ಬೆಂಗಳೂರು: ಗಣೇಶೋತ್ಸವಕ್ಕೆ ಯಾವ ರೀತಿ ಅನುಮತಿ ನೀಡಬೇಕೆಂದು ಸೆಪ್ಟೆಂಬರ್ 5ರಂದು ಮುಖ್ಯಮಂತ್ರಿಗಳು ಸಭೆ ನಡೆಸಲಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಇಂದಿನ ಸಭೆಯಲ್ಲಿ ಗಣೇಶೋತ್ಸವ ಆಚರಣೆ ಕುರಿತು ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.
ಸಿಎಂ ಜೊತೆಗಿನ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಗಣೇಶ ಹಬ್ಬದ ಕುರಿತು ದೊಡ್ಡ ಹೆಜ್ಜೆ ಇರಿಸಬೇಕಾಗುತ್ತದೆ. ಹಲವು ಜಿಲ್ಲೆಗಳಲ್ಲಿ ದೊಡ್ಡದಾಗಿ ಹಬ್ಬವನ್ನ ಆಚರಣೆ ಮಾಡಲಾಗುತ್ತೆ. ಈ ಸಂಬಂಧ ಜಿಲ್ಲಾಧಿಕಾರಿಗಳು ಮತ್ತು ಎಸ್.ಪಿ ಅವರಿಂದ ಮಾಹಿತಿ ಪಡೆದುಕೊಳ್ಳಲಾಗುತ್ತದೆ. ಜೊತೆಗೆ ದೊಡ್ಡ ಮಟ್ಟದಲ್ಲಿ ಗಣೇಶ ವಿಗ್ರಹ ಪ್ರತಿಷ್ಠಾಪನೆ ಮಾಡುವ ಆಯೋಜಕರೊಂದಿಗೆ ಸಿಎಂ ಚರ್ಚೆ ಮಾಡಿ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ತಿಳಿಸಿದರು.
ಸಂಕಷ್ಟ ಹರ ಗಣಪತಿ ಬಂದ ಮೇಲೆ ನಮಗೆಲ್ಲ ಒಳ್ಳೆಯದ್ದು ಅಗಿರುವುದು. ನಮ್ಮ ಸಂಕಷ್ಟಗಳು ಮುಗಿದು ಹೋಯಿತು. ಗಣಪತಿ ಹಬ್ಬಕ್ಕೆ ಇರುವ ಎಲ್ಲ ಸಂಕಷ್ಟಗಳು ನಿವಾರಣೆಯಾಗಲಿ ಎಂದು ನಾನು ನಿಮ್ಮೆಲ್ಲರ ಪರವಾಗಿ ವಾದವನ್ನು ಮಂಡಿಸಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಪ್ಯಾರಾಲಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನ- ಜಾವೆಲಿಸ್ ಎಸೆದು ಚಿನ್ನ ಪಡೆದ ಸುಮಿತ್
ಸರ್ಕಾರ ಕೊರೊನಾವನ್ನು ಗಮನದಲ್ಲಿಟ್ಟುಕೊಂಡು ಗಣೇಶ ಹಬ್ಬಕ್ಕೆ ಯಾವ ರೀತಿ ಅನುಮತಿ ಕೊಡಬಹುದು ಎನ್ನುವುದನ್ನು ಯೋಚನೆ ಮಾಡುತ್ತೀದ್ದೇವೆ. ಗಣೇಶ ನಮ್ಮ ಆರಾಧ್ಯ ದೈವನಾಗಿದ್ದಾನೆ. ವಿಘ್ನ ವಿನಾಯಕನ ಆರಾಧನೆ ಮಾಡುವುದಕ್ಕಿ ಮುಖ್ಯಮಂತ್ರಿಗಳು ಪಾಸಿಟಿವ್ ಆಗಿ ಯೋಚನೆ ಮಾಡುತ್ತಿದ್ದಾರೆ ಎಂದಿದ್ದಾರೆ.
ನಾವು ಸಭೆಯನ್ನು ನಡೆಸಿದ್ದೇವೆ, ನಾನು ಕೂಡಾ ಪರವಾಗಿ ಬ್ಯಾಟಿಂಗ್ ಮಾಡಿದ್ದೇನೆ. ಜನರ ಆರೋಗ್ಯ, ಕೊರೊನಾ ಈ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಒಳ್ಳೆಯ ತೀರ್ಮಾನವನ್ನು ಮುಖ್ಯಂತ್ರಿಗಳು ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.