ಸದ್ಯ ಸಂಜು ವೆಡ್ಸ್ ಗೀತಾ 2 ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ರಚಿತಾ ರಾಮ್ (Rachita Ram), ಮತ್ತೊಂದು ಸಿನಿಮಾ ಒಪ್ಪಿಕೊಂಡಿರುವ ಸುದ್ದಿ ಗಾಂಧಿ ನಗರದಲ್ಲಿ ಹರಿದಾಡುತ್ತಿದೆ. ಕಾಟೇರ ಕಥೆಗಾರ ಜಡೇಶ್ ಹಂಪಿ ನಿರ್ದೇಶನದ ಚಿತ್ರಕ್ಕೆ ರಚಿತಾ ರಾಮ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
- Advertisement -
ಈ ಹಿಂದೆ ದುನಿಯಾ ವಿಜಯ್ (Duniya Vijay) ಅವರಿಗಾಗಿ ಜಡೇಶ್ (Jadesh Hampi) ಸಿನಿಮಾ ಮಾಡುವ ವಿಚಾರ ಹಂಚಿಕೊಂಡಿದ್ದಾರೆ. ವಿಜಯ್ ಅವರ 29ನೇ ಸಿನಿಮಾ ಅನೌನ್ಸ್ ಕೂಡ ಮಾಡಿದ್ದರು. ಇದೇ ಚಿತ್ರಕ್ಕೆ ರಚಿತಾ ರಾಮ್ ನಾಯಕಿಯಾಗಿ ಆಯ್ಕೆಯಾಗಿದ್ದಾರಂತೆ. ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಹಂಚಿಕೊಳ್ಳಬೇಕಷ್ಟೆ.
- Advertisement -
- Advertisement -
ನಾನಾ ಕಾರಣಗಳಿಂದಾಗಿ ಈ ಸಿನಿಮಾ ಕುತೂಹಲ ಮೂಡಿಸಿದೆ. ಈ ಸಿನಿಮಾ ಮೂಲಕ ದುನಿಯಾ ವಿಜಯ್ ಅವರ ಪುತ್ರಿ ಮೋನಿಕಾ ಚಿತ್ರರಂಗಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಆದರೆ, ಇದ್ಯಾವುದೂ ಅಧಿಕೃತವಲ್ಲ. ವಿಜಯ್ ಭೀಮ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರೋದ್ರಿಂದ ಮುಂದಿನ ದಿನಗಳಲ್ಲಿ ಈ ಎಲ್ಲ ಪ್ರಶ್ನೆಗಳಿಗೂ ಉತ್ತರ ಸಿಗಬಹುದು.
- Advertisement -
ರಚಿತಾ ರಾಮ್ ಮತ್ತು ದುನಿಯಾ ವಿಜಯ್ ನಟನೆಯ ಜಾನಿ ಸಿನಿಮಾ ಪ್ರೇಕ್ಷಕರನ್ನು ರಂಜಿಸಿತ್ತು. ಹಾಗಾಗಿ ಮತ್ತೆ ಈ ಜೋಡಿಯನ್ನು ತೆರೆಯ ಮೇಲೆ ನೋಡುವುದಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.