೀದಿ ಕೇಂದ್ರ ಆರಂಭಿಸಿಲ್ಲ. ಈ ಎಲ್ಲ ವಿಷಯಗಳನ್ನು ಮೊದಲಿಗೆ ಚರ್ಚೆ ಮಾಡಬೇಕಿದೆ. ಈ ಬಗ್ಗೆ ಎರಡೂ ಸದನದಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.

ಬಡವರ ಬಿಪಿಎಲ್‌ ಕಾರ್ಡುಗಳನ್ನು ರದ್ದು ಮಾಡಲಾಗಿದೆ. ಈ ಮೂಲಕ ಗ್ಯಾರಂಟಿಗಳನ್ನು ತಪ್ಪಿಸಬಹುದು ಎಂದು ಸರ್ಕಾರ ಅಂದುಕೊಂಡಿದೆ. ಬಿಜೆಪಿ ಇದ್ದಾಗ ಬಗರ್‌ಹುಕುಂ ಸಾಗುವಳಿಗೆ ಮಂಜೂರಾತಿ ನೀಡಲಾಗಿತ್ತು. ಕಾಂಗ್ರೆಸ್‌ ಬಂದ ನಂತರ ಈ ಕೆಲಸ ಆಗಿಲ್ಲ. ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಜೈಲುಗಳಲ್ಲಿ ಮದ್ಯ ತಯಾರಿ ಕೇಂದ್ರ ಆರಂಭವಾಗಿದೆ. ಭಯೋತ್ಪಾದಕ ಕೈದಿಗಳ ಕೈಗೆ ಮೊಬೈಲ್‌ ಬಂದಿದೆ. ಆದರೆ, ಗೃಹಸಚಿವರು ಈ ವೀಡಿಯೋ ಸೋರಿಕೆ ಮಾಡಿದವರನ್ನು ಪತ್ತೆ ಮಾಡಲು ಪ್ರಯತ್ನಿಸಿದ್ದಾರೆ. ಇಷ್ಟು ದಿನ ಕಳ್ಳರು ದರೋಡೆ ಮಾಡುತ್ತಿದ್ದರೆ, ಈಗ ಪೊಲೀಸರೇ ದರೋಡೆಗೆ ಇಳಿದಿದ್ದಾರೆ. ಹಗಲಿನಲ್ಲೇ ರಾಜಧಾನಿಯಲ್ಲಿ 7 ಕೋಟಿ ರೂ. ದರೋಡೆಯಾಗಿದೆ ಎಂದರು. ಇದನ್ನೂ ಓದಿ: ನಾಯಕತ್ವ ವಿಚಾರದಲ್ಲಿ ಹೈಕಮಾಂಡ್ ಹೇಳಿದಂತೆ ನಾನು, ಸಿಎಂ ನಡೆಯುತ್ತೇವೆ: ಡಿಕೆಶಿ

ಸರ್ಕಾರಿ ಶಾಲೆಗಳ ದುಸ್ಥಿತಿ, ಶಿಕ್ಷಕರ ನೇಮಕ, ಬೆಂಗಳೂರಿನಲ್ಲಿ ಗುಂಡಿ ರಸ್ತೆಗಳಿಂದಾಗಿ ಜನರ ಮರಣ ಮೊದಲಾದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗುವುದು. ಪೊಲೀಸ್‌ ಠಾಣೆಗಳಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ. ಈ ಬಗ್ಗೆ ಸರ್ಕಾರಕ್ಕೆ ಚಾಟಿ ಬೀಸುತ್ತೇವೆ ಎಂದು ತಿಳಿಸಿದರು.

ಸಿಎಂ ಯಾರೆಂದು ಗೊತ್ತಿಲ್ಲ
ಸಿಎಂ ಯಾರೆಂದು ಗೊತ್ತಾಗದೆ ಇಬ್ಬರೂ ನಾಯಕರ ನಡುವೆ ಕಾದಾಟ ಜೋರಾಗಿದೆ. ಸಿದ್ದರಾಮಯ್ಯ ಎಂದರೆ ಮಾತು ತಪ್ಪಿದವರು ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಇದರಿಂದಾಗಿ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ. ಸರ್ಕಾರದಲ್ಲಿ ಎಲ್ಲರೂ ಕೆಲಸ ಮಾಡುವುದನ್ನು ಬಿಟ್ಟು ಸಿಎಂ ಯಾರೆಂದು ಚರ್ಚಿಸುತ್ತಿದ್ದಾರೆ. ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಜಗಳ ಬಿಟ್ಟು ಬೇರೇನೂ ಆಗುವುದಿಲ್ಲ. ಅಧಿಕಾರ ಹಂಚಿಕೆ ಒಪ್ಪಂದದ ಕುರಿತು ಡಿ.ಕೆ.ಶಿವಕುಮಾರ್‌ ನೇರವಾಗಿ ಹೇಳಿದ್ದು, ಈ ಬಗ್ಗೆ ದುರ್ಬಲ ಹೈಕಮಾಂಡ್‌ ಪ್ರತಿಕ್ರಿಯೆ ನೀಡುತ್ತಿಲ್ಲ. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ವಿದೇಶಕ್ಕೆ ಪಲಾಯನ ಮಾಡಿದ್ದಾರೆ ಎಂದರು.

TAGGED:r ashokwinter sessionಆರ್‌.ಅಶೋಕ್‌ಚಳಿಗಾಲದ ಅಧಿವೇಶನ
Share This Article
Facebook Whatsapp Whatsapp Telegram

Cinema news

sudeep 1 1
ಇಷ್ಟು ದಿನ ತಾಳ್ಮೆಯಿಂದ ಇದ್ದಿದ್ದು ಸಾಕು – ಕೆಣಕಿದ್ರೆ ಅವರದ್ದೇ ಭಾಷೆಯಲ್ಲಿ ಉತ್ತರ ಕೊಡಿ; ಗುಡುಗಿದ ಕಿಚ್ಚ
Cinema Dharwad Latest Sandalwood Top Stories
Nora Fatehi
ಸಾವು ರಪ್ಪನೆ ಕಣ್ಮುಂದೆ ಬಂದು ಹೋಯ್ತು – ಕಾರು ಅಪಘಾತದ ಬಳಿಕ ನೋರಾ ಫತೇಹಿ ರಿಯಾಕ್ಷನ್‌
Bollywood Cinema Latest Main Post
nora fatehi gets into an accident suffered a concussion after a drunk driver rammed into her car
ನೋರಾ ಫತೇಹಿ ಕಾರಿಗೆ ಡಿಕ್ಕಿ – ಅಪಾಯದಿಂದ ನಟಿ ಪಾರು
Cinema Latest South cinema
Rashmika Mandanna and Vijay Deverakondas Wedding AI Photos
ಶ್ರೀವಲ್ಲಿ ಮದ್ವೇಲಿ ಪ್ರಭಾಸ್, ಪ್ರಿನ್ಸ್; ವೈರಲ್ ಹಿಂದಿನ ಅಸಲಿಯತ್ತೇನು?
Cinema Latest South cinema Top Stories

You Might Also Like

Infosys Sudhamurthy Hassan Sakleshpuraswamy Temple
Districts

ಸಕಲೇಶಪುರಸ್ವಾಮಿಯ ದರ್ಶನ ಪಡೆದ ಸುಧಾಮೂರ್ತಿ

Public TV
By Public TV
17 minutes ago
DK Shivakumar 11
Bengaluru City

ರಾಜಣ್ಣ ನನಗೂ ಆಪ್ತರು, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದೇ ನಾನು: ಡಿಕೆಶಿ

Public TV
By Public TV
23 minutes ago
Byrati Basavaraj 2
Bengaluru City

ಬಂಧನ ಭೀತಿಯಿಂದ ರಾಜ್ಯದಿಂದ ರಾಜ್ಯಕ್ಕೆ ಬೈರತಿ ಅಜ್ಞಾತ – ಮಾಜಿ ಸಚಿವನಿಗಾಗಿ ಸಿಐಡಿಯ 3 ತಂಡ ತೀವ್ರ ತಲಾಶ್

Public TV
By Public TV
44 minutes ago
TRAIN 1
Latest

ಡಿ.26 ರಿಂದ ರೈಲು ಪ್ರಯಾಣ ದರ ಏರಿಕೆ; ಎಸಿ – ನಾನ್‌ ಎಸಿಗೆ ಎಷ್ಟು ಏರಿಕೆ?

Public TV
By Public TV
2 hours ago
Mallikarjun Kharge 1
Districts

ರಾಜ್ಯದಲ್ಲಿ ನಾಯಕತ್ವ ಗೊಂದಲ ಹೈಕಮಾಂಡ್‌ ಸೃಷ್ಟಿಸಿಲ್ಲ, ಅವ್ರೇ ಮಾಡಿಕೊಂಡಿದ್ದಾರೆ: ಖರ್ಗೆ ಗರಂ

Public TV
By Public TV
2 hours ago
Gruhalakshmi Scheme 1
Bengaluru City

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್‌ – ನಾಳೆಯಿಂದಲೇ ಬ್ಯಾಂಕ್ ಖಾತೆಗೆ ʻಗೃಹಲಕ್ಷ್ಮಿʼ ಹಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?