ಕಲಬುರಗಿ: 2019ರ ಲೋಕಸಭಾ ಚುನಾವಣೆಯಲ್ಲಿ (Lok Sabha Elections) ಸೋಲನುಭವಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಬಾರಿಯೂ ಸೋಲು ಖಚಿತ. ಆ ಭಯದಿಂದಲೇ ಚುನಾವಣೆಯಿಂದ ದೂರ ಸರಿದಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ (R Ashoka) ವಾಗ್ದಾಳಿ ನಡೆಸಿದ್ದಾರೆ.
ಕಲಬುರಗಿ (Kalaburagi) ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಯಂತೆ ಈ ಬಾರಿಯೂ ಸೋಲುತ್ತೇನೆ ಎಂಬ ಭಯದಿಂದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಚುನಾವಣೆಯಲ್ಲಿ ಸ್ಪರ್ಧಿಸದೇ, ದೂರ ಉಳಿಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಡಿ ಕಸ್ಟಡಿಯಲ್ಲಿದ್ದುಕೊಂಡೇ ಮೊದಲ ಸರ್ಕಾರಿ ಆದೇಶ ಹೊರಡಿಸಿದ ಕೇಜ್ರಿವಾಲ್ – ಆದೇಶದಲ್ಲಿ ಏನಿದೆ?
Advertisement
Advertisement
ರಾಜ್ಯದಲ್ಲಿ ಎಲ್ಲರೂ ಮೀನುಗಳಿಗೆ ಗಾಳ ಹಾಕಿಕೊಂಡು ಕುಳಿತಿದ್ದಾರೆ. ಡಿಕೆ ಶಿವಕುಮಾರ್, ಜಿ. ಪರಮೇಶ್ವರ್, ಮಹದೇವ ಪ್ರಸಾದ್ ಅವರಿಂದ ಹಿಡಿದು ಸಾಕಷ್ಟು ಜನ ಮೀನು ಹಿಡಿಯಲು ಬಲೆ ಬೀಸಿದ್ದಾರೆ. ಆದ್ರೆ ಕಾಂಗ್ರೆಸ್ ಪಕ್ಷವನ್ನು ಸ್ವತಃ ಕಾಂಗ್ರೆಸ್ ಪಕ್ಷದವರೇ ಮುಗಿಸಲಿದ್ದಾರೆ ಎಂಬುದು ಅವರಿಗೆ ಗೊತ್ತಿಲ್ಲ. ನಾವು ಆಪರೇಷನ್ ಕಮಲ ಮಾಡಬೇಕು, ಅವರ ಪಕ್ಷವನ್ನು ಮುಗಿಸಬೇಕು ಅನ್ನೋದು ನಮ್ಮಲಿ ಇಲ್ಲ ಎಂದು ಕುಟುಕಿದ್ದಾರೆ.
Advertisement
ಸಿಎಂ ಸಿದ್ದರಾಮಯ್ಯ ಅವರು ಬಿದ್ದ ತಕ್ಷಣ ತಾವು ಸಿಎಂ ಆಗಬೇಕೆಂದು ಹಲವರು ಪಕ್ಷದಲ್ಲಿ ಕನಸು ಕಾಣುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷದವರೇ ಸಾಕು ಕಾಂಗ್ರೆಸ್ ಸರ್ಕಾರ ಬಿಳಿಸುವುದಕ್ಕೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಜಯಪುರ ಕೋಲ್ಡ್ ಬ್ಲಡ್ ಮರ್ಡರ್ ಕೇಸ್ – 1 ವರ್ಷದ ಬಳಿಕ ಪ್ರಕರಣ ಭೇದಿಸಿದ ಪೊಲೀಸರು
Advertisement
ಬರ ಪರಿಹಾರದ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮೊರೆ ಹೋದ ವಿಚಾರವಾಗಿ ಮಾತನಾಡಿದ ಅಶೋಕ್, ರಾಜ್ಯದ ಕಾಂಗ್ರೆಸ್ ನಾಯಕರಿಗೆ ನಾಚಿಕೆಗೇಡಿನ ಸಂಗತಿ. ರಾಜ್ಯದ ಕಾಂಗ್ರೆಸ್ ನಾಯಕರು, ಪಕ್ಕದ ತೆಲಂಗಾಣದ ಸಿಎಂ ರೇವಂತ ರೆಡ್ಡಿ ನೋಡಿ ಕಲಿತುಕೊಳ್ಳಲಿ, ಅವರು ಸಹ ಕಾಂಗ್ರೆಸ್ ಪಕ್ಷದವರೇ ಆಗಿದ್ದಾರೆ. ಆದ್ರೆ ಮೊನ್ನೆ ಪ್ರಧಾನಿ ಮೋದಿ ಅವರು ಬಂದಾಗ ದೇಶದ ಪ್ರಧಾನಿ ಜೊತೆಗೆ ಯಾವ ರೀತಿ ನಡೆದುಕೊಂಡಿದ್ದಾರೆ ಎಂಬುದು ರಾಜ್ಯದ ಕಾಂಗ್ರೆಸ್ ನಾಯಕರು ನೋಡಿ ಕಲಿತುಕೊಳ್ಳಲಿ ಎಂದಿದ್ದಾರೆ.
ರಾಜ್ಯದಲ್ಲಿ ಕಳೆದ 30 ವರ್ಷಗಳಿಂದ ಬರವಿದೆ. ಬರ ಬಂದಾಗ ಕೇಂದ್ರ ಸರ್ಕಾರ ರಾಜ್ಯಕ್ಕೆ ಆಗಮಿಸಿ ವಿಸಿಟ್ ಮಾಡಿ ಹೋಗಿದೆ. ಐದು ತಿಂಗಳ ಬಳಿಕ ಅವರು ಹಣ ಬಿಡುಗಡೆ ಮಾಡಿದ್ದಾರೆ. ನಾವು ನಮ್ಮ ಅವಧಿಯಲ್ಲಿ ಕೇಂದ್ರ ಸರ್ಕಾರದ ಹಣ ಬರುವ ಮುನ್ನವೇ ಪರಿಹಾರ ನೀಡಿದ್ದೇವೆ. ನಮ್ಮದು ಪಾಪರ್ ಸರ್ಕಾರ ಇರಲಿಲ್ಲ. ಬದಲಾಗಿ ಸಮೃದ್ಧಿ ಸರ್ಕಾರವಿತ್ತು. ಒಂದು ತಿಂಗಳ ಕಾಲಾವಧಿಯಲ್ಲಿ ರೈತರಿಗೆ ಕೊಡಬೇಕಾದ ಹಣ ಕೊಟ್ಟಿದ್ದೇವೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧಮ್ ಇದ್ದರೆ, ನಮಗೆ ಕೇಳಲಿ ಪ್ರವಾಹ ಬಂದಾಗ ನೀವು ಯಾವಾಗ ಕೊಟ್ಟಿದಿರಾ ಅಂತ? ನೀವು ಕೇಂದ್ರ ಸರ್ಕಾರ ಪರಿಹಾರ ಕೊಟ್ಟ ಮೇಲೆ ಕೊಟ್ಟಿದ್ದಿವಾ? ಎಂದು ಕೇಳಲಿ ನಾನು ಉತ್ತರ ಕೊಡುತ್ತೇನೆ. ಆದ್ರೆ ಈ ರಾಜ್ಯ ಸರ್ಕಾರ ಪಾಪರ್ ಸರ್ಕಾರವಾಗಿದೆ ಎಂದು ತಿವಿದಿದ್ದಾರೆ.