Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇರಳದಲ್ಲಿ ಕನ್ನಡ ಭಾಷೆಗೆ ಧಕ್ಕೆ, ಇದು ಮೊದಲೇ ಆಗಿರುವ ಮ್ಯಾಚ್‌ ಫಿಕ್ಸಿಂಗ್‌: ಆರ್‌.ಅಶೋಕ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೇರಳದಲ್ಲಿ ಕನ್ನಡ ಭಾಷೆಗೆ ಧಕ್ಕೆ, ಇದು ಮೊದಲೇ ಆಗಿರುವ ಮ್ಯಾಚ್‌ ಫಿಕ್ಸಿಂಗ್‌: ಆರ್‌.ಅಶೋಕ್‌

Bengaluru City

ಕೇರಳದಲ್ಲಿ ಕನ್ನಡ ಭಾಷೆಗೆ ಧಕ್ಕೆ, ಇದು ಮೊದಲೇ ಆಗಿರುವ ಮ್ಯಾಚ್‌ ಫಿಕ್ಸಿಂಗ್‌: ಆರ್‌.ಅಶೋಕ್‌

Public TV
Last updated: January 10, 2026 8:21 pm
Public TV
Share
2 Min Read
R Ashok
SHARE

– ದ್ವೇಷಭಾಷಣ ಪ್ರತಿಬಂಧಕ ಮಸೂದೆ ಬಗ್ಗೆ ರಾಜ್ಯಪಾಲರಿಗೆ ಮನವರಿಕೆ ಮಾಡ್ತೀವಿ ಎಂದ ವಿಪಕ್ಷ ನಾಯಕ

ಬೆಂಗಳೂರು: ಕೇರಳದಲ್ಲಿ (Kerala) ಕನ್ನಡ ಭಾಷೆಗೆ ಧಕ್ಕೆ, ಇದು ಮೊದಲೇ ಆಗಿರುವ ಮ್ಯಾಚ್‌ ಫಿಕ್ಸಿಂಗ್‌ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ (R.Ashok) ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದ ಕನ್ನಡ ಶಾಲೆಗಳಲ್ಲಿ ಕನ್ನಡಕ್ಕೆ (Kannada) ಆದ್ಯತೆ ನೀಡುತ್ತಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಸಿಎಂ ಸಿದ್ದರಾಮಯ್ಯನವರ ಆಪ್ತ ಪಾಲುದಾರರಾದ ಮುಖಂಡರೇ ಇದನ್ನು ಮಾಡಿದ್ದಾರೆ. ಇದರಲ್ಲಿ ಸಿಎಂ, ಡಿಸಿಎಂ ಕೈವಾಡ ಇದ್ದು, ಈ ಎಲ್ಲ ಬೆಳವಣಿಗೆಗಳು ಅವರಿಗೆ ಮೊದಲೇ ಗೊತ್ತಿತ್ತು. ನೀನು ಹೊಡೆದಂತೆ ಮಾಡು, ನಾನು ಅತ್ತಂತೆ ಮಾಡುತ್ತೇನೆ ಎಂದು ಮೊದಲೇ ತೀರ್ಮಾನಿಸಿಕೊಂಡಿದ್ದರು. ಇವರ ಬ್ರದರ್‌ಗಳು ಎಲ್ಲವನ್ನೂ ಮೊದಲೇ ಚರ್ಚೆ ಮಾಡಿಕೊಂಡು ಮ್ಯಾಚ್‌ ಫಿಕ್ಸಿಂಗ್‌ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನಾವು ಯಾವುದೇ ಭಾಷೆ ಹೇರಿಕೆ ಮಾಡಿಲ್ಲ: ಕರ್ನಾಟಕ ಆರೋಪಕ್ಕೆ ಕೇರಳ ಸಿಎಂ ಸ್ಪಷ್ಟನೆ

ಮುಖ್ಯಮಂತ್ರಿಗಳು ಕೇರಳಕ್ಕೆ ಪತ್ರ ಬರೆದಿರುವುದು ಕೂಡ ಮೊದಲೇ ಹೊಂದಾಣಿಕೆ ಮಾಡಿಕೊಂಡಿರುವುದರ ಭಾಗ. ಕೇರಳ ಸಿಎಂ ಬುಲ್ಡೋಜರ್‌ ಎಂದಾಗ ಅದಕ್ಕೆ ಸಿಎಂ ಸಿದ್ದರಾಮಯ್ಯ ಏನೂ ಹೇಳಲಿಲ್ಲ. ಇದು ಕನ್ನಡಕ್ಕೆ ದ್ರೋಹ ಬಗೆದ ಸರ್ಕಾರ. ವೇದಿಕೆಯಲ್ಲಿ ಕೇರಳ ಮುಖ್ಯಮಂತ್ರಿಯನ್ನು ಭೇಟಿ ಮಾಡಿದಾಗಲೇ ಈ ಬಗ್ಗೆ ಚರ್ಚೆ ಮಾಡಬೇಕಿತ್ತು. ಎಲ್ಲದಕ್ಕೂ ಮೋದಿಯಿಂದ ಅನ್ಯಾಯ ಎನ್ನುತ್ತಾರೆ. ಈಗ ಇದನ್ನು ಏಕೆ ಅನ್ಯಾಯ ಎಂದು ಹೇಳುತ್ತಿಲ್ಲ? ಸಿಎಂ ಸಿದ್ದರಾಮಯ್ಯ ಕನ್ನಡಕ್ಕೆ ಮಾರಕವಾದ ನಡೆ ಇಟ್ಟಿದ್ದಾರೆ. ಇದರ ವಿರುದ್ಧ ತೀವ್ರ ಪ್ರತಿಭಟನೆ ಮಾಡಲಿ. ಇಲ್ಲವಾದರೆ ಇದರಲ್ಲಿ ರಾಜ್ಯದ ಕಾಂಗ್ರೆಸ್‌ ನಾಯಕರು ಶಾಮೀಲಾಗಿದ್ದಾರೆ ಎಂದೇ ಭಾವಿಸುತ್ತೇವೆ ಎಂದರು.

ದ್ವೇಷಭಾಷಣ ಪ್ರತಿಬಂಧಕ ಮಸೂದೆ ವಾಕ್‌ ಸ್ವಾತಂತ್ರ್ಯವನ್ನು ಕಸಿಯಲಿದೆ. ಈ ಕುರಿತು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡುತ್ತೇವೆ. ದ್ವೇಷಭಾಷಣ ಪ್ರತಿಬಂಧಕ ಮಸೂದೆಯ ಬಗ್ಗೆ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡಬೇಕಿತ್ತು. ಇಂತಹ ಮಸೂದೆ ತರುವಾಗ ಅದು ಜನರ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂದು ನೋಡಬೇಕಾಗುತ್ತದೆ. ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ರಚಿಸಿದ ಸಂವಿಧಾನದಲ್ಲಿ ಮಸೂದೆ ಬಗ್ಗೆ ಚರ್ಚೆ ನಡೆಸಲು ಅವಕಾಶವಿದೆ. ವಿಧಾನಸಭೆ ಇರುವುದು ಮಸೂದೆ ಮಂಡನೆ ಹಾಗೂ ಚರ್ಚೆಗೆ ಹೊರತು ಗಲಾಟೆ ಮಾಡುವುದಕ್ಕಲ್ಲ. ಆದರೆ, ಕಾಂಗ್ರೆಸ್‌ ಸರ್ಕಾರ ಇದರ ಚರ್ಚೆಗೆ ಅವಕಾಶ ನೀಡಲಿಲ್ಲ. ನಾನು ಮಸೂದೆಯ ಬಗ್ಗೆ ಚರ್ಚೆ ಮಾಡಲು ಮುಂದಾದಾಗ ಕಾಂಗ್ರೆಸ್‌ ಶಾಸಕರು, ಸಚಿವರು ಭಯಗೊಂಡು ತರಾತುರಿಯಲ್ಲಿ ಮಸೂದೆ ಮಂಡನೆ ಮಾಡಿದರು. ಈ ವಿಚಾರದಲ್ಲಿ ಸ್ಪೀಕರ್‌ ಯು.ಟಿ.ಖಾದರ್‌ ಅವರ ನಡೆಯೂ ನನಗೆ ಬೇಸರ ತಂದಿದೆ ಎಂದು ತಿಳಿಸಿದರು. ಇದನ್ನೂ ಓದಿ: ಯಾರು ಡ್ಯಾಡಿ? Daddy Is Home ಅಂದ್ರೆ ಏನು? – ಮೊದಲು ರಾಜೀನಾಮೆ ಕೊಡಲಿ: ಹೆಚ್‌ಡಿಕೆ ವಿರುದ್ಧ ಡಿಕೆಸು ಟಾಂಗ್

ಬಿಜೆಪಿಯಲ್ಲಿ 15 ಶಾಸಕರು ಈ ಬಗ್ಗೆ ಮಾತನಾಡುವುದಿತ್ತು. ಬಳಿಕ ಮಸೂದೆಯನ್ನು ಸದನ ಸಮಿತಿಗೆ ಒಪ್ಪಿಸಬೇಕೆಂದು ತೀರ್ಮಾನಿಸಿದ್ದೆವು. ಆದರೆ, ಏಕಾಏಕಿ ಮಸೂದೆ ಪಾಸ್‌ ಮಾಡಲಾಗಿದೆ. ಈಗ ಅದು ರಾಜ್ಯಪಾಲರ ಬಳಿಗೆ ಹೋಗಿದೆ. ಸೋಮವಾರ ನಾನು, ರಾಜ್ಯಾಧ್ಯಕ್ಷರು ಹಾಗೂ ಇತರ ಮುಖಂಡರು ರಾಜ್ಯಪಾಲರ ಬಳಿಗೆ ಹೋಗಿ ಈ ಬಗ್ಗೆ ಮನವರಿಕೆ ಮಾಡಿಕೊಡುತ್ತೇವೆ. ಇದು ಜನರ ಹಾಗೂ ಮಾಧ್ಯಮಗಳ ಸ್ವಾತಂತ್ರ್ಯ ಕಸಿಯುವ ಮಸೂದೆ. ತುರ್ತು ಪರಿಸ್ಥಿತಿ ತಂದು ವಾಕ್‌ ಸ್ವಾತಂತ್ರ್ಯ ಕಸಿದುಕೊಂಡಂತೆಯೇ ಇಲ್ಲಿ ಮಸೂದೆ ಮೂಲಕ ಸ್ವಾತಂತ್ರ್ಯ ಕಸಿಯಲಾಗುತ್ತಿದೆ. ನಮ್ಮ ಅಹವಾಲಿಗೆ ಸರ್ಕಾರ ಅವಕಾಶ ನೀಡುವುದಿಲ್ಲ. ಆದ್ದರಿಂದ ರಾಜ್ಯಪಾಲರ ಬಳಿಗೆ ಹೋಗುತ್ತಿದ್ದೇವೆ. ರಾಜ್ಯಪಾಲರು ಮೀಸಲಾತಿಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ಕೇಳಿದ್ದಾರೆ. ಯಾವುದೇ ಕಾನೂನು ತರುವಾಗ ಹೀಗೆಯೇ ಚರ್ಚೆ ಮಾಡಬೇಕಾಗುತ್ತದೆ ಎಂದರು.

TAGGED:karnatakakeralaMalayalam language Billr ashokಆರ್‌.ಅಶೋಕ್‌ಕರ್ನಾಟಕಕೇರಳಮಲೆಯಾಳಂ ಭಾಷಾ ಮಸೂದೆ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

ramanath rai team mangaluru
Dakshina Kannada

ಬ್ರಹ್ಮರಕೊಟ್ಲು ಟೋಲ್‌ಗೇಟ್‌ ಬಂದ್‌: ನಾಳೆ ಬೃಹತ್‌ ಜನಾಂದೋಲನ ನಡಿಗೆ

Public TV
By Public TV
48 minutes ago
pm modi 5
Latest

ಭಯದಲ್ಲಿ ಬದುಕಿದ್ದು ಸಾಕು.. ನಮಗಿನ್ನು ನಂಬಿಕೆ ಬೇಕು: ಬಂಗಾಳ ಜನತೆಗೆ ಮೋದಿ ಪತ್ರ

Public TV
By Public TV
1 hour ago
4 Of Mumbai Family Die Of Suspected Food Poisoning After Eating Biryani Watermelon
Crime

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
1 hour ago
Auto
Latest

ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ ಆದೇಶಕ್ಕೆ 6 ತಿಂಗಳ ಬ್ರೇಕ್ ಹಾಕಿದ `ಮಹಾ’ ಸರ್ಕಾರ

Public TV
By Public TV
2 hours ago
H.S Shivashankar
Davanagere

ಶ್ರೀಗಳನ್ನು ಎಳೆದು ಹೊರಗೆ ಹಾಕ್ತಾರಂತೆ, ತಾಕತ್‌ ಇದ್ರೆ ಮುಟ್ಟಿ – ಟ್ರಸ್ಟಿಗಳಿಗೆ ಹೆಚ್.ಎಸ್ ಶಿವಶಂಕರ್ ಎಚ್ಚರಿಕೆ

Public TV
By Public TV
2 hours ago
mangaluru cooker blast case auto driver
Dakshina Kannada

ಉಗ್ರ ಶಾರಿಕ್‌ಗೆ ಜೀವಾವಧಿ ಶಿಕ್ಷೆ ನೀಡಬೇಕಿತ್ತು: ಕುಕ್ಕರ್‌ ಬ್ಲಾಸ್ಟ್‌ನಿಂದ ಗಾಯಗೊಂಡಿದ್ದ ಆಟೋ ಚಾಲಕ ಮಾತು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?