Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾರಾಜರಿಗೂ, ಮುಡಾ ಸೈಟ್ ಕೊಳ್ಳೆ ಹೊಡೆದವರಿಗೂ ಹೋಲಿಕೆ ಮಾಡಬಾರದು: ಆರ್.ಅಶೋಕ್ ಲೇವಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಹಾರಾಜರಿಗೂ, ಮುಡಾ ಸೈಟ್ ಕೊಳ್ಳೆ ಹೊಡೆದವರಿಗೂ ಹೋಲಿಕೆ ಮಾಡಬಾರದು: ಆರ್.ಅಶೋಕ್ ಲೇವಡಿ

Bengaluru City

ಮಹಾರಾಜರಿಗೂ, ಮುಡಾ ಸೈಟ್ ಕೊಳ್ಳೆ ಹೊಡೆದವರಿಗೂ ಹೋಲಿಕೆ ಮಾಡಬಾರದು: ಆರ್.ಅಶೋಕ್ ಲೇವಡಿ

Public TV
Last updated: July 26, 2025 7:39 pm
Public TV
Share
3 Min Read
R Ashok 1
SHARE

– ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್; ವಿಪಕ್ಷ ನಾಯಕ ಕಿಡಿ

ಬೆಂಗಳೂರು: ಚಿನ್ನಾಭರಣ ಅಡವಿಟ್ಟು ಜಲಾಶಯ ನಿರ್ಮಿಸಿದವರಿಗೂ, ಮುಡಾದಲ್ಲಿ 14 ಸೈಟುಗಳನ್ನು ಕೊಳ್ಳೆ ಹೊಡೆದವರಿಗೂ ಹೋಲಿಕೆ ಮಾಡಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ (Nalwadi Krishnaraja Wadiyar) ಅವರು ಹಳೆ ಮೈಸೂರು ಭಾಗಕ್ಕೆ ನೀಡಿದ ಕೊಡುಗೆಯನ್ನು ನಾವು ಸ್ಮರಿಸಬೇಕು. ಕೆಆರ್‌ಎಸ್ ಜಲಾಶಯದಿಂದಾಗಿ ಜನರಿಗೆ ಜೀವಜಲ ದೊರೆತಿದೆ. ಅವರ ಸಾಧನೆಗಳಿಂದಾಗಿ ಜನರು ಅನ್ನ ತಿನ್ನುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಗಾಳಿ ಮಳೆ ಅಬ್ಬರಕ್ಕೆ ಮನೆ ಮೇಲೆ ಉರುಳಿದ ಬೃಹತ್ ಮರ – ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ತೆರವು

ಸೋಪ್ ಫ್ಯಾಕ್ಟರಿ, ವಿಶ್ವವಿದ್ಯಾಲಯಗಳ ನಿರ್ಮಾಣ, ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿದವರೇ ಅವರು. ಚಿನ್ನಾಭರಣ ಅಡವಿಟ್ಟು ಜಲಾಶಯ ನಿರ್ಮಿಸಿದವರಿಗೂ, ಮುಡಾದಲ್ಲಿ 14 ಸೈಟುಗಳನ್ನು ಕೊಳ್ಳೆ ಹೊಡೆದವರಿಗೂ ಹೋಲಿಕೆ ಮಾಡಬಾರದು. ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಮಹಾರಾಜರ ಕುಟುಂಬಕ್ಕೆ ಅಪಮಾನ ಮಾಡಿದ್ದಾರೆ. ಕೂಡಲೇ ಅವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ನಾವು ಬಿಜೆಪಿಯವರಿಗಿಂತ ಜಾಸ್ತಿ ಕೆಲಸ ಮಾಡಿದ್ದೇವೆ – ಪುತ್ರನ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಿಬಿಎಂಪಿ (BBMP) ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ. ಇದನ್ನು ವಿರೋಧಿಸಿ ಬಿಜೆಪಿ ಹೋರಾಟ ಮಾಡಲಿದೆ. ಬೆಂಗಳೂರನ್ನು ಅತಂತ್ರವಾಗಿ 5 ಭಾಗ ಮಾಡಲಾಗಿದೆ. ರಾಜಕೀಯ ದೃಷ್ಟಿಯಿಂದ ಹಾಗೂ ಕಾಂಗ್ರೆಸ್ ಗೆಲ್ಲಬೇಕೆಂಬ ಗುರಿಯಿಂದ ವಿಭಜನೆ ಮಾಡಲಾಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ 10 ವರ್ಷ ಸಿಎಂ ಆಗ್ಬಿಟ್ರೆ ತಾಯಿ ಚಾಮುಂಡಿಗಿಂತ ದೊಡ್ಡವರಾಗಿಬಿಡ್ತಾರೆ: ಪ್ರತಾಪ್‌ ಸಿಂಹ ಕಿಡಿ

ಐದು ಪಾಲಿಕೆಗಳ ನಡುವೆ ತಾರತಮ್ಯ ಉಂಟಾಗಲಿದೆ. ಇದರ ವಿರುದ್ಧ ಕೋರ್ಟ್ ಮೊರೆ ಹೋಗಿ ಹೋರಾಟ ಮಾಡಲಾಗುವುದು. ಬೆಂಗಳೂರನ್ನು ಒಡೆಯಿರಿ ಎಂದು ಜನರು ಕೇಳಿಲ್ಲ. ಈಗಾಗಲೇ ನಗರದಲ್ಲಿ ತೆರಿಗೆ, ಸೆಸ್, ಇ-ಖಾತಾದಿಂದ ಸಮಸ್ಯೆ ಉಂಟುಮಾಡಿದ್ದಾರೆ. ಇಂತಹ ಸಮಯದಲ್ಲಿ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೋಲು ಖಚಿತವಾಗಿದೆ. ಅದನ್ನು ತಪ್ಪಿಸಲು ಹೀಗೆ ಭಾಗ ಮಾಡಿದ್ದಾರೆ ವಾಗ್ದಾಳಿ ನಡೆಸಿದ್ದಾರೆ.

ಕಪ್ಪು ಪಟ್ಟಿಯಲ್ಲಿರುವ ಗುತ್ತಿಗೆದಾರರಿಗೆ ಸುರಂಗ ರಸ್ತೆ ಯೋಜನೆಯನ್ನು ನೀಡಲಾಗುತ್ತಿದೆ. ಸುರಂಗ ರಸ್ತೆಗೆ ಟೋಲ್ ಕೂಡ ಇರುವುದರಿಂದ ಶ್ರೀಮಂತರು ಮಾತ್ರ ಇದನ್ನು ಬಳಸಬಹುದು. ಜನಸಾಮಾನ್ಯರಿಗೆ ಇದರಿಂದ ಪ್ರಯೋಜನವಿಲ್ಲ. ಅಭಿವೃದ್ಧಿಗೆ ನಮ್ಮ ಸಹಕಾರವಿದೆ. ಆದರೆ ದುಡ್ಡು ಕೊಳ್ಳೆ ಹೊಡೆಯುವ ಯೋಜನೆಗಳನ್ನು ವಿರೋಧಿಸುತ್ತೇವೆ. ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಭೂಕಂಪದ ನಾಡು ಮಾಡಬಾರದು ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ: ಯತೀಂದ್ರ ಹೇಳಿಕೆಗೆ ವಿಪಕ್ಷ ನಾಯಕರು ಕೆಂಡ

ಹೆಬ್ಬಾಳ ಮೇಲ್ಸೇತುವೆ ಬಳಿಯ ಜಂಕ್ಷನ್‌ಗೆ ಎಲ್ಲ ಕಡೆಯಿಂದ ವಾಹನಗಳು ಬರುತ್ತವೆ. ಅಂತಹ ಜಾಗವನ್ನು ಖಾಸಗಿ ಭೂ ಮಾಲೀಕರಿಗೆ ನೀಡಲು ಸರ್ಕಾರ ಮುಂದಾಗಿದೆ. ಇದನ್ನು ವಿರೋಧಿಸಿ ಸದನದಲ್ಲಿ ಚರ್ಚಿಸಲಾಗುವುದು. ಇ-ಖಾತಾ ವಿಚಾರದಲ್ಲಿ ಜನರಿಗೆ ತೊಂದರೆ ನೀಡಲಾಗುತ್ತಿದೆ. ಹಣ ಲೂಟಿ ಮಾಡಲು ಬೆಂಗಳೂರನ್ನು ಬಳಸಬಾರದು ಎಂದಿದ್ದಾರೆ.

ಕಾಂಗ್ರೆಸ್ (Congress) ಸರ್ಕಾರ ಬೆಂಗಳೂರನ್ನು ಹೋಳು ಮಾಡುತ್ತಿದೆ. ಎಲ್ಲೆಡೆ ಟ್ರಾಫಿಕ್ ಹಾಗೂ ಕಸದ ಸಮಸ್ಯೆ ಕಾಣುತ್ತಿದೆ. ಹೋಳು ಮಾಡುವುದರಿಂದ ಅಭಿವೃದ್ಧಿಯಾಗುವುದಿಲ್ಲ. ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಬೇಕು. ಅನುದಾನವಿಲ್ಲದೆ ಅಭಿವೃದ್ಧಿ ಶೂನ್ಯವಾಗಿದೆ. ಹೊಸ ಪಾಲಿಕೆಗಳ ರಚನೆಯಿಂದ ಬೆಂಗಳೂರು ಜನರ ಹೃದಯ ಚೂರಾಗಲಿದೆ. ಇದರ ವಿರುದ್ಧ ಹೋರಾಟ ಮಾಡಲು ಸಭೆ ನಡೆಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಾಕ್‌ ಉಗ್ರವಾದಕ್ಕೆ ಆಪರೇಷನ್ ಸಿಂಧೂರ ನೇರ ಸಂದೇಶ ರವಾನಿಸಿದೆ: ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ

ಹುಲಿಗಳು ಸಾಯುವುದನ್ನು ನೋಡಿದರೆ ಅರಣ್ಯ ಇಲಾಖೆ ಸತ್ತು ಹೋಗಿದೆ ಎಂದೆನಿಸುತ್ತದೆ. ಈ ನಡುವೆ ಗೋವುಗಳನ್ನು ಅರಣ್ಯದಲ್ಲಿ ಮೇಯಿಸುವಂತಿಲ್ಲ ಎಂಬ ಆದೇಶ ನೀಡಲಾಗಿದೆ. ಇಂತಹ ಕ್ರಮ ಒಳ್ಳೆಯದಲ್ಲ ಎಂದಿದ್ದಾರೆ.

136 ಸೀಟುಗಳನ್ನು ಗೆದ್ದಿರುವ ಬಗ್ಗೆ ನಮಗೂ ಅನುಮಾನವಿದೆ ಎಂದು ನಾವು ಹೇಳಬಹುದು. ಚುನಾವಣೆಯಲ್ಲಿ ಸೋತಾಗ ಸಾಕ್ಷಿ ಕೇಳುತ್ತಾರೆ. ಭಯೋತ್ಪಾದಕರ ಮೇಲೆ ದಾಳಿ ಮಾಡಿದಾಗಲೂ ಹೀಗೆ ಸಾಕ್ಷಿ ಕೇಳಿದ್ದರು ಎಂದು ಕಿಡಿಕಾರಿದ್ದಾರೆ.

TAGGED:bengalurubjpr ashoksiddaramaiahYathindra siddaramaiahಆರ್‌ ಅಸೋಕ್‌ಬೆಂಗಳೂರುಯತೀಂದ್ರ ಸಿದ್ದರಾಮಯ್ಯಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Bengaluru Kalaburagi Vande Bharat Express train
Bagalkot

ಮಾ.15ರಿಂದ ವಂದೇ ಭಾರತ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

Public TV
By Public TV
36 minutes ago
Restaurant Hotel
Bengaluru City

ಹೋಟೆಲ್‌ಗಳಿಗೆ ಸಂಕಷ್ಟ – ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್‌ ಸರಬರಾಜು ಬಂದ್‌

Public TV
By Public TV
36 minutes ago
Mariana L Naishuler
Latest

ಚೆನ್ನೈನ US ಕಾನ್ಸುಲೇಟ್ ಜನರಲ್ ಆಗಿ ಮರಿಯಾನಾ ಎಲ್.ನೈಶುಲರ್ ಅಧಿಕಾರ ಸ್ವೀಕಾರ

Public TV
By Public TV
1 hour ago
Attack on Iranian oil facilities US objects to Israels actions
Latest

ಇರಾನ್‌ ಬೀದಿಯಲ್ಲಿ ಬೆಂಕಿಯ ಮಳೆ – ಇಸ್ರೇಲ್‌ ದಾಳಿಗೆ ಅಮೆರಿಕ ಅಸಮಾಧಾನ

Public TV
By Public TV
1 hour ago
Mallikarjuna Mutya 3
Districts

ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ

Public TV
By Public TV
1 hour ago
Karwar Container Car Accident
Crime

ಕುಡಿದ ಮತ್ತಿನಲ್ಲಿ ಕಾರಿಗೆ ಗುದ್ದಿದ ಕಂಟೇನರ್ ಚಾಲಕ – ಮಗು ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?