ಹಾಸನ: ನಾನೇ ಸರ್ಕಾರಕ್ಕೆ ಹೇಳಿದ್ದೇನೆ. ಒಕ್ಕಲಿಗರ ನಿಗಮ, ಬ್ರಾಹ್ಮಣರು, ಲಿಂಗಾಯಿತರು ನಿಗಮದ ಹಣ ಇದೆ ಎಲ್ಲವನ್ನೂ ಬಳಸಿಕೊಳ್ಳಿ ಎಂದಿದ್ದೇನೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ವಾಗ್ದಾಳಿ ನಡೆಸಿದ್ದಾರೆ.
ಹಾಸನ (Hassan) ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿರುವ ಪ್ರದೇಶಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಸ್ಕ್ಯಾಂಡಲ್‌ಗಳಲ್ಲಿ ಸಿಲುಕಿಕೊಂಡಿದೆ. ಅದರಿಂದ ಹೊರಬರಲು ಅವರಿಗೆ ಆಗ್ತಿಲ್ಲ, ಅದಕ್ಕೆ ಅದರಲ್ಲಿ ಬ್ಯುಸಿ ಇದ್ದಾರೆ. ನಾನು ಕಂದಾಯ ಸಚಿವನಾಗಿ ಮಳೆಹಾನಿಗೆ ತುರ್ತು ಪರಿಹಾರ ನೀಡಿದ್ದೆ. ಇಲ್ಲಿ ಪರಿಹಾರ ಕೊಡಲು ಇನ್ನೂ ಶುರು ಮಾಡಿಲ್ಲ. ಕೇಂದ್ರ ಸರ್ಕಾರ ಕೊಟ್ಟಿರುವ ಹಣವನ್ನು ಇವರು ಕೊಡುತ್ತಿದ್ದಾರೆ. ಕೇಂದ್ರ ಸರ್ಕಾರ ಕೊಟ್ಟಿರುವುದನ್ನು ನೀಡಿ ಕೈಚೆಲ್ಲಿ ಕೂರಬಾರದು. ರಾಜ್ಯ ಸರ್ಕಾರ ಅದಕ್ಕೆ ಹೆಚ್ಚಿನ ಹಣ ಹಾಕಿ ಪರಿಹಾರ ನೀಡಬೇಕು. ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆ. ಸರ್ಕಾರದ ಖಜಾನೆಯಲ್ಲಿ ಹಣ ಇಲ್ಲ. ಸರ್ಕಾರ ಪಾಪರ್ ಆಗಿದೆ, ಕಳೆದ ಆರೇಳು ತಿಂಗಳಿನಿಂದ ಅದೇ ಸ್ಥಿತಿಯಲ್ಲಿದೆ. ಈಗ ಗ್ಯಾರೆಂಟಿಗಾಗಿ ಟ್ಯಾಕ್ಸ್ ಹಾಕುತ್ತಿದ್ದಾರೆ. ದಲಿತರ ಹಣ ಉಪಯೋಗಿಸಿಕೊಂಡಿದ್ದಾರೆ. ಸರ್ಕಾರದ ಬಳಿ ಹಣ ಇಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ರೊಟ್ಟಿ ಮೇಲೆ ಉಗುಳಿದ ಅನ್ಯಕೋಮಿನ ವ್ಯಾಪಾರಿ; ರಾಮ-ಶಬರಿಗೆ ಹೋಲಿಸಿದ ಸೋನು ಸೂದ್ ವಿರುದ್ಧ ಆಕ್ರೋಶ
Advertisement
Advertisement
ಈ ಸರ್ಕಾರ ಪಾಪರ್ ಆಗಿದೆ, ಅವರ ಬಳಿ ದುಡ್ಡಿಲ್ಲ. ಎಸ್ಟಿಮೇಟ್ ಮಾಡದೇ ಗ್ಯಾರೆಂಟಿ ತಂದಿದ್ದಾರೆ. ಅದಕ್ಕೆ ಇವಾಗ ದಲಿತರ ಹಣ ಹುಡುಕುತ್ತಿದ್ದಾರೆ. ನಾನೇ ಸರ್ಕಾರಕ್ಕೆ ಹೇಳಿದ್ದೇನೆ. ಒಕ್ಕಲಿಗರ ನಿಗಮ, ಬ್ರಾಹ್ಮಣರು, ಲಿಂಗಾಯಿತರು ನಿಗಮದ ಹಣ ಇದೆ ಎಲ್ಲವನ್ನೂ ಬಳಸಿಕೊಳ್ಳಿ. ಇಲ್ಲಾ ಅಂದರೆ ನಿಮ್ಮ ಬಾಳು ಬೀದಿಗೆ ಬರುತ್ತದೆ. ಈ ಸರ್ಕಾರ ಒಂದು ರೀತಿ ಕೋಮಾ ಸ್ಟೇಜ್‌ನಲ್ಲಿದೆ. ನಾನು ಒಂದು ಒಳ್ಳೆಯ ಸಲಹೆ ಕೊಡ್ತೇನೆ. ನಿಮಗೆ ಯಾವ್ಯಾವ ಜಾತಿ ಬೇಕು, ಸಂವಿಧಾನ ಬದಲಾವಣೆ ಮಾಡಿ ಬಿಡೋಣ. ಇಂತಹ ಜಾತಿಯವರು ಲೂಟಿ ಹೊಡೆದರೆ, ಅಕ್ರಮ ಮಾಡಿದರೆ, ಕಳ್ಳತನ ಮಾಡಿದ್ರೆ ಏನು ಕ್ರಮ ತೆಗೆದುಕೊಳ್ಳುವ ಆಗಿಲ್ಲ ಎಂದು ಕಾನೂನು ಮಾಡಿಬಿಡಿ. ಈ ಜಾತಿಯವನಾದರೆ ಕಳ್ಳತನ ಮಾಡಬಹುದು, ಈ ಜಾತಿಯವನಾದರೆ ಕಳ್ಳತನ ಮಾಡಬಾರದು ಎಂದು ಸಂವಿಧಾನದಲ್ಲಿ ಇದೆಯಾ? ಈ ಸರ್ಕಾರ ಹಗರಣಗಳಲ್ಲಿ ಸಿಲುಕಿಕೊಂಡಿದೆ. ಹೊರಗಡೆ ಬರಲು ಆಗುತ್ತಿಲ್ಲ, ದಾರಿ ಕಾಣದಾಗಿದೆ. ಎಲ್ಲಾ ದಲಿತರ ಹಣ ಉಪಯೋಗಿಸಿಕೊಳ್ಳುತ್ತಿದ್ದಾರೆ. ವಾಲ್ಮೀಕಿ, ಮುಡಾದಲ್ಲೂ ದಲಿತರ ಹಣವೇ. ದಲಿತರ ತಲೆ ಮೇಲೆ ಚಪ್ಪಡಿ ಎಳೆಯುವ ಕೆಲಸವನ್ನು ಈ ಸರ್ಕಾರ ಮಾಡಿದೆ. ರಾಜ್ಯ ಸರ್ಕಾರಕ್ಕೆ ಮರ್ಯಾದೆ ಇಲ್ಲ, ತಪ್ಪಿಸಿಕೊಳ್ಳುವ ದಾರಿ ಇಲ್ಲ ಎಂದು ಚಾಟಿ ಬೀಸಿದ್ದಾರೆ.
Advertisement
ಹಿಂದುಳಿದ ನಾಯಕನಾಗಿದ್ದ ಸಿದ್ದರಾಮಯ್ಯಗೆ ಮಾತನಾಡಲು ಬಿಡುತ್ತಿಲ್ಲ ಎಂಬ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಮಾತನಾಡಬೇಕಾದರೆ ಡೆತ್‌ನೋಟ್‌ನ್ನು ಓದಿದ್ರು. ಅದರಲ್ಲಿ ಸಚಿವರು, ಎಂಎಲ್‌ಎ, ವಾಲ್ಮೀಕಿ ನಿಗಮದ ಅಧ್ಯಕ್ಷರ ಹೆಸರನ್ನು ಬಿಟ್ಟು ಓದುತ್ತಾರೆ. ಜನರಿಗೆ ತಪ್ಪು ಮಾಹಿತಿ ಹೋಗಬಾರದು, ಅದನ್ನು ಓದಿ. ಯಾರೂ ಭಾಗಿಯಾಗಿಲ್ಲ. ಅಧಿಕಾರಿಗಳೇ ಎಲ್ಲಾ ತಿಂದು ಹಾಕಿದ್ದಾರೆ ಅಂತ ಹೇಳಿದ್ದಾರೆ. 187 ಕೋಟಿ ಅಧಿಕಾರಿಗಳೇ ತಿನ್ನಲು ಆಗುತ್ತಾ? ಅದರಿಂದ ದೊಡ್ಡ ತಿಮಿಂಗಿಲಗಳೇ ಇರುವುದರಿಂದ ತಿಂದಿದ್ದಾರೆ. ಅಧಿಕಾರಿಗಳು ಅಲ್ಲಿ ಇಲ್ಲಿ ಬಿದ್ದಿದ್ದನ್ನು ತಿಂದಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್‌ನಿಂದ ಕುವೈತ್‌ನ ಫ್ಲ್ಯಾಟ್‌ನಲ್ಲಿ ಬೆಂಕಿ – ಕೇರಳ ಮೂಲದ ದಂಪತಿ, ಇಬ್ಬರು ಮಕ್ಕಳು ದುರ್ಮರಣ
Advertisement
ಹೆಚ್‌ಡಿಕೆ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದರೆ ಏನೂ ಪ್ರಯೋಜನವಿಲ್ಲ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿ, ಡಿ.ಕೆ.ಶಿವಕುಮಾರ್ ಬಂದರೆ ಪ್ರಯೋಜನ ಆಗುತ್ತೆ ಅಂದರೆ ಅವರು ಮನೆ ಬಿಟ್ಟು ಬರಬೇಕು. ಅವರು ಬರಲ್ಲ, ಕೇಂದ್ರ ಸಚಿವರು ಬಂದರೆ ಪರಿಹಾರ ಸಿಗಲ್ಲ ಅಂತೀರಾ, ನೀವಾದರೂ ಬನ್ನಿ. ನಿಮಗೆ ಬರುವ ಯೋಗ್ಯತೆ ಇಲ್ಲವಾ? ನೀವು ಬಂದು ಬೇರೆಯವರಿಗೆ ಬುದ್ದಿವಾದ ಹೇಳಿ. ನೀವು ಕೊಡುತ್ತಿರುವುದು ಎನ್‌ಡಿಆರ್‌ಎಫ್ ಹಣ, ನೀವು ನಯಾಪೈಸೆ ಕೊಟ್ಟಿಲ್ಲ. ಕುಮಾರಸ್ವಾಮಿ ಬರಲು ರೈಟ್ಸ್ ಇದೆ, ಕೇಳಲು ರೈಟ್ಸ್ ಇದೆ. ಕುಮಾರಸ್ವಾಮಿ ಕೇಂದ್ರ ಮಂತ್ರಿ ಇದ್ದಾರೆ. ರಾಷ್ಟ್ರೀಯ ಹೆದ್ದಾರಿ ಕೇಂದ್ರಕ್ಕೆ ಸೇರುತ್ತೆ. ಎಲ್ಲರೂ ಒಕ್ಕೂಟದ ವ್ಯವಸ್ಥೆಯಲ್ಲಿದ್ದೀರಿ. ಕುಮಾರಸ್ವಾಮಿ ಅವರಿಗೆ ಕೈಯಲ್ಲಿ ಆಗಲ್ಲ ಅಂದರೆ ನೀವು ಬಂದು ಕೆಲಸ ಮಾಡಿ. ಕುಮಾರಸ್ವಾಮಿ ದೇಶ ಎಲ್ಲಾ ಸುತ್ತಬೇಕು, ಅದರ ನಡುವೆ ಕರ್ನಾಟಕಕ್ಕೆ ಆದ್ಯತೆ ಕೊಟ್ಟು ಬರುತ್ತಿದ್ದಾರೆ. ನಿಮಗೆ ಏಕೆ ಬರಲು ಆಗುತ್ತಿಲ್ಲ. ಸರ್ಕಾರ ಸತ್ತು ಹೋಗಿದೆ, ಸರ್ಕಾರ ಬದುಕಿದ್ದರೆ ತಾನೇ ಏನಾದರೂ ಕೇಳೋದು. ಸರ್ಕಾರ ಸ್ಕ್ಯಾಂಡಲ್‌ಗಳಿಗೆ ಮುಳುಗಿ ಉತ್ತರ ಕೊಡಲು ಆಗುತ್ತಿಲ್ಲ. ಸರ್ಕಾರ ಬದುಕಿದೆ ಅಂತಾ ಮೊದಲು ತೋರಿಸಲಿ ಎಂದು ಸವಾಲು ಹಾಕಿದ್ದಾರೆ.