ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪ್ರಭಲವಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ನಮ್ಮದೇ ಅಭ್ಯರ್ಥಿ ಕಣಕ್ಕೆ ಇಳಿಯಲಿದ್ದಾರೆ ಎಂದು ಹೇಳುವ ಮೂಲಕ ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಅವರಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಶಾಕ್ ಕೊಟ್ಟಿದ್ದಾರೆ.
ಶಿರಸಿಯಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವರು, ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದರೆ ತಪ್ಪಿಲ್ಲ. ಆದರೆ ಇದಕ್ಕೂ ಮುನ್ನ ಹಲವಾರು ವಿಷಯಗಳನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಹೇಳಿದರು.
Advertisement
Advertisement
ಜಿಲ್ಲೆಯಲ್ಲಿ ಕಾಂಗ್ರೆಸ್ ಅಸ್ತಿತ್ವಲ್ಲಿದ್ದು, ನಮ್ಮ ಪಕ್ಷದಷ್ಟು ಜೆಡಿಎಸ್ ಪ್ರಭಲವಾಗಿಲ್ಲ. ಹೀಗಾಗಿ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಯೇ ಲೋಕಸಭಾ ಚುನಾವಣೆಗೆ ಎದುರಿಸಬೇಕಾಗುತ್ತದೆ ಎಂದು ದೇಶಪಾಂಡೆ ಹೇಳುವ ಮೂಲಕ ಪುತ್ರ ಪ್ರಶಾಂತ್ ದೇಶಪಾಂಡೆ ಅವರನ್ನು ಕಣಕ್ಕೆ ಇಳಿಸುವ ನಿಟ್ಟಿನಲ್ಲಿ ಯೋಚನೆ ಹೂಡಿದ್ದಾರೆ ಎನ್ನುವ ವಿಶ್ಲೇಷಣೆ ಕೇಳಿಬಂದಿದೆ.
Advertisement
ಪ್ರತ್ಯೇಕ ಲಿಂಗಾಯತ ಧರ್ಮದ ಕುರಿತು ಸಚಿವ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ಕ್ಯಾಬಿನೆಟ್ ನಲ್ಲಿ ಅಭಿಪ್ರಾಯ ನೀಡಲು ಅವಕಾಶವಿದೆ. ಆದರೆ ಒಮ್ಮೆ ಸಚಿವ ಸಂಪುಟದಲ್ಲಿ ನಿರ್ಣಯವಾದರೆ ಅದಕ್ಕೆ ಬದ್ಧರಾಗಿ ನಡೆದುಕೊಳ್ಳಬೇಕು. ಅನಾವಶ್ಯಕವಾಗಿ ಮಾತನಾಡುವುದು ತಪ್ಪು, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ತಿಳಿಸಿದರು.
Advertisement
ಖಾತೆ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ. ನಾನು ಬಹಳ ಇನ್ನಿಂಗ್ಸ್ ಆಡಿದ್ದೇನೆ. ಬಹಳ ಆಸಕ್ತಿ ಇಟ್ಟುಕೊಳ್ಳುವ ವ್ಯಕ್ತಿ ನಾನಲ್ಲ. ಸಂಪುಟ ವಿಸ್ತರಣೆ ಆಗಬೇಕಾಗಿದೆ ಎಂದು ತಿಳಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv