– ಕೊಡಗಿನಲ್ಲಿ ಹಿಂದೂಗಳ ಹತ್ಯೆ ಮಾಡಿದ ಚರಿತ್ರೆ ಟಿಪ್ಪು ಹೆಸರಲ್ಲಿದೆ ಎಂದ ಶಾಸಕ
ಮಂಡ್ಯ: ಮೈಸೂರು ವಿಮಾನ ನಿಲ್ದಾಣಕ್ಕೆ (Mysuru Airport) ಟಿಪ್ಪು ಸುಲ್ತಾನ್ ಹೆಸರು ನಾಮಕಾರಣ ಮಾಡುವಂತೆ ಒತ್ತಾಯ ಮಾಡುತ್ತಿರುವ ಕಾಂಗ್ರೆಸ್ ಶಾಸಕರಿಗೆ ಆಯಾ ಕ್ಷೇತ್ರದ ಜನರೇ ಬುದ್ದಿ ಕಲಿಸುತ್ತಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashoka) ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟಿಪ್ಪು (Tipu Sultan) ಒಬ್ಬ ಮತಾಂಧ, ಮಂಡ್ಯದಲ್ಲಿ ಅವನ ಚರಿತ್ರೆ ಇದೆ. ಕೊಡಗಿನಲ್ಲಿ ಹಿಂದೂಗಳ ಹತ್ಯೆ ಮಾಡಿದ್ದ ಚರಿತ್ರೆ ಇದೆ. ಮೇಲುಕೋಟೆಯಲ್ಲಿ ಬ್ರಾಹ್ಮಣರನ್ನ ಕಟ್ಟಾಕಿ ಕತ್ತರಿಸಿ ಹಾಕಿದ್ದ ಎಲ್ಲಾ ಇತಿಹಾಸವಿದೆ. ಟಿಪ್ಪು ಸ್ವತಂತ್ರ ಹೋರಾಟಗಾರ ಅಲ್ಲ. ಆಗ ಮೈಸೂರು ಆಡಳಿತ ನಡೆಸುತ್ತಿದ್ದವರು ಒಡೆಯರ್ ವಂಶಸ್ಥರು. ಹೈದರಾಲಿ ಚಾಕ್ರಿ, ಕೂಲಿಗೆ ಬಂದು ಒಡೆಯರ್‌ಗೆ ಮೋಸ ಮಾಡಿ ಸಿಂಹಾಸನ ಏರೋಕೆ ಬಂದಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕ್ರೀಡಾ ವಿದ್ಯಾರ್ಥಿಯೊಂದಿಗೆ ಕಾರಿನಲ್ಲಿ ಸೆಕ್ಸ್ – ಶಿಕ್ಷಕಿಯನ್ನ ರೆಡ್‌ಹ್ಯಾಂಡಾಗಿ ಹಿಡಿದು ಪೊಲೀಸರಿಗೊಪ್ಪಿಸಿದ ತಾಯಿ
ಟಿಪ್ಪು ಸುಲ್ತಾನ್‌ನನ್ನ ಹೋರಾಟಗಾರ ಅಂತಾರಲ್ಲ ನಾಚಿಕೆ ಆಗಲ್ವ? ಟಿಪ್ಪು, ಹೈದರಾಲಿ ಡ್ಯಾಂ ಕಟ್ಟಿಸಿದ್ರಾ? ಒಂದು ಕೆರೆನಾದ್ರೂ ಕಟ್ಟಿಸಿದ್ರಾ? ಆಸ್ಪತ್ರೆ, ಶಿಕ್ಷಣ ಸಂಸ್ಥೆ ಕಟ್ಟಿಸಿದ್ರಾ? ಎಲ್ಲವನ್ನು ಕಟ್ಟಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್. ವೋಟಿಗೋಸ್ಕರ ಕಾಂಗ್ರೆಸ್‌ನವರು ಹೋರಾಟಗಾರ ಅಂತಾರೆ. ವೋಟಿಗೋಸ್ಕರ ಎಂತಹ ಕೀಳು ಮಟ್ಟಕ್ಕೆ ಕಾಂಗ್ರೆಸ್‌ನವರು ಹೋಗ್ತಾರೆ. ಕಾಂಗ್ರೆಸ್ ಟಿಪ್ಪು ಸಿದ್ಧಾಂತದ ಮೇಲೆ ಬಂದಿದ್ದಾರೆ, ನಾವೂ ಹಿಂದುತ್ವದ ಸಿದ್ಧಾಂತದ ಮೇಲೆ ಬಂದಿದ್ದೇವೆ. ಜನರು ಅದರ ಬಗ್ಗೆ ಮುಂದೆ ತೀರ್ಮಾನ ಮಾಡ್ತಾರೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಕೊರೊನಾ ಭೀತಿ ಮತ್ತೆ ಶುರು; ಕೇರಳದ ಮಹಿಳೆಯಲ್ಲಿ ಕೋವಿಡ್ ಉಪತಳಿ ಜೆಎನ್.1 ಪತ್ತೆ