– ಕೇಂದ್ರ ಸಚಿವರಿಗೆ ಹಾಗೂ ಜಂಟಿ ಸಂಸದೀಯ ಸಮಿತಿಗೆ ಪತ್ರ
ಬೆಂಗಳೂರು: ಕರ್ನಾಟಕದ ವಕ್ಫ್ ಮಂಡಳಿಗೆ (Karnataka Waqf Board) ಸಂಬಂಧಿಸಿದ ಎಲ್ಲಾ ಬಗೆಯ ಜಮೀನು ನೋಂದಣಿಯನ್ನು ಸ್ಥಗಿತಗೊಳಿಸಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಬೇಕೆಂದು ಕೋರಿ ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಅವರು ಕೇಂದ್ರ ಸಚಿವರಿಗೆ ಹಾಗೂ ವಕ್ಫ್ ಜಂಟಿ ಸಮಿತಿಗೆ ಪತ್ರ ಬರೆದಿದ್ದಾರೆ.
Advertisement
ರೈತರ ಜಮೀನು (Farmers Land) ಹಾಗೂ ಹಿಂದೂ ಸಂಸ್ಥೆಗಳಿಗೆ ಸಂಬಂಧಿಸಿದ ಜಮೀನುಗಳನ್ನು ವಕ್ಫ್ ಮಂಡಳಿ ಕಬಳಿಸುತ್ತಿರುವ ಕುರಿತು ಆತಂಕ ವ್ಯಕ್ತಪಡಿಸಿರುವ ಅವರು, ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ (JP Nadda) ಹಾಗೂ ವಕ್ಫ್ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ (Jagdambika Pal) ಅವರಿಗೆ ಪತ್ರ ಬರೆದಿದ್ದಾರೆ.
Advertisement
ವಕ್ಫ್ ಮಂಡಳಿಯಿಂದ ರಾಜ್ಯದ ರೈತರು, ಮಠ ಮಾನ್ಯಗಳು ಹಾಗು ಜನ ಸಾಮಾನ್ಯರ ಆಸ್ತಿ-ಪಾಸ್ತಿ ಕಬಳಿಕೆಗೆ ನಡೆಯುತ್ತಿರುವ ಹುನ್ನಾರದ ಕುರಿತಂತೆ ಮಾನ್ಯ ಕೇಂದ್ರ ಗೃಹ ಸಚಿವರಾದ ಶ್ರೀ @AmitShah ಮತ್ತು ವಕ್ಫ್ (ತಿದ್ದುಪಡಿ) ಮಸೂದೆ 2024 ರ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಶ್ರೀ ಜಗದಾಂಬಿಕಾ ಪಾಲ್ ಅವರಿಗೆ ಪತ್ರ ಬರೆದು ರಾಜ್ಯದಲ್ಲಿ ವಕ್ಫ್ ಮಂಡಳಿಗೆ… pic.twitter.com/78g2kQmbX9
— R. Ashoka (@RAshokaBJP) November 4, 2024
Advertisement
ಕೇಂದ್ರ ಸರ್ಕಾರದಲ್ಲಿ ವಕ್ಫ್ ತಿದ್ದುಪಡಿ ಮಸೂದೆ ತರಲು ಜಂಟಿ ಸಂಸದೀಯ ಸಮಿತಿ ರಚಿಸಿದ್ದು, ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ದಕ್ಷತೆ ಹಾಗೂ ಪಾರದರ್ಶಕತೆ ತರಲು ಈ ಸಮಿತಿ ಶ್ರಮಿಸುತ್ತಿದೆ. ಆದರೆ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಮತ್ತು ವಕ್ಫ್ ಮಂಡಳಿಯು ಕಂದಾಯ ದಾಖಲೆಗಳನ್ನು ತಿದ್ದುವ ಹಾಗೂ ರೈತರ ಜಮೀನುಗಳ ಮಾಲೀಕತ್ವ ವರ್ಗಾಯಿಸಿಕೊಳ್ಳುವ ಪ್ರಯತ್ನ ಆರಂಭವಾಗಿದೆ. ಈ ರೀತಿ ತರಾತುರಿಯಲ್ಲಿ ಜಮೀನುಗಳನ್ನು ವಕ್ಫ್ ಮಂಡಳಿ ನೋಂದಾಯಿಸಿಕೊಳ್ಳುತ್ತಿರುವ ಪರಿಣಾಮ ಸಾವಿರಾರು ಬಡವರು ಹಾಗೂ ರೈತರು ವಂಶಪಾರಂಪರ್ಯವಾಗಿ ಬಂದ ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಆರ್.ಅಶೋಕ್ ಪತ್ರದಲ್ಲಿ ವಿವರಿಸಿದ್ದಾರೆ. ಇದನ್ನೂ ಓದಿ: ಜಮೀರ್ ಇಸ್ಲಾಂ ಧರ್ಮ, ವಕ್ಫ್ ಬೋರ್ಡ್‌ಗೆ ನ್ಯಾಯ ಒದಗಿಸೋ ಪ್ರಯತ್ನದಲ್ಲಿದ್ದಾರೆ: ಮಾದಾರ ಚನ್ನಯ್ಯ ಶ್ರೀ
Advertisement
ವಿಜಯಪುರ ಜಿಲ್ಲೆಯಲ್ಲಿ 15,000 ಎಕರೆ ಜಮೀನನ್ನು ವಶಪಡಿಸಿಕೊಳ್ಳಲು ನೋಟಿಸ್ ನೀಡಲಾಗಿದೆ ಎಂದು ನೂರಾರು ರೈತರು ಹೇಳಿದ ಬಳಿಕ ಈ ಸಂಗತಿ ಬೆಳಕಿಗೆ ಬಂದಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತಲಾ 10,000 ಎಕರೆ ಜಮೀನನ್ನು ವಕ್ಫ್ ನೋಂದಣಿ ಮಾಡಿಕೊಳ್ಳುವ ಪ್ರಯತ್ನ ಮಾಡಿದೆ ಎಂದು ಹೇಳಲಾಗಿದೆ. ಇಷ್ಟೇ ಅಲ್ಲದೆ ವಕ್ಫ್ ಮಂಡಳಿಯು ದೇವಸ್ಥಾನ, ಮಠ ಹಾಗೂ ಇತರೆ ಹಿಂದೂ ಧಾರ್ಮಿಕ ಸಂಸ್ಥೆಗಳ ಜಮೀನುಗಳನ್ನು ಕೂಡ ತನ್ನದು ಎಂದು ಹೇಳಿಕೊಂಡಿದೆ. ಹಿಂದೂ ಸ್ಮಶಾನ ಕೂಡ ತನ್ನದು ಎಂದು ವಕ್ಫ್ ಉಲ್ಲೇಖಿಸಿರುವುದು ಇನ್ನಷ್ಟು ಆಘಾತದ ಸಂಗತಿ. 13ನೇ ಶತಮಾನದಷ್ಟು ಇತಿಹಾಸ ಹೊಂದಿರುವ ವಿರಕ್ತ ಮಠಕ್ಕೆ ಸೇರಿದ ಸಿಂಧಗಿಯ 1.28 ಎಕರೆ ಜಮೀನು, ವಿಜಯಪುರದ ಐತಿಹಾಸಿಕ ಸೋಮೇಶ್ವರ ದೇವಾಲಯ, ಕಲಬುರ್ಗಿಯ ಬೀರದೇವರ ಗುಡಿ ಸೇರಿದಂತೆ ಅನೇಕ ಜನಪ್ರಿಯ ಸ್ಥಳಗಳನ್ನು ಕೂಡ ವಕ್ಫ್ ತನ್ನದೆಂದು ಘೋಷಿಸಿಕೊಂಡಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದು ಜನರಲ್ಲಿ ಆತಂಕ ಉಂಟುಮಾಡಿದ್ದು, ಹಾವೇರಿಯಲ್ಲಿ ಹಿಂಸಾಚಾರ, ಗಲಭೆ ಕೂಡ ನಡೆದಿದೆ. ಈ ಎಲ್ಲ ಘಟನೆಗಳ ಹಿನ್ನೆಲೆಯಲ್ಲಿ, ಜಂಟಿ ಸಮಿತಿಯು ಕೂಡಲೇ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯ ಜೊತೆ ಮಾತನಾಡಬೇಕು ಹಾಗೂ ವಕ್ಫ್‌ಗೆ ಸಂಬಂಧಿಸಿದ ಜಮೀನು ನೋಂದಣಿ ಸ್ಥಗಿತಗೊಳಿಸಲು ಸೂಚಿಸಬೇಕೆಂದು ಆರ್.ಅಶೋಕ್ ಮನವಿ ಮಾಡಿದ್ದಾರೆ.