ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಸ್ಯಾಂಡಲ್‍ವುಡ್ ನಟಿ ರಚಿತಾ ರಾಮ್ ಬಿಡುಗಡೆಗೊಳಿಸಿದ್ದಾರೆ.
ಪತ್ರಕರ್ತರ ಸಂಘದ ವತಿಯಿಂದ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಡಿಸೆಂಬರ್ 28 ರಂದು ಪತ್ರಕರ್ತರ ಜಿಲ್ಲಾ ಸಮ್ಮೇಳನ ನಡೆಯಲಿದೆ. ಸಾಧನ ಸಂಭ್ರಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕನ್ನಡ ಚಲನಚಿತ್ರ ನಟಿ ರಚಿತಾ ರಾಮ್ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬಿಡುಗಡೆಗೊಳಿಸಿ, ಸಮ್ಮೇಳನ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಇದನ್ನೂ ಓದಿ: ರಾಯನ್ ರಾಜ್ ಸರ್ಜಾ ಕ್ರಿಸ್‍ಮಸ್ ಸಂಭ್ರಮ ಹೇಗಿತ್ತು ಗೊತ್ತಾ?
ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಉಪ ಪೊಲೀಸ್ ಆಯುಕ್ತರಾದ ಹರಿರಾಮ್ ಶಂಕರ್, ದಿನೇಶ್, ಅನಘ ರಿಫೈನರೀಸ್ ಆಡಳಿತ ನಿರ್ದೇಶಕ ಸಾಂಬಶಿವ ರಾವ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ್ ರೈ ಕಟ್ಟ ಉಪಸ್ಥಿತರಿದ್ದರು. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ: ನಳಿನ್ ಕುಮಾರ್ ಕಟೀಲ್