ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರನ್ನು ಕರಿಯ ಎಂದು ಸಂಬೋಧಿಸಿದ್ದ ವಸತಿ ಖಾತೆಯ ಸಚಿವ ಜಮೀರ್ ಅಹ್ಮದ್ (Zameer Ahmed) ವಿರುದ್ಧ ದೂರು ದಾಖಲಾಗಿದೆ.
ಕುಮಾರಸ್ವಾಮಿ ವಿರುದ್ಧ ಅವಹೇಳನ ಹಾಗೂ ವರ್ಣ ನಿಂದನೆ ಮಾಡಿರುವುದನ್ನ ಖಂಡಿಸಿ ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಅವರು ಕೊಪ್ಪ ಪೊಲೀಸ್ ಠಾಣೆಯಲ್ಲಿ ಜಮೀರ್ ವಿರುದ್ಧ ದೂರು ನೀಡಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶ ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 10 ಮಕ್ಕಳು ಸಜೀವ ದಹನ
ದೂರಿನಲ್ಲಿ ಏನಿದೆ?
ಕುಮಾರಸ್ವಾಮಿ ಅವರನ್ನು ಉರ್ದು ಭಾಷೆಯಲ್ಲಿ ಕರಿಯ ಎಂದು ಕರೆದು ನಿಂದಿಸಿದ್ದಾರೆ. ಜಮೀರ್ ಹೇಳಿಕೆಯು ಜನಾಂಗೀಯ ನಿಂದನೆ ಹಾಗೂ ವರ್ಣಭೇದ ನೀತಿಯನ್ನು ಪ್ರಚೋದಿಸುವಂತಿದೆ.
ಮುಸ್ಲಿಮರು ದೇವೇಗೌದೇವೇಗೌಡರ ಕುಟುಂಬವನ್ನೇ ಖರೀದಿ ಮಾಡುತ್ತಾರೆ ಎಂದು ಕೋಮು ಸೌಹಾರ್ದ ಕೆಣಕಿದ್ದಾರೆ. ಸಮಾಜದಲ್ಲಿ ಶಾಂತಿ ಭಂಗ ಉಂಟು ಮಾಡುವ ಹೇಳಿಕೆಯನ್ನು ನೀಡಿರುವ ಜಮೀರ್ ಅಹ್ಮದ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಆಗ್ರಹಿಸಿದ್ದಾರೆ.