– ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ರಾಯರೆಡ್ಡಿ ಹೇಳಿಕೆಗೆ ವಿಪಕ್ಷ ನಾಯಕ ಗರಂ
ಬೆಂಗಳೂರು: ಇಸ್ಲಾಂ (Islam) ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ ರಾಯರೆಡ್ಡಿ (Basavaraj Rayareddy) ಹೇಳಿಕೆಗೆ ವಿಪಕ್ಷ ನಾಯಕ ಆರ್.ಅಶೋಕ್ (R.AShok) ಕಿಡಿಕಾರಿದ್ದಾರೆ. ಸಿಎಂ ಡಿಕೆಶಿ 6ನೇ ಗ್ಯಾರಂಟಿ – ಹಿಂದೂಗಳಿಗೆ ‘ಸುನ್ನತ್ ಗ್ಯಾರಂಟಿʼ ಎಂದು ಲೇವಡಿ ಮಾಡಿದ್ದಾರೆ.
ರಾಯರೆಡ್ಡಿ ಹೇಳಿಕೆಗೆ ಎಕ್ಸ್ ಖಾತೆಯಲ್ಲಿ ಕಿಡಿಕಾರಿರುವ ಆರ್.ಅಶೋಕ್, ಸಿಎಂ ಶಿವಕುಮಾರ್ ಅವರೇ, ಹಿಂದೂಗಳ ಮತ ಬೇಕಾದಾಗ ದೇವಸ್ಥಾನ ಸುತ್ತುವ ನಾಟಕ ಆಡುವ ನಿಮಗೆ, ಅಧಿಕಾರ ಸಿಕ್ಕ ಮೇಲೆ ನಿಮ್ಮದೇ ಸಂಪುಟದ ಸಚಿವರು ಅದೇ ಹಿಂದೂ ಧರ್ಮವನ್ನು ಅವರಹೇಳನ ಮಾಡಿದಾಗ ಮೌನ ವಹಿಸುವುದೇಕೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಶರಣ ತತ್ವ ಇಸ್ ದಿ ಬೆಸ್ಟ್ – ಇಸ್ಲಾಂ ಧರ್ಮವೇ ಶ್ರೇಷ್ಠ ಎಂದು ಹೇಳಿ ಈಗ ಉಲ್ಟಾ ಹೊಡೆದ ಬಸವರಾಜ ರಾಯರೆಡ್ಡಿ
ನಿಮ್ಮ ಸಂಪುಟದ ಸಚಿವ ಬಸವರಾಜ ರಾಯರೆಡ್ಡಿ ಅವರು ‘ಇಸ್ಲಾಂ ಧರ್ಮವೇ ಶ್ರೇಷ್ಠ, ನಾನು ಮಠಕ್ಕೆ ಹೋಗುವುದಿಲ್ಲ’ ಎಂದು ಬಹಿರಂಗವಾಗಿ ನೀಡಿರುವ ಪ್ರಚೋದನಾಕಾರಿ ಹೇಳಿಕೆ ಇಡೀ ರಾಜ್ಯಾದ್ಯಂತ ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ. ಧರ್ಮದ ಬಗ್ಗೆ ಯಾರಿಗಾದರೂ ಅವರವರ ವೈಯಕ್ತಿಕ ನಂಬಿಕೆ ಇರಬಹುದು. ಆದರೆ, ಜವಾಬ್ದಾರಿಯುತ ಸಚಿವ ಸ್ಥಾನದಲ್ಲಿದ್ದುಕೊಂಡು ಕೋಟ್ಯಂತರ ಹಿಂದೂಗಳ ಆರಾಧನೆ, ಪವಿತ್ರ ಮಠ-ಮಾನ್ಯಗಳು ಮತ್ತು ಸನಾತನ ಪರಂಪರೆಯ ಬಗ್ಗೆ ಹಗುರವಾಗಿ ಮಾತನಾಡುವುದು ಅಹಂಕಾರ ಮತ್ತು ಹಿಂದೂ ಧರ್ಮದ ಮೇಲಿನ ಬಹಿರಂಗ ದಾಳಿ, ಹಿಂದೂಗಳ ಶ್ರದ್ಧೆ, ನಂಬಿಕೆಗಳಿಗೆ ಮಾಡಿರುವ ಘೋರ ಅಪಮಾನ.
ಸಿಎಂ ಡಿಕೆಶಿ ಅವರ 6ನೇ ಗ್ಯಾರಂಟಿ – ಹಿಂದೂಗಳಿಗೆ ‘ಸುನ್ನತ್ ಗ್ಯಾರಂಟಿ’!
ಸಿಎಂ @DKShivakumar ಅವರೇ, ಹಿಂದೂಗಳ ಮತ ಬೇಕಾದಾಗ ದೇವಸ್ಥಾನ ಸುತ್ತುವ ನಾಟಕ ಆಡುವ ನಿಮಗೆ, ಅಧಿಕಾರ ಸಿಕ್ಕ ಮೇಲೆ ನಿಮ್ಮದೇ ಸಂಪುಟದ ಸಚಿವರು ಅದೇ ಹಿಂದೂ ಧರ್ಮವನ್ನು ಅವರಹೇಳನ ಮಾಡಿದಾಗ ಮೌನ ವಹಿಸುವುದೇಕೆ?
ನಿಮ್ಮ ಸಂಪುಟದ ಸಚಿವ ಬಸವರಾಜ ರಾಯರೆಡ್ಡಿ ಅವರು… pic.twitter.com/lwWNZEt83p
— R. Ashoka (@RAshokaBJP) August 31, 2026
ಕರ್ನಾಟಕದ ಕೋಟ್ಯಂತರ ಹಿಂದೂಗಳಿಗೆ ರಾಯರೆಡ್ಡಿ ಅವರ ಅವಹೇನಕಾರಿ ಹೇಳಿಕೆಗಿಂತಲೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಜಾಣ ಮೌನವೇ ಹೆಚ್ಚಿನ ಆಕ್ರೋಶ ತರಿಸುತ್ತಿದೆ. ನಿಮ್ಮ ಈ ಮೌನವೇ ರಾಜ್ಯಕ್ಕೆ ಒಂದು ಸ್ಪಷ್ಟ ಸಂದೇಶ ನೀಡುತ್ತಿದೆ. ಹಿಂದೂಗಳ ಭಾವನೆ ನಜ್ಜುಗುಜ್ಜಾದರೂ ಚಿಂತೆಯಿಲ್ಲ, ಓಲೈಕೆ ರಾಜಕಾರಣಕ್ಕಾಗಿ ಸಚಿವರನ್ನು ಮಾತ್ರ ರಕ್ಷಿಸಬೇಕು. ಇದೇ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ಮನಸ್ಥಿತಿಯ ಅಸಲಿ ಮುಖವಲ್ಲವೇ ಎಂದು ಕಿಡಿಕಾರಿದ್ದಾರೆ.
ಸಿಎಂ ಡಿ.ಕೆ.ಶಿವಕುಮಾರ್ ಅವರೇ , ಈಗ ನಿಮಗಿದು ಅಗ್ನಿಪರೀಕ್ಷೆ. ರಾಯರೆಡ್ಡಿ ಅವರ ಈ ಹಿಂದೂ ವಿರೋಧಿ ಅವಹೇಳನಕಾರಿ ಹೇಳಿಕೆಯನ್ನು ಬಹಿರಂಗವಾಗಿ ಖಂಡಿಸಿ. ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ಮಾಡಿರುವ ಅವರಿಂದ ತಕ್ಷಣವೇ ಸಾರ್ವಜನಿಕ ಕ್ಷಮೆಯಾಚನೆ ಮಾಡಿಸಿ. ಅವರು ಅದಕ್ಕೆ ಸಿದ್ಧರಿಲ್ಲದಿದ್ದರೆ, ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ವಜಾಗೊಳಿಸಿ. ಇವೆರಡನ್ನೂ ಮಾಡದಿದ್ದರೆ ರಾಜ್ಯದ ಕೋಟ್ಯಂತರ ಹಿಂದೂಗಳ ಈ ಪ್ರಶ್ನೆಗಳಿಗೆ ನಿಮ್ಮ ಮೌನವೇ ಉತ್ತರವಾಗಲಿದೆ ಎಂದಿದ್ದಾರೆ. ಇದನ್ನೂ ಓದಿ: ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಹಜ್ ಯಾತ್ರೆಗೆ ಹೋಗುವ ಆಸೆಯಿದೆ: ಬಸವರಾಜ ರಾಯರೆಡ್ಡಿ
ಸನಾತನ ಧರ್ಮವನ್ನು ನಿಂದಿಸಿದ್ದು ರಾಯರೆಡ್ಡಿ ಅವರ ವೈಯಕ್ತಿಕ ಅಭಿಪ್ರಾಯವೋ? ಅಥವಾ ಇದು ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಮ್ಮತಿ ಪಡೆದ hidden ಅಜೆಂಡಾನೋ? ಹಿಂದೂಗಳ ಮತಗಳನ್ನು ಪಡೆದು ಅಧಿಕಾರಕ್ಕೇರಿ, ಅದೇ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ದಿನನಿತ್ಯ ತುಚ್ಛವಾಗಿ ನಿಂದಿಸುವ ಈ ನೀಚ ರಾಜಕಾರಣವನ್ನು ಕರ್ನಾಟಕ ಎಂದಿಗೂ ಸಹಿಸುವುದಿಲ್ಲ. ಹಿಂದೂ ಧರ್ಮ ಮತ್ತು ಮಠ-ಮಾನ್ಯಗಳ ಮೇಲೆ ದಾಳಿಯಾದಾಗ ಕಣ್ಣು, ಕಿವಿ, ಬಾಯಿ ಮುಚ್ಚಿ ಕುಳಿತುಕೊಳ್ಳುವ ಮುಖ್ಯಮಂತ್ರಿ ಡಿಕೆಶಿ ಅವರು ಈ ಧಾರ್ಮಿಕ ನಿಂದನೆಯ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ರಾಯರೆಡ್ಡಿ ಅವರು ತಕ್ಷಣ ಬಹಿರಂಗ ಕ್ಷಮೆ ಕೇಳಬೇಕು, ಇಲ್ಲವೇ ಸಂಪುಟದಿಂದ ಹೊರನಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಅವರೇ – ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆ ದೊಡ್ಡದೋ ಅಥವಾ ನಿಮ್ಮ ಸಚಿವರ ಕುರ್ಚಿ ಮತ್ತು ಮತಬ್ಯಾಂಕ್ ದೊಡ್ಡದೋ? ಕರ್ನಾಟಕ ನೋಡುತ್ತಿದೆ. ರಾಜ್ಯದ ಜನತೆ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಹಿಂದೂ ವಿರೋಧಿ ಕಾಂಗ್ರೆಸ್ ಅಂತ ಕಿಡಿಕಾರಿದ್ದಾರೆ.
