ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಕೊಡಲು ಅಗತ್ಯ ಬಿದ್ದರೆ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ವಿಪಕ್ಷ ನಾಯಕ ಆರ್.ಅಶೋಕ್ (R Ashok) ಕಿಡಿಕಾರಿದರು. ಕೂಡಲೇ ಡಿ.ಕೆ.ಶಿವಕುಮಾರ್ (D K Shivakumar) ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿ ಈಗ ಯೂಟರ್ನ್ ಹೊಡೆದಿದ್ದಾರೆ. ಈಗಿನ ಕಾಲದಲ್ಲಿ ಯೂಟರ್ನ್, ಬ್ಯಾಕ್ ಟರ್ನ್ ಯಾವುದು ನಡೆಯುವುದಿಲ್ಲ. ಬಿಜೆಪಿ (BJP) ಅವರು ಸಂವಿಧಾನ ಬಗ್ಗೆ ಮಾತಾಡಿದರು ಎಂದು ಕಾಂಗ್ರೆಸ್ (Congress) ಅವರು ಏನೇನು ಮಾತಾಡಿದರು. ಈಗ ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಾವಣೆ ಬಗ್ಗೆ ಮಾತಾಡಿದ್ದಾರೆ. ನಮ್ಮ ರಾಷ್ಟ್ರೀಯ ಅಧ್ಯಕ್ಷರು ಇದನ್ನ ಪ್ರಸ್ತಾಪ ಮಾಡಿದ್ದಾರೆ ಎಂದರು. ಇದನ್ನೂ ಓದಿ: ನನ್ನ, ಕುಮಾರಸ್ವಾಮಿ ಫೋನ್ ಟ್ಯಾಪಿಂಗ್ ಈಗಲೂ ನಡೆಯುತ್ತಿದೆ: ಆರ್.ಅಶೋಕ್
ಅತೀ ಹೆಚ್ಚು ಬಾರಿ ಸಂವಿಧಾನ ಬದಲಾವಣೆ ಮಾಡಿದ್ದು ಕಾಂಗ್ರೆಸ್ ಪಕ್ಷ. ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ್ದು ತಪ್ಪು. ಕೂಡಲೇ ಅವರು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಒಳಮೀಸಲಾತಿ, ವಾರದೊಳಗೆ ನಾಗಮೋಹನ್ ದಾಸ್ ಮಧ್ಯಂತರ ವರದಿ: ಮಹದೇವಪ್ಪ