ಲಾಲ್‌ಬಾಗ್ ಸಿಬ್ಬಂದಿಯನ್ನು ಮನೆಗೆ ಆಹ್ವಾನಿಸಿ ಕ್ಷಮೆ ಕೋರಿದ ರಚಿತಾ ರಾಮ್

Public TV
1 Min Read
rachita ram

ಸ್ವಾತಂತ್ರ್ಯ ದಿನಾಚರಣೆ (Independence Day) ನಿಮಿತ್ತ ಲಾಲ್‌ಬಾಗ್ ಫ್ಲವರ್ ಶೋನಲ್ಲಿ ಅತಿಥಿಯಾಗಿ ನಟಿ ರಚಿತಾ ರಾಮ್ (Rachita Ram)) ಭಾಗಿಯಾಗಿದ್ದರು. ಈ ವೇಳೆ ರಚಿತಾ ಪ್ರಯಾಣಿಸುತ್ತಿದ್ದ ಕಾರು ಸ್ವಚ್ಛತಾ ಕಾರ್ಮಿಕನಿಗೆ ಡಿಕ್ಕಿ ಹೊಡೆದಿತ್ತು. ಇದೀಗ ಲಾಲ್‌ಬಾಗ್ ಸಿಬ್ಬಂದಿಯನ್ನ ತಮ್ಮ ಮನೆಗೆ ಕರೆಸಿ ರಚಿತಾ ಕ್ಷಮೆ ಕೋರಿದ್ದಾರೆ. ಈ ಕುರಿತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ನಟಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಸ್ವಾತಂತ್ರ‍್ಯ ದಿನಕ್ಕೆ ವೆಂಕಟೇಶ್ ‘ಸೈಂಧವ್’ ಟೀಮ್‌ನಿಂದ ಸ್ಪೆಷಲ್ ಗಿಫ್ಟ್- ಡಿಸೆಂಬರ್‌ 22ಕ್ಕೆ ಸಿನಿಮಾ ರಿಲೀಸ್

rachita ram

ರಚಿತಾ ಪ್ರಯಾಣಿಸುತ್ತಿದ್ದ ಕಾರು ಸ್ವಚ್ಛತಾ ಕಾರ್ಮಿಕನಿಗೆ ಗುದ್ದಿದೆ. ಈ ಘಟನೆ ನಡೆದಾಗ ರಚಿತಾ ರಾಮ್ ಕಾರಲ್ಲಿ ಇದ್ದರೂ, ಏನೂ ಆಗಿಯೇ ಇಲ್ಲ ಎನ್ನುವಂತೆ ಪ್ಲವರ್ ಶೋನತ್ತ ತೆರಳಿದ್ದರು. ಕಾರು ನಿಲ್ಲಿಸದೇ ಕ್ಷಮೆಯಾಚನೆಯೂ ಮಾಡದೇ ಹೊರಟ ರಚಿತಾ ಹಾಗೂ ಡ್ರೈವರ್ ನಡೆಗೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದರು. ಇದೀಗ ರಚಿತಾ ರಾಮ್ ಸಿಬ್ಬಂದಿಯನ್ನು ಮನೆಗೆ ಕರೆಸಿ ಕ್ಷಮೆ ಕೇಳಿದ್ದಾರೆ. ಹಾಗೆಯೇ ಸ್ವಾತಂತ್ರ್ಯ ದಿನಾಚರಣೆಗೆ ಸಿಬ್ಬಂದಿ ಕಡೆಯಿಂದ ವಿಶ್ ಮಾಡಿಸಿದ್ದಾರೆ.

ನನ್ನ ಕಾರು ಸಿಬ್ಬಂದಿಗೆ ಡಿಕ್ಕಿ ಹೊಡೆದಿದ್ದು ನನ್ನ ಗಮನಕ್ಕೆ ಬಂದಿಲ್ಲ. ನನ್ನ ಇದು ಆಕಸ್ಮಿಕವಾಗಿ ನಡೆದ ಘಟನೆ ಆಗ ನನಗೆ ಗೊತ್ತಾಗಲಿಲ್ಲ ಎಂದು ಹೇಳಿ ನಟಿ ರಚಿತಾ ರಾಮ್ ಕ್ಷಮೆಯಾಚಿಸಿದ್ದಾರೆ. ಇದೀಗ ಲಾಲ್‌ಬಾಗ್ ಸಿಬ್ಬಂದಿಯನ್ನ ಮನೆಗೆ ಕರೆಸಿ ಮಾತನಾಡಿಸಿದ ನಟಿಯ ನಡೆಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

Share This Article