ಬೆಂಗಳೂರು: ಸಿದ್ದರಾಮಯ್ಯನವರ (Siddaramaiah) ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 13 ತಿಂಗಳಾಗಿದೆ. ಒಂದಾದ ಮೇಲೆ ಒಂದರಂತೆ ಬ್ರಹ್ಮಾಂಡ ಭ್ರಷ್ಟಾಚಾರಗಳು, ಲೂಟಿ ಮಾಡಲು ಹೆಬ್ಬಾಗಿಲು ತೆಗೆದು, ಲೂಟಿಗಾಗಿ ಸುರಂಗ ಕೊರೆಯುವ ಕೆಲಸವನ್ನು ಕಾಂಗ್ರೆಸ್ (Congress) ಪಕ್ಷ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R.Ashok) ಅವರು ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮೈಸೂರಿನ ಮೂಡಾ ಅವ್ಯವಹಾರ (Mysuru Muda) ಸಂಬಂಧ ಸಿಎಂ ರಾಜೀನಾಮೆಗೆ ಆಗ್ರಹಿಸಿ ಅವರ ಮನೆಗೆ ಮುತ್ತಿಗೆ ಹಾಕಲು ಹೊರಟ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ಮೊನ್ನೆ ವಾಲ್ಮೀಕಿ ನಿಗಮದ 187 ಕೋಟಿ ಹಣವನ್ನು `ಪಟಾಪಟ್’ ಎಂದು ರಾಹುಲ್ ಗಾಂಧಿಯವರು ಹೇಳಿದ ಮಾದರಿಯಲ್ಲಿ ಬೇನಾಮಿ ಖಾತೆಗಳು, ಬಾರ್‌ಗಳು, ವೈನ್ ಸ್ಟೋರ್‌ಗಳಿಗೆ ವರ್ಗಾಯಿಸಿದರು. ಲ್ಯಾಂಬೊರ್ಗಿನಿ, ಒಡವೆ- ಏನೇನು ಬೇಕೋ ಅವೆಲ್ಲವನ್ನೂ ಖರೀದಿಸಿದರು. ದಲಿತರ ಹಣ ಚಿನ್ನದ ಅಂಗಡಿಗೆ, ಕಾರು ಖರೀದಿಗೆ, ಬಾರ್‌ಗಳಿಗೆ, ಕಾಂಗ್ರೆಸ್ ಪಕ್ಷಕ್ಕೆ ಹೋಗಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮಣ್ಣು ಕುಸಿತ ಪ್ರಕರಣ- ಮಣ್ಣಿನಡಿ ಸಿಲುಕಿದ ಕಾರ್ಮಿಕ ದುರ್ಮರಣ
ನಮ್ಮ ಹೋರಾಟದ ಪರಿಣಾಮವಾಗಿ, ರಾಜಭವನದ ಬಾಗಿಲಿಗೆ ಹೋದ ಬಳಿಕ ನಾಗೇಂದ್ರ ಅವರು ರಾಜೀನಾಮೆ ಕೊಟ್ಟರು ಎಂದು ಅವರು ತಮ್ಮ ಹೋರಾಟಕ್ಕೆ ಸಿಕ್ಕ ಪ್ರತಿಫಲವನ್ನು ಈ ವೇಳೆ ಅವರು ನೆನೆದಿದ್ದಾರೆ. ಈ ವೇಳೆ ಬಿಜೆಪಿಯ ಜನಪ್ರತಿನಿಧಿಗಳನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮ, ಮುಡಾ ಅಕ್ರಮ ಪ್ರಕರಣ: ಸಿಎಂ ಮನೆ ಮುತ್ತಿಗೆಗೆ ಹೊರಟಿದ್ದ ಬಿಜೆಪಿ ನಾಯಕರು ವಶಕ್ಕೆ