– ಯಾವುದೇ ರ‍್ಯಾಲಿ, ಸಭೆ ವಿಚಾರ ತಲೆಯಲ್ಲಿಲ್ಲ
-ರಾಜ್ಯದ ಆರುವರೆ ಕೋಟಿ ಜನರ ಜೀವ ಕಾಪಾಡೋದು ಮುಖ್ಯವಾಗಿದೆ
ಬೆಂಗಳೂರು: ಮೂರನೇ ಅಲೆ ಬರೋದು ನಿಶ್ಚಿತ ಅನ್ನುವ ವಾತಾವರಣ ಇದೆ. ಬೆಂಗಳೂರು ರೆಡ್ ಝೋನ್ ಅಂತ ಕೇಂದ್ರ ಗುರುತಿಸಿದೆ. ರಾಜ್ಯದಲ್ಲಿ ಆರೂವರೆ ಕೋಟಿ ಜನರ ಜೀವ ಕಾಪಾಡೋದು ಮುಖ್ಯವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
Advertisement
ಸಿಎಂ ಸಭೆ ಬಳಿಕ ಸಚಿವ ಆರ್.ಅಶೋಕ್ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕೋವಿಡ್, ಓಮಿಕ್ರಾನ್ ಕೇಸ್‍ಗಳ ಹೆಚ್ಚಳ ಹಿನ್ನೆಲೆ ಕೋವಿಡ್ ಮೂರನೇ ಅಲೆ ಬಗ್ಗೆ ಪ್ರತ್ಯೇಕ ಸಭೆ ಮಾಡೋದಾಗಿ ಸಿಎಂ ಹೇಳಿದ್ದಾರೆ. ಮೂರನೇ ಅಲೆ ಬರೋದು ನಿಶ್ಚಿತ ಅನ್ನುವ ವಾತಾವರಣ ಇದೆ. ಬೆಂಗಳೂರು ರೆಡ್ ಝೋನ್ ಅಂತ ಕೇಂದ್ರ ಗುರುತಿಸಿದೆ. ಜನವರಿ 7 ಕ್ಕೂ ಮುನ್ನ ಒಂದು ಸಭೆ ಮಾಡುತ್ತೇವೆ. ಆ ಸಭೆಯಲ್ಲಿ ಹೊಸ ಟಫ್ ರೂಲ್ಸ್ ತರುತ್ತೇವೆ. ತಜ್ಞರು ಮಾಡುವ ಶಿಫಾರಸುಗಳನ್ನು ಯಥಾವತ್ ಜಾರಿ ಮಾಡಲಾಗುತ್ತದೆ. ಪಶ್ಚಿಮ ಬಂಗಾಳ, ಮುಂಬೈ ಮಾದರಿಯಲ್ಲಿ ಬೆಂಗಳೂರಿನಲ್ಲೂ ಲಾಕ್‍ಡೌನ್ ಮಾಡಬೇಕಾಗುತ್ತದೆ ಎಂದು ಕೊರೊನಾ ಮಾರ್ಗಸೂಚಿ ತರುವ ಕುರಿತಾಗಿ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ವಸಿಷ್ಠರೂ ಅಲ್ಲ, ವಿಶ್ವಾಮಿತ್ರನೂ ಅಲ್ಲ: ಸಿ.ಟಿ.ರವಿ
Advertisement
Advertisement
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಸೇರುವ ಜನರಿಗೆ ಸರ್ಕಾರದಿಂದ ಕಡಿವಾಣ ಹಾಕುತ್ತದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್, ಜೆಡಿಎಸ್ ನವರು ಏನು ಮಾಡುತ್ತಾರೆ. ಅನ್ನೋದು ನಮಗೆ ಮುಖ್ಯವಲ್ಲ. ರಾಜ್ಯದ ಆರೂವರೆ ಕೋಟಿ ಜನರ ಜೀವ ಕಾಪಾಡೋದು ಮುಖ್ಯವಾಗಿದೆ. ಯಾವುದೇ ರ‍್ಯಾಲಿ, ಸಭೆ ವಿಚಾರ ನಮ್ಮ ತಲೆಯಲ್ಲಿ ಇಲ್ಲ. ಹೀಗಾಗಿ ಜನವರಿ 4 ಅಥವಾ 5 ರಂದು ಸಭೆ ಮಾಡಿ ಬಿಗಿ ಕ್ರಮ ಜಾರಿ ಮಾಡುತ್ತೇವೆ. ಕೊವೀಡ್ ತಡೆಗೆ ಬಿಗಿ ಟಫ್ ರೂಲ್ಸ್ ಜಾರಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 8 ಲಕ್ಷಕ್ಕೆ ಹೆಣ್ಣು ಮಕ್ಕಳನ್ನು ಮಾರಾಟ ಮಾಡಿದ ತಂದೆ ಅರೆಸ್ಟ್
Advertisement