– ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಗೆ ಸಿಟಿ ರವಿ ಆಕ್ರೋಶ
– ದಿಢೀರ್ ಬೆಲೆ ಏರಿಕೆ ಯಾವ ಪುರುಷಾರ್ಥಕ್ಕೆ – ಬಿಜೆಪಿ ಪ್ರಶ್ನೆ
ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Elections) ಮುಗಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಮಾಡಿ ವಾಹನ ಸವಾರರಿಗೆ ಶಾಕ್ ಕೊಟ್ಟಿದ್ದೆ. ಪೆಟ್ರೋಲ್, ಡಿಸೇಲ್ ಮೇಲಿನ ಟ್ಯಾಕ್ಸ್ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಿಟೇಲ್ ಸೇಲ್ಸ್ ಟ್ಯಾಕ್ಸ್ ದರ ಹೆಚ್ಚಳ ಮಾಡಲಾಗಿದೆ. ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ (Petrol Price) 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳವಾಗಿದೆ.
ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashoka), ಮಾಜಿ ಸಚಿವ ಸಿ.ಟಿ ರವಿ (CT Ravi), ಅಮಿತ್ ಮಾಳವಿಯಾ ಸೇರಿದಂತೆ ಅನೇಕ ನಾಯಕರು ವ್ಯಾಪಕವಾಗಿ ಟೀಕಿಸಿದ್ದಾರೆ. ಇದನ್ನೂ ಓದಿ: `ಡಿ’ಬಾಸ್ ಬಗ್ಗೆ ಮಾತಾಡಿದ್ರೆ ಜೀವಂತ ಸುಡೋದಾಗಿ ಬೆದರಿಕೆ – ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ವಶಕ್ಕೆ
Advertisement
ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿದೆ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ.
ಅವೈಜ್ಞಾನಿಕ ಗ್ಯಾರೆಂಟಿಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿರುವ @INCKarnataka ಸರ್ಕಾರ ಕನ್ನಡಿಗರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ತುಂಬಿಸಲು ಹೊರಟಿದೆ.
ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ… pic.twitter.com/JKUwZZcGKb
— R. Ashoka (ಮೋದಿ ಅವರ ಕುಟುಂಬ) (@RAshokaBJP) June 15, 2024
Advertisement
ಅಶೋಕ್ ಎಕ್ಸ್‌ನಲ್ಲಿ ಏನಿದೆ?
ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ (BJP) ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿದೆ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ. ಅವೈಜ್ಞಾನಿಕ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ತುಂಬಿಸಲು ಹೊರಟಿದೆ.
Advertisement
ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ ಮತ್ತು ಡೀಸೆಲ್ ಬೆಲೆ 3.50 ರೂ. ಹೆಚ್ಚಳ ಮಾಡಿ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದೆ. ಇದನ್ನೂ ಓದಿ: ರಾಜ್ಯದ ವಾಹನ ಸವಾರರಿಗೆ ಶಾಕ್; ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
Advertisement
“ಪೆಟ್ರೋಲ್ ಡಿಸೀಲ್ ಮೇಲೆ ಸೆಸ್ ವಿಧಿಸಿದ ಜನ ವಿರೋಧಿ, ಬಡವರ ವಿರೋಧಿ ಸರ್ಕಾರ”
ಉಚಿತ ಉಚಿತ ಉಚಿತ ಎಂದು ರಾಜ್ಯದ ಜನರ ಮುಂಗೈಗೆ ತುಪ್ಪ ಹಚ್ಚುತ್ತಾ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಕಳೆದ ಒಂದು ವರ್ಷದ ಅಧಿಕಾರಾವಧಿಯಲ್ಲಿ ಎರಡಕ್ಕೂ ಹೆಚ್ಚು ಬಾರಿ ಪೆಟ್ರೋಲ್ ಮೇಲಿನ ಸೆಸ್ ಜಾಸ್ತಿ ಮಾಡಿದೆ.
1/2 pic.twitter.com/2g9odFWrjp
— C T Ravi 🇮🇳 ಸಿ ಟಿ ರವಿ (@CTRavi_BJP) June 15, 2024
ಸಿ.ಟಿ ರವಿ ಹೇಳಿದ್ದೇನು?
ಪೆಟ್ರೋಲ್, ಡೀಸೆಲ್ ಮೇಲೆ ಸೆಸ್ ವಿಧಿಸಿದ ಜನ ವಿರೋಧಿ, ಬಡವರ ವಿರೋಧಿ ಸರ್ಕಾರ. ಉಚಿತ ಉಚಿತ ಉಚಿತ ಎಂದು ರಾಜ್ಯದ ಜನರ ಮುಂಗೈಗೆ ತುಪ್ಪ ಹಚ್ಚುತ್ತಾ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಕಳೆದ ಒಂದು ವರ್ಷದ ಅಧಿಕಾರಾವಧಿಯಲ್ಲಿ ಎರಡಕ್ಕೂ ಹೆಚ್ಚು ಬಾರಿ ಪೆಟ್ರೋಲ್ ಮೇಲಿನ ಸೆಸ್ ಜಾಸ್ತಿ ಮಾಡಿದೆ.
ರಾಜ್ಯದಲ್ಲಿ ಇಂದಿನಿಂದ ಪೆಟ್ರೋಲ್ ಬೆಲೆ ಸರಾಸರಿ ಮೂರೂ ರೂಪಾಯಿ ಹಾಗೂ ಡಿಸೇಲ್ ಬೆಲೆ ಸರಾಸರಿ ಮೂರುವರೆ ರೂಪಾಯಿಯಷ್ಟು ಜಾಸ್ತಿ ಮಾಡಿದೆ. ʻನಾನು ಬಡವರ ಪರʼ ಎಂದು ಬೊಬ್ಬೆ ಹೊಡೆಯುವ ಮುಖ್ಯಮಂತ್ರಿಯವರೇ ಇದೆ ಏನು ನಿಮ್ಮ ಬಡವರ ಪರ ನೀತಿ? ನಾಚಿಕೆಯಾಗಬೇಕು ನಿಮ್ಮ ಜನ ವಿರೋಧಿ ಸರ್ಕಾರಕ್ಕೆ, ನಾಚಿಕೆಯಾಗಬೇಕು ನಿಮ್ಮ ಕಾಂಗ್ರೆಸ್ ಪಕ್ಷಕ್ಕೆ ಎಂದು ಕಟುವಾಗಿ ದಾಳಿ ನಡೆಸಿದ್ದಾರೆ.
Karnataka government hikes petrol, diesel prices by Rs 3 per litre. Revised prices will come into immediate effect.
The Congress was waiting for the elections to get over before it could fleece the people of Karnataka…https://t.co/2AcJEGImbd
— Amit Malviya (@amitmalviya) June 15, 2024
ಅಮಿತ್ ಮಾಳವಿಯಾ:
ಕರ್ನಾಟಕ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಹೆಚ್ಚಿಸಿದ್ದು, ಪರಿಷ್ಕೃತ ದರ ತಕ್ಷಣದಿಂದಲೇ ಜಾರಿಗೆ ಬರಲಿವೆ. ಕರ್ನಾಟಕದ ಜನತೆ ಬಳಿ ನುಂಗಿ ನೀರು ಕುಡಿಲು ಲೋಕಸಭಾ ಚುನಾವಣೆ ಮುಗಿಯುವುದನ್ನೇ ಕಾಂಗ್ರೆಸ್ ಕಾಯುತ್ತಿತ್ತು ಎಂದು ಟೀಕಿಸಿದ್ದಾರೆ.ಇದನ್ನೂ ಓದಿ: ತುಮಕೂರಲ್ಲಿ ಕಲುಷಿತ ನೀರು ಸೇವಿಸಿ ದುರ್ಮರಣ – ಸಾವಿಗೆ ಸರ್ಕಾರವೇ ನೇರ ಹೊಣೆ ಎಂದ ಅಶೋಕ್
ರಾಜ್ಯ ಬಿಜೆಪಿ ಘಟಕ:
ಕನ್ನಡಿಗರಿಗೆ ಪದೇ ಪದೇ ಬೆಲೆ ಏರಿಕೆಯ ಬರೆ ಹಾಕುವುದೇ ಕಾಂಗ್ರೆಸ್ ಸರ್ಕಾರದ ಅಸಲಿ ಕರ್ನಾಟಕ ಮಾಡೆಲ್. ಪೆಟ್ರೋಲ್ ಬೆಲೆ ಪ್ರತಿ ಲೀ. ಗೆ 3 ರೂ. ಹಾಗೂ ಡೀಸೆಲ್ ಬೆಲೆ ಪ್ರತಿ ಲೀ.ಗೆ 3.50 ರೂ. ಅನ್ನು ಏಕಾಏಕಿ ಹೆಚ್ಚಿಸಿದೆ ರಾಜ್ಯ ಕಾಂಗ್ರೆಸ್ ಸರ್ಕಾರ. ಸಿಎಂ ಸಿದ್ದರಾಮಯ್ಯ ಅವರೇ, ಪೆಟ್ರೋಲಿಯಂ ಕಚ್ಚಾತೈಲದ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ, ಮೇಲಾಗಿ ನೀವೇ ಹೇಳಿದಂತೆ ಸರ್ಕಾರದ ಬೊಕ್ಕಸ ತುಂಬಿ ತುಳುಕುತ್ತಿದೆ, ಕರ್ನಾಟಕ ದಿವಾಳಿ ಸಹ ಆಗಿಲ್ಲ, ಅಂದ ಮೇಲೆ ದಿಢೀರ್ ಅಂತ ಈ ಬೆಲೆ ಏರಿಕೆ ಯಾವ ಪುರುಷಾರ್ಥಕ್ಕೆ? ನಿಮಗೆ ನಿಜಕ್ಕೂ ಬಡವರ ಮೇಲೆ ಕಾಳಜಿ ಇದ್ದರೆ, ಕೂಡಲೇ ಬೆಲೆ ಏರಿಕೆ ಆದೇಶವನ್ನು ಹಿಂಪಡೆಯಿರಿ, ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಎದುರಿಸಲು ಸಿದ್ದವಾಗಿ ಎಂದು ರಾಜ್ಯ ಬಿಜೆಪಿ ಘಟಕ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದೆ.
ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್- 25.92% ಇದ್ದದ್ದು, ಈಗ 29.84% ಗೆ ಏರಿಕೆ (3.9% ಹೆಚ್ಚಳ)ಯಾಗಿದೆ. ಅಂತೆಯೇ ಡಿಸೇಲ್ ಈ ಹಿಂದೆ- 14.34% ಇದ್ದದ್ದು, ಈಗ 18.44%ಗೆ ಏರಿಕೆ ಕಂಡಿದೆ (4.1% ರಷ್ಟು ಏರಿಕೆ).