– ನಗರ ನಕ್ಸಲರ ಗ್ಯಾಂಗ್ ಧರ್ಮಸ್ಥಳ ಪ್ರಕರಣದ ಹಿಂದಿದೆ; ವಿಪಕ್ಷ ನಾಯಕ
ಹುಬ್ಬಳ್ಳಿ: ಮಸೀದಿ ಬಗ್ಗೆ ಈ ರೀತಿ ಆರೋಪ ಬಂದಿದ್ರೆ, ನೀವು ತನಿಖೆಗೆ ಕೊಡ್ತಿದ್ರಾ? ಎದೆ ಮುಟ್ಟಿಕೊಂಡು ಹೇಳಿ ಎಂದು ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ಸವಾಲ್ ಹಾಕಿದ್ದಾರೆ.
ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ (Siddaramaiah) ಸರ್ಕಾರದಲ್ಲಿ ನಕ್ಸಲರು ಕಾಡು ಬಿಟ್ಟು ನಾಡಿಗೆ ಬಂದಿದ್ದಾರೆ. ದಂಡುಪಾಳ್ಯ ರೀತಿ ನಗರ ನಕ್ಸಲರ ಗ್ಯಾಂಗ್ ಧರ್ಮಸ್ಥಳ ಪ್ರಕರಣದ (Dharmasthala Case) ಹಿಂದಿದೆ. ಕಾಂಗ್ರೆಸ್‌ನಲ್ಲಿ ಹಿಂದೂ ವಿರೋಧಿ ಮತ್ತು ಹಿಂದೂ ಪರ ಎಂಬ ಎರಡು ಗ್ಯಾಂಗ್ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದರ್ಶನ್ ಕಷ್ಟಪಟ್ಟು ಮೇಲೆ ಬಂದಿದ್ರು, ಆದ್ರೆ ಜೀವನ ಹಾಳು ಮಾಡಿಕೊಂಡ್ರು: ರಮ್ಯಾ ಸಾಫ್ಟ್ ಕಾರ್ನರ್
ರಾಜ್ಯದಲ್ಲಿ ಪದೇ ಪದೇ ಹಿಂದೂ ಧರ್ಮಕ್ಕೆ ಅವಮಾನ ಮಾಡೋ ಕೆಲಸ ಆಗುತ್ತಿದೆ. ಜೆಸಿಬಿಯನ್ನು ಧರ್ಮಸ್ಥಳ ಹೆಬ್ಬಾಗಿಲಿಗೆ ನುಗ್ಗಿಸ್ತೇನೆ ಅಂತಿದ್ದಾರೆ. ಮತಾಂದರು ಮತ್ತು ನಗರ ನಕ್ಸಲರು ಬಂದಿದ್ದಾರೆ. ಟಿಪ್ಪು ಪ್ರೇರಿತ ಗ್ಯಾಂಗ್‌ಗೆ ಸಿದ್ದರಾಮಯ್ಯ ಬೆಂಬಲ ನೀಡ್ತಿದ್ದಾರೆ. ಸಮೀರ್, ಪಿಎಫ್‌ಐ, ಎಸ್‌ಡಿಪಿ ಕಾರ್ಯಕರ್ತರಿಂದಲೇ ಸಿಎಂ ಆಫೀಸ್ ಸುತ್ತುವರಿದಿದೆ ಎಂದಿದ್ದಾರೆ. ಇದನ್ನೂ ಓದಿ: ವಿಷ್ಣು ಸ್ಮಾರಕ ನಿರ್ಮಿಸೋಕೆ ನಿಮ್ಮ ಜೊತೆ ನಾವಿದ್ದೇವೆ – ಅಭಿಮಾನಿಗಳೊಂದಿಗೆ ನಿಂತ ನಟ ಅನಿರುದ್ಧ
ಷಡ್ಯಂತ್ರ ಇದೆ ಅಂತ ಡಿಕೆ ಶಿವಕುಮಾರ್ ಹೇಳ್ತಿದ್ದಾರೆ. ಆದ್ರೆ ಸಿದ್ದರಾಮಯ್ಯನವರ ಬಾಯಲ್ಲಿ ಒಂದು ಮಾತು ಬಂದಿದ್ಯಾ? ಡಿ.ಕೆ ಶಿವಕುಮಾರ್ (DK Shivakumar) ಮ್ಯಾನೇಜ್ ಮಾಡ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಈ ಬಗ್ಗೆ ಒಡಕಿದೆ. ಪೊಲೀಸರೇ ಕೋರ್ಟ್ಗೆ ಅರ್ಜಿ ಹಾಕಿದ್ದಾರೆ. ಎಲ್ಲಾ ಕೇಸ್‌ಗೂ ಇದೇ ರೀತಿ ಮಾಡ್ತಾರಾ? ಒಂದೇ ಸಲ ನೂರು ಅಡಿ ಹೋಗಿ ತನಿಖೆ ಮಾಡಬೇಡಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿಗರ ರ‍್ಯಾಲಿ ಧರ್ಮಸ್ಥಳದ ಪರ, ನ್ಯಾಯದ ಪರ ಅಲ್ಲ – ಡಿಕೆಶಿ
ಧರ್ಮಸ್ಥಳ ವಿಚಾರದಲ್ಲಿ ನಾವು ರಾಜಕಾರಣ ಮಾಡಿಲ್ಲ. ಈ ಪ್ರಕರಣದಲ್ಲಿ ರಾಜಕಾರಣ ಮಾಡಿದ್ದು ಕಾಂಗ್ರೆಸ್, ಇದರ ಹಿಂದೆ ದೊಡ್ಡ ಖತರ್ನಾಕ್ ಗ್ಯಾಂಗ್ ಇದೆ. ಯೂಟ್ಯೂಬ್ ಚಾನಲ್ ಮಾಡಲು ಎಲ್ಲಿಂದ ದುಡ್ಡು ಬಂದಿದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಹಿಂದೂ ಧರ್ಮ ಬಿಜೆಪಿ ಸ್ವತ್ತಲ್ಲ ಅನ್ನೋ ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಫಸ್ಟ್ ನಿಮ್ಮ ಸ್ವತ್ತು ಅಂತ ಡಿಕೆಶಿ ಹೇಳಲಿ. ಮಸೀದಿ ಬಗ್ಗೆ ಈ ರೀತಿ ಆರೋಪ ಬಂದಿದ್ರೆ, ನೀವು ತನಿಖೆಗೆ ಕೊಡ್ತಿದ್ರಾ? ಎದೆ ಮುಟ್ಟಿಕೊಂಡು ಹೇಳಿ ಎಂದು ಸವಾಲ್ ಹಾಕಿದರು.