ಬೆಂಗಳೂರು: ಜಯನಗರ ಕ್ಷೇತ್ರದ ಅನುದಾನ ವಿಚಾರದಲ್ಲಿ ಬಿಜೆಪಿ ಶಾಸಕನ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ವಿಪಕ್ಷ ನಾಯಕ ಆರ್.ಅಶೋಕ್ ತರಾಟೆಗೆ ತೆಗೆದುಕೊಂಡಿದ್ದಾರೆ.
ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಅಶೋಕ್, ಅನುದಾನ ಬೇಕಾದರೆ ನನ್ನ ಬಳಿ ತಗ್ಗಿ ಬಗ್ಗಿ ನಡೆಯಬೇಕು ಎಂಬುದು ಡಿಸಿಎಂ ಸಾಹೇಬರ ಲೇಟೆಸ್ಟ್ ನುಡಿಮುತ್ತುಗಳು. ಸನ್ಮಾನ್ಯ ಡಿಕೆ ಶಿವಕುಮಾರ್ ಅವರೇ, ನಿಮ್ಮ ಬಳಿ ತಗ್ಗಿ-ಬಗ್ಗಿ ಇರಬೇಕು ಅನ್ನುವುದಕ್ಕೆ ಬೆಂಗಳೂರು ನಗರವನ್ನು ನಿಮ್ಮ ಜಹಗೀರು ಅಂದುಕೊಡಿದ್ದೀರಾ ಎಂದು ವಾಗ್ದಾಳಿ ನಡೆಸಿದ್ದಾರೆ.
Advertisement
Advertisement
ಅಧಿಕಾರ ಎನ್ನುವುದು ಮತದಾರರು ಕೊಟ್ಟಿರುವ ಭಿಕ್ಷೆ. ಸಂವಿಧಾನ ಕೊಟ್ಟಿರುವ ಜವಾಬ್ದಾರಿಯೇ ಹೊರತು ಪಾಳೆಗಾರಿಕೆ ಅಲ್ಲ. ಪ್ರಜಾಪ್ರಭುತ್ವದಲ್ಲಿ ನಾವು ತಗ್ಗಿ-ಬಗ್ಗಿ ನಡೆಯಬೇಕಿರುವುದು ಮತಭಿಕ್ಷೆ ನೀಡಿರುವ ಮತದಾರ ಪ್ರಭುಗಳಿಗೆ. ಪ್ರಜಾಪ್ರಭುತ್ವ ವ್ಯವಸ್ಥೆ ನೀಡಿರುವ ಸಂವಿಧಾನಕ್ಕೆ ಹೊರತು ಯಾವ ದೊಣ್ಣೆ ನಾಯಕನಿಗೂ ಅಲ್ಲ. ಈ ನಿಮ್ಮ ಒಣ ಪ್ರತಿಷ್ಠೆ, ಧಿಮಾಕು, ದರ್ಬಾರು ಎಲ್ಲ ಬಿಟ್ಟು ಜನರ ಸೇವೆ ಮಾಡುವ ಮನೋಭಾವನೆ ಬೆಳೆಸಿಕೊಳ್ಳಿ. ಯಾವುದೇ ಕ್ಷೇತ್ರದ ಬಗ್ಗೆ ತಾರತಮ್ಯ ಮಾಡದೆ ಸಚಿವರಾಗಿ ನಿಮ್ಮ ಕರ್ತವ್ಯ ನಿರ್ವಹಿಸಿ ಎಂದು ಆರ್.ಅಶೋಕ್ ಸಲಹೆ ನೀಡಿದ್ದಾರೆ.
Advertisement
Advertisement
ಬೆಂಗಳೂರಿನ ವಿವಿಧ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ, ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಪ್ರತಿನಿಧಿಸುವ ಜಯನಗರ ಕ್ಷೇತ್ರಕ್ಕೆ ಮಾತ್ರ ಅನುದಾನ ನೀಡಲಿಲ್ಲ. ಇದೇ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಗಳ ತಾರಕಕ್ಕೇರಿದೆ.