ಬೆಂಗಳೂರು: ಕರ್ನಾಟಕ ಜನರ ಪ್ರಾಣ ರಕ್ಷಣೆ ಮಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ನಗರದ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದುವರೆಗೂ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಒಮಿಕ್ರಾನ್ ಪತ್ತೆಯಾಗಿಲ್ಲ. ಈಗಾಗಲೇ ಈ ಕುರಿತಂತೆ ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಜನರು ಕೂಡ ಬಹಳ ಎಚ್ಚರಿಕೆಯಿಂದ ಇರಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಜಾರಿ ಮಾಡುವುದಕ್ಕೆ ಚಿಂತನೆ ನಡೆಸುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ಹಾಗೂ ಡೆಲ್ಟಾ ವೈರಸ್ ನಡುವಿನ ವ್ಯತ್ಯಾಸವೇನು?
Advertisement
Advertisement
ರಾಜ್ಯದಲ್ಲಿ ಲಾಕ್‍ಡೌನ್ ವಿಚಾರದ ಬಗ್ಗೆ ಮಾತನಾಡಿದ ಅವರು, ಸದ್ಯಕ್ಕೆ ಯಾವುದೇ ರೀತಿಯ ಲಾಕ್ ಡೌನ್ ಇಲ್ಲ. ಆದರೆ ನಾವು ಮಾನಿಟರಿ ಮಾಡುತ್ತಿದ್ದೇವೆ. ವಿಶೇಷವಾಗಿ ಕೇರಳ ಹಾಗೂ ಮಹಾರಾಷ್ಟ್ರ ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸಲಾಗಿದೆ. ಆದರೆ ಸದ್ಯಕ್ಕಂತೂ ಎಲ್ಲಿಯೂ ಈ ರೀತಿಯ ಹೊಸ ತಳಿ ಪತ್ತೆಯಾಗಿಲ್ಲ. ಒಂದು ವೇಳೆ ಮುಂದೆ ಒಮಿಕ್ರಾನ್ ಪತ್ತೆಯಾದರೆ ಖಚಿತವಾಗಿ ರಾಜ್ಯದಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗುತ್ತದೆ. ರಾಜ್ಯದ ಜನರ ಪ್ರಾಣ ರಕ್ಷಣೆ ಮಾಡುವುದು ಸರ್ಕಾರದ ಜವಾಬ್ದಾರಿ, ಆ ದೃಷ್ಟಿಯಿಂದ ಎಲ್ಲಾ ರೀತಿಯ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ರಾಜ್ಯ ವಿಪತ್ತು ನಿರ್ವಹಣೆಯ ಉಪಾಧ್ಯಕ್ಷರಾಗಿ ನಮಗೆ ಆ ಜವಬ್ದಾರಿ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 2 ಡೋಸ್ ಪಡೆದವರಿಗೆ ಚಿಕಿತ್ಸೆ – ಲಸಿಕೆ ಪಡೆಯದವರಿಗೆ ಸರ್ಕಾರಿ ಸೌಲಭ್ಯ ಕಡಿತಗೊಳಿಸಿ
Advertisement
Advertisement
ಇದೇ ವೇಳೆ ಕಟ್ಟು ನಿಟ್ಟಿನ ಕ್ರಮಗಳೊಂದಿಗೆ ನಿಗದಿ ಪಡಿಸಿದ ದಿನಾಂಕದಂದೇ ಬೆಳಗಾವಿ ಅಧಿವೇಶನ ನಡೆಯಲಿದೆ. ಈಗಾಗಲೇ 2 ವರ್ಷಗಳಿಂದ ಬೆಳಗಾವಿ ಅಧಿವೇಶನವನ್ನು ಮುಂದೂಡುತ್ತಾ ಬಂದಿದ್ದೇವೆ. ಈಗ ಇದ್ದಕ್ಕಿದ್ದಂತೆ ಅಧಿವೇಶನ ರದ್ದು ಮಾಡಿದ್ರೆ, ಅಲ್ಲಿನ ಜನರಿಗೆ ಬೇರೆ ರೀತಿಯ ಸಂದೇಶ ಹೋಗುತ್ತದೆ. ಜನರು ಕೂಡ ಭಯ ಭೀತರಾಗುತ್ತಾರೆ. ಆದರಿಂದ ಇದು ಒಳ್ಳೆಯ ಸಂದೇಶ ಅಲ್ಲ. ಅಧಿವೇಶನ ಅಲ್ಲಿ ನಡೆಸಲೇಬೇಕಾಗಿದೆ. ಅದಕ್ಕಾಗಿ ಈ ಬಾರಿ ಅಲ್ಲಿ ಅಧಿವೇಶನ ನಡೆಸುತ್ತೇವೆ. ಕೋವಿಡ್ ಸೂತ್ರ ತೆಗೆದುಕೊಂಡು ಅಧಿವೇಶನ ಸುಸೂತ್ರವಾಗಿ ನಡೆಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೋವಿಡ್ ವಾರಿಯರ್ಸ್‌ಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚೆ: ಸಿಎಂ