ಬೀದರ್: ಈಶ್ವರಪ್ಪ (K.S Eshwarappa) ಅಂದ್ರೆ ಯಾರು? ಅಂತಹ ಹೆಸರಿನ ಯಾವ ವ್ಯಕ್ತಿಯೂ ನನಗೆ ಗೊತ್ತಿಲ್ಲ ಎಂದು ಬಿಜೆಪಿ (BJP) ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ (Radha Mohan Das Agarwal) ವ್ಯಂಗ್ಯವಾಡಿದ್ದಾರೆ.
ಬೀದರ್‌ನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ ಈಶ್ವರಪ್ಪ ಮನವೊಲಿಸುತ್ತೀರಾ ಎಂಬ ಪ್ರಶ್ನೆಗೆ, ಆ ಹೆಸರಿನ ವ್ಯಕ್ತಿ ನನಗೆ ಗೊತ್ತೇ ಇಲ್ಲ. ಅವರು ಯಾರು ಎಂದು ಲೇವಡಿ ಮಾಡಿದ್ದಾರೆ. ಮೋದಿ ಫೋಟೋ ಬಳಸುತ್ತಿರುವ ವಿಚಾರಕ್ಕೆ, ಈ ಸೌಭಾಗ್ಯ ಎಲ್ಲಿ ಬರುತ್ತದೆ. ಕಾಂಗ್ರೆಸ್‍ನವರೇ ಮೋದಿ ಫೋಟೋ ಹಾಕ್ತಿದ್ದಾರೆ. ಎಡಿಎಂಕೆ, ಡಿಎಂಕೆ ಎಲ್ಲಾ ಪಕ್ಷದವರು ಮೋದಿ (Narendra Modi) ಫೋಟೋ ಬಳಸುತ್ತಿದ್ದಾರೆ. ಇದು ಒಳ್ಳೆಯ ಸಂಗತಿ ಎಂದಿದ್ದಾರೆ. ಇದನ್ನೂ ಓದಿ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಚುನಾವಣಾಧಿಕಾರಿಗೆ ಬಿಜೆಪಿ ದೂರು
- Advertisement -
- Advertisement -
ಪ್ರಭು ಚೌಹಾಣ್ ಚುನಾವಣೆಗಾಗಿ ಕೆಲಸ ಮಾಡುತ್ತಿದ್ದಾರೆ. ಅವರು ನಮ್ಮ ಜೊತೆಗಿದ್ದಾರೆ. ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಆಗಿದ್ದು, ಶೀಘ್ರವೇ ಅವರು ಗುಣಮುಖರಾಗಿ ಬರಲಿ. ನಾವೇ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದೇವೆ ಎಂದರು.
- Advertisement -
- Advertisement -
ಬೀದರ್‌ನಲ್ಲಿ ಬಿಜೆಪಿ ಗೆಲ್ಲಲಿದೆ. ಈ ಮೂಲಕ ಮೋದಿಯವರಿಗೆ ಜನ ಮತ್ತೊಮ್ಮೆ ಅವಕಾಶ ನೀಡಲಿದ್ದಾರೆ. ಇಲ್ಲಿ ಕಾಂಗ್ರೆಸ್ (Congress) ಠೇವಣಿ ಕಳೆದುಕೊಳ್ಳಲಿದೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಇಂದಿರಾ ಗಾಂಧಿ ಹಂತಕನ ಪುತ್ರ ಪಂಜಾಬ್‌ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧೆ