Connect with us

Bengaluru City

ಆರ್.ಆರ್.ನಗರ ಸೋಲಿಗೆ ಕಾರಣ ತಿಳಿಸಿದ ಸಿದ್ದರಾಮಯ್ಯ

Published

on

ಬೆಂಗಳೂರು: ಅಭ್ಯರ್ಥಿಯ ಆಯ್ಕೆಯ ವಿಳಂಬವಾಗಿದ್ದರಿಂದ ಆರ್.ಆರ್.ನಗರದ ಸೋಲಿಗೆ ಕಾರಣ ಇರಬಹುದು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎರಡೂ ಸೋಲುಗಳು ಕುರಿತು ಸಾಲು ಸಾಲು ಟ್ವೀಟ್ ಮೂಲಕ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದಾರೆ.

ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಸೋಲನ್ನು ನಾವು ವಿನೀತರಾಗಿ ಒಪ್ಪಿಕೊಂಡಿದ್ದೇವೆ. ಆದರೆ ಇದು ಪ್ರಜಾಪ್ರಭುತ್ವದ ಸೋಲು. ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು ಎನ್ನುವುದು ವಿಷಾದದ ಸಂಗತಿ. ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರರೂಢ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ. ಆಡಳಿತ ಪಕ್ಷದ ಶಾಸಕರಿದ್ದರೆ ತಮ್ಮ ಕ್ಷೇತ್ರಕ್ಕೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ಜನರಲ್ಲಿರುತ್ತದೆ. ಇದೇ ಫಲಿತಾಂಶ ಸಾಮಾನ್ಯ ಚುನಾವಣೆಯಲ್ಲಿ ನಿರೀಕ್ಷಿಸಲಾಗದು. ಇದನ್ನೂ ಓದಿ: ಮತದಾರರ ತೀರ್ಪಿಗೆ ತಲೆ ಬಾಗುತ್ತೇವೆ, ಕಾರ್ಯಕರ್ತರು ಧೃತಿಗೆಡಬಾರದು: ಡಿ.ಕೆ.ಸುರೇಶ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವನ್ನು ಸ್ವೀಕರಿಸಲೇಬೇಕು. ನಾವೂ ಒಪ್ಪಿಕೊಂಡಿದ್ದೇವೆ. ಇದರಿಂದ ಪಕ್ಷದ ಕಾರ್ಯಕರ್ತರು ಕಂಗೆಡಬೇಕಾಗಿಲ್ಲ. ಇದರಿಂದ ಯಾವ ಪಕ್ಷವೂ ಬಲಶಾಲಿಯಾಗುವುದಿಲ್ಲ, ಯಾವ ಪಕ್ಷವೂ ಬಲಹೀನವಾಗುವುದಿಲ್ಲ. ಇದು ಸಮಗ್ರ ರಾಜ್ಯದ ಜನಾಭಿಪ್ರಾಯ ಅಲ್ಲ, ಇದು ಎರಡು ಸ್ಥಾನಗಳಿಗೆ ನಡೆದ ಚುನಾವಣೆ ಮಾತ್ರ. ನಾನು ಮುಖ್ಯಮಂತ್ರಿಯಾಗಿದ್ದಾಗ ಜನರಿಗೆ ಒಳ್ಳೆಯದಾಗಲಿ, ನಮ್ಮ ಶಾಸಕನೂ ರಾಜಕೀಯವಾಗಿ ಜನಪ್ರಿಯನಾಗಲಿ ಎಂದು ಆರ್.ಆರ್.ನಗರಕ್ಕೆ ಸುಮಾರು ರೂ.2000 ಕೋಟಿ ಕಾಮಗಾರಿಯನ್ನು ಮಂಜೂರು ಮಾಡಿದ್ದೆ. ಅದರ ಫಲ ನಮ್ಮ ಪಕ್ಷಕ್ಕೆ ಸಿಗಲಿಲ್ಲ, ಅವರಿಗೆ ಸಿಕ್ಕಿದೆ. ಇದನ್ನೂ ಓದಿ: ಚುನಾವಣೆ ಗೆಲುವಿಗೆ ಬಂಡೆ ಅಡ್ಡಿಬರಲೇ ಇಲ್ಲ- ಡಿಕೆಶಿ ಕುಟುಕಿದ ಕೋಟ

ಮುನಿರತ್ನ ಅವರು ಪಕ್ಷಾಂತರ ಮಾಡಿದ ದಿನದಿಂದ ಚುನಾವಣಾ ತಯಾರಿ ಪ್ರಾರಂಭಿಸಿದ್ದರು. ನಾವು ನಮ್ಮ ಅಭ್ಯರ್ಥಿಯ ಆಯ್ಕೆಯನ್ನು ಸ್ವಲ್ಪ ತಡವಾಗಿ ಮಾಡಿದೆವು, ಇದರಿಂದಾಗಿ ಪ್ರಚಾರ ವಿಳಂಬವಾಗಿ ಪ್ರಾರಂಭಿಸಬೇಕಾಯಿತು. ಸೋಲಿಗೆ ಇದೂ ಒಂದು ಕಾರಣ ಇರಬಹುದು ಎಂದಿದ್ದಾರೆ. ಇದನ್ನೂ ಓದಿ: ಇದು ಬಿಎಸ್‍ವೈ ಸರ್ಕಾರದ ಜನಪರ ಕಾರ್ಯಗಳಿಗೆ ಜನ ನೀಡಿದ ಬೆಂಬಲ – ಸುಧಾಕರ್ ಬಣ್ಣನೆ

ಶಿರಾದಲ್ಲಿ ಟಿ.ಬಿ.ಜಯಚಂದ್ರ ಜನತೆಯ ಬದುಕು ಉಳಿಸುವ ನದಿನೀರು ಹರಿಸಿದ್ದರು. ಬಿಜೆಪಿಯವರು ಬಂದು ಅಕ್ರಮವಾಗಿ ಸಂಪಾದಿಸಿದ್ದ ಹಣದ ಹೊಳೆ ಹರಿಸಿದ್ದರು. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾದ ಬೆಳವಣಿಗೆ. ಜನರ ಸೇವೆ ಮಾಡಿದವರನ್ನು ಜನ ಪ್ರಾಮಾಣಿಕವಾಗಿ ಗುರುತಿಸಿ ಹರಸಬೇಕು ಎಂದು ಬೇಸರದ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಲೀಡರ್, ವರ್ಕರ್ ಪ್ರಾಬ್ಲಂ ಇಲ್ಲ, ವಿ ಹ್ಯಾವ್ ಫೇಲ್ : ಡಿಕೆಶಿ

ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಹೀನಾಯವಾಗಿ ಸೋತಿರುವುದರಿಂದ ಆ ಪಕ್ಷದ ಮತಗಳು ಬಿಜೆಪಿ ಬುಟ್ಟಿಗೆ ಬಿದ್ದು ಅವರ ಗೆಲುವಿಗೆ ನೆರವಾಯಿತು. ಮುಖ್ಯವಾಗಿ ಶಿರಾದಲ್ಲಿ ಜೆಡಿಎಸ್ ತನ್ನ ಮತಗಳನ್ನಾದರೂ ಉಳಿಸಿಕೊಂಡಿದ್ದರೆ ಖಂಡಿತ ಬಿಜೆಪಿ ಇಷ್ಟು ಸುಲಭದಲ್ಲಿ ಗೆಲ್ಲುತ್ತಿರಲಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆರ್‌ಆರ್‌ನಗರ ಕುರುಕ್ಷೇತ್ರ ಗೆದ್ದ ಮುನಿರತ್ನ – ಗೆಲುವಿಗೆ ಕಾರಣವಾಗಿದ್ದು ಏನು?

Click to comment

Leave a Reply

Your email address will not be published. Required fields are marked *

www.publictv.in