ಬೆಂಗಳೂರು: ಜಗದೀಶ್ ಶೆಟ್ಟರ್ ರಾಜೀನಾಮೆ ಕೊಟ್ಟು ಬಿಜೆಪಿಗೆ ವಾಪಸ್ಸಾದ್ರು. ಇವರು ಪಕ್ಷಕ್ಕೆ ರಾಜೀನಾಮೆ ಕೊಟ್ಟು, ಮತ ಹಾಕಬಹುದಿತ್ತು ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಅಸಮಾಧಾನ ಹೊರಹಾಕಿದರು.
ರಾಜ್ಯಸಭಾ ಚುನಾವಣೆಯಲ್ಲಿ (Rajya Sabha Election) ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕರ ವಿರುದ್ಧ ಕಿಡಿಕಾರಿದ ಆರ್.ಅಶೋಕ್, ನಮ್ಮ ಮತದಾನ 47 ಬಿಜೆಪಿ ಅಭ್ಯರ್ಥಿಗೆ ವೋಟ್ ಹಾಕಲು ವಿಪ್ ಕೊಟ್ಟಿದ್ದೆವು. ಎಸ್.ಟಿ.ಸೋಮಶೇಖರ್ (S.T.Somashekar), ಶಿವರಾಮ್ ಹೆಬ್ಬಾರ್‌ಗೂ ವಿಪ್ ಕಳಿಸಿದ್ದೆವು. ಕಳೆದ ವಾರದಿಂದ ಸೋಮಶೇಖರ್, ಹೆಬ್ಬಾರ್ ಮಾತಾಡಿದ್ರು. ಹೆಬ್ಬಾರ್ ಕೊನೆ ಕ್ಷಣದವರೆಗೂ ಮಾತಾಡಿದ್ರು. ನಾವು ಪಕ್ಷಕ್ಕೆ ಮೋಸ ಮಾಡಲ್ಲ ಅಂದ್ರು. ತಾಯಿಗೆ ಮೋಸ ಮಾಡಲ್ಲ ಅಂದಿದ್ರು ಎಂದು ನೆನಪಿಸಿಕೊಂಡರು. ಇದನ್ನೂ ಓದಿ: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಶಾಕ್ – ಕಾಂಗ್ರೆಸ್ ಪರ ಎಸ್.ಟಿ.ಸೋಮಶೇಖರ್ ಮತ
Advertisement
Advertisement
ಸೋಮಶೇಖರ್ ಅಡ್ಡ ಮತದಾನ ಮಾಡಿದ್ದಾರೆ ಅಂತಾ ಗೊತ್ತಾಗಿದೆ. ಈ ರೀತಿ ಪದೇ ಪದೆ ಮೋಸ ಮಾಡೋದನ್ನ ಜನ ಸಹಿಸಲ್ಲ. ಸೋಮಶೇಖರ್ ಮಂತ್ರಿ ಮಾಡಿ, ಮೈಸೂರು ಇನ್ ಚಾರ್ಜ್ ಮಾಡಿದ್ದೆವು. ಅಭಿವೃದ್ಧಿಗೆ ಹಣ ಅಂತಾರೆ. ಹಿಂದೆ ಎಷ್ಟು ಬಾರಿ ಹಣ ಕೊಟ್ಟಿಲ್ಲ ಎಂದು ಪ್ರಶ್ನಿಸಿದರು.
Advertisement
ಸೋಮಶೇಖರ್ ನಡೆ ರಾಜಕೀಯ ಆತ್ಮಹತ್ಯೆ. ನಮ್ಮ ವಿವೇಕ್ ರೆಡ್ಡಿ ಅವರ ಜೊತೆ ಚರ್ಚೆ ಮಾಡಿದ್ದೇವೆ. ಅವರು ಏನೆಲ್ಲಾ ಮಾಡಬಹುದು ಅನ್ನೋದು ತಿಳಿಸಿದ್ದಾರೆ. ಸೋಮಶೇಖರ್ ಅವರೇ ನಿನ್ನೆ ಕರೆ ಮಾಡಿದ್ರು. ದ್ರೋಹ ಬಗೆಯಲ್ಲ ಅಂತ ಹೇಳಿದ್ರು. ಸೋಮಶೇಖರ್, ಡಿಕೆಶಿ ಹಾಗೂ ಸಿದ್ದರಾಮಯ್ಯ ಜೊತೆಗೆ ಓಡಾಡುವಾಗಲೇ ಗುಮಾನಿ ಇತ್ತು. ಜನ ಅವರನ್ನ ಕ್ಷಮಿಸಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಜೆಡಿಎಸ್‍ನವರಿಗೆ ಆತ್ಮನೇ ಇಲ್ಲ, ಆತ್ಮಸಾಕ್ಷಿ ಮತ ಎಲ್ಲಿ ಬರುತ್ತೆ?: ಸಿಎಂ
Advertisement
ಪಕ್ಷದಿಂದ ಕೈಬಿಡುವ ವಿಚಾರವಾಗಿ ಮಾತನಾಡಿ, ಜಗದೀಶ್ ಶೆಟ್ಟರ್ ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದ್ರು. ಇವರು ಪಕ್ಷಕ್ಕೆ ರಾಜೀನಾಮೆ ಕೊಟ್ಟು, ಮತ ಹಾಕಬಹುದಿತ್ತು. ಕಾನೂನು ತಜ್ಞರ ಜೊತೆ ಚರ್ಚಿಸಿ ನಿರ್ಧಾರ ಮಾಡ್ತೀವಿ. ಬಿಜೆಪಿ ಗೆಲ್ಲಲಿದೆ ಎಂದರು.
ಸ್ಪರ್ಧೆ ಆಗಬೇಕು ಅನ್ನೋ ದೃಷ್ಟಿಯಿಂದ ಸ್ಪರ್ಧೆ ಆಗಿದೆ. ಚುನಾವಣೆ ಅಂದ ಮೇಲೆ ಸೋಲು, ಗೆಲುವು ಇದ್ದೇ ಇದೆ. ಇದು ಬಿಜೆಪಿ, ಜೆಡಿಎಸ್ ಸೋಲು ಅಂತ ಅಲ್ಲ ಎಂದು ಹೇಳಿದರು. ಇದನ್ನೂ ಓದಿ: ಸೋಮಶೇಖರ್ ವಿರುದ್ಧ ಸ್ಪೀಕರ್‌ಗೆ ದೂರು: ದೊಡ್ಡನಗೌಡ ಪಾಟೀಲ್