ಬಹುದಿನದ ಕನಸನ್ನು ಈಡೇರಿಸಿಕೊಂಡ ರಚಿತಾ

Public TV
1 Min Read
rachitha ram

ಬೆಂಗಳೂರು: ಡಿಂಪಲ್ ಬೆಡಗಿ ರಚಿತಾ ರಾಮ್ ಅವರು ತಮ್ಮ ಬಹುದಿನದ ಆಸೆಯನ್ನು ಈಡೇರಿಸಿಕೊಂಡಿದ್ದಾರೆ. ಅಲ್ಲದೆ ಈ ಬಗ್ಗೆ ಅವರು ಟ್ವೀಟ್ ಕೂಡ ಮಾಡಿಕೊಂಡಿದ್ದಾರೆ.

ರಚಿತಾ ರಾಮ್ ತಮ್ಮ ಟ್ವಿಟ್ಟರಿನಲ್ಲಿ ಮೆಟ್ರೋ ನಿಲ್ದಾಣದಲ್ಲಿ ನಿಂತು ಮುಖಕ್ಕೆ ಕಟ್ಟಿದ್ದ ಸ್ಕಾರ್ಫ್ ತೆಗೆದು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ, “ನಮ್ಮ ಬೆಂಗಳೂರು, ನಮ್ಮ ಮೆಟ್ರೋ, ನನ್ನ ಕನಸಿನ ಸವಾರಿ ಮಾಡಿಸಲು ಕರೆದುಕೊಂಡು ಹೋಗಿದ್ದ ತೇಜು ಕಾರಂತಿಗೆ ಧನ್ಯವಾದ” ಎಂದು ಬರೆದುಕೊಂಡಿದ್ದಾರೆ.

ಮೆಟ್ರೋದಲ್ಲಿ ಓಡಾಡಬೇಕು ಎಂಬುದು ರಚಿತಾ ಅವರ ಕನಸಾಗಿತ್ತು. ಹೀಗಾಗಿ ಅವರು ಸೋಮವಾರ ಹಬ್ಬದ ದಿನ ಹೋಗಿ ಮೆಟ್ರೋ ಪ್ರಯಾಣ ಮಾಡಿದ್ದಾರೆ. ರಚಿತಾ ರಾಮ್ ಮೊದಲ ಬಾರಿಗೆ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ.

RACHITHA RAM 3

ಅಭಿಮಾನಿಗಳು ತಮ್ಮ ನೆಚ್ಚಿನ ಕಲಾವಿದರನ್ನು ನೋಡಿ ಸೆಲ್ಫಿಗಾಗಿ ಮುಗಿ ಬೀಳುತ್ತಾರೆ.ಈ ಕಾರಣದಿಂದ ಸಾರ್ವಜನಿಕ ಸ್ಥಳದಲ್ಲಿ ಕಲಾವಿದರು ಓಡಾಡುವುದು ಕಷ್ಟವಾಗುತ್ತದೆ. ಹೀಗಾಗಿ ರಚಿತಾ ಅವರು ಯಾರಿಗೂ ತಿಳಿಯದ ಹಾಗೆ ಮುಖಕ್ಕೆ ಸ್ಕಾರ್ಫ್ ಕಟ್ಟಿಕೊಂಡು ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ.

ಸದ್ಯಕ್ಕೆ ರಚಿತಾ ರಾಮ್, ಹ್ಯಾಟ್ರಿಕ್ ಹೀರೋ ಶಿವಣ್ಣ ಅಭಿನಯದ `ಆಯುಷ್ಮಾನ್ ಭವ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಮೂಲಕ ಮೊದಲ ಬಾರಿಗೆ ಶಿವರಾಜ್ ಕುಮಾರ್ ಅವರಿಗೆ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

Share This Article