ಕನ್ನಡ ಸಿನಿಮಾ ರಂಗಕ್ಕೆ ‘ರಾಧಾ ಸರ್ಚಿಂಗ್ ರಮಣ ಮಿಸ್ಸಿಂಗ್’ ಸಿನಿಮಾದಿಂದ ಹೊಸ ಕಲಾವಿದರ ಮತ್ತು ತಂತ್ರಜ್ಞರ ಆಗಮನವಾಗಿದೆ. ಎಂ.ಎನ್. ಶ್ರೀಕಾಂತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದ ಮೂಲಕ ರಾಘವ್ ಎಂಬ ಹೊಸ ಪ್ರತಿಭೆ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದೆ. ಇದನ್ನೂ ಓದಿ: ರಣವೀರ್ ಹೊಸ ಸ್ಟೈಲ್‍ಗೆ ಆಲಿಯಾ ಬೌಲ್ಡ್
Advertisement
ಮೊನ್ನೆಯಷ್ಟೇ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಭಾಸ್ಕರ್ ರಾವ್ ಮತ್ತು ವಸಿಷ್ಠ ಸಿಂಹ ಈ ಚಿತ್ರದ ಟ್ರೇಲರ್ ರಿಲೀಸ್ ಮಾಡಿ ಶುಭ ಹಾರೈಸಿದ್ದಾರೆ. ಪ್ರೀತಿ, ಸಾಹಸ, ಸಸ್ಪೆನ್ಸ್ ಕಥಾ ಹಂದರ ಹೊಂದಿರುವ ಚಿತ್ರ ಇದಾಗಿದ್ದು, ಈ ಹೊತ್ತಿನ ಯುವಕ ಯುವತಿಯರ ತಲ್ಲಣಗಳನ್ನು ಸೂಕ್ಷ್ಮವಾಗಿ ಹೇಳುವ ಪ್ರಯತ್ನ ಮಾಡಿದ್ದಾರಂತೆ ನಿರ್ದೇಶಕರು. ಇದನ್ನೂ ಓದಿ : ಮೇಡ್ ಇನ್ ಚೈನಾ ಅಂತಿದ್ದಾರೆ ನಾಗಭೂಷಣ್
Advertisement
Advertisement
ಈ ಕುರಿತು ನಿರ್ದೇಶಕರು ಹೇಳಿದ್ದು ಹೀಗೆ, “ಮೈಸೂರು ಮೂಲದವರಾದ ಅಮೆರಿಕನ್ ಪ್ರಜೆ ಯಶಸ್ವಿ ಶಂಕರ್ ಅವರಿಗೆ ಕಥೆ ಹೇಳಿದಾಗ ತುಂಬಾನೇ ಖುಷಿ ಪಟ್ಟರು. ಇದೊಂದು ಹೊಸ ಮಾದರಿಯ ಸಿನಿಮಾವಾಗಲಿದೆ ಎಂದು ಬೆನ್ನುತಟ್ಟಿದರು. ಕೊನೆಗೆ ಅವರೇ ಈ ಚಿತ್ರವನ್ನು ನಿರ್ಮಾಣ ಮಾಡಿದರು. ಇದೊಂದು ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಸಿನಿಮಾವಾಗಿದ್ದು, ಪ್ರತಿ ದೃಶ್ಯವೂ ನೋಡುಗನನ್ನು ಹಿಡಿದಿಟ್ಟುಕೊಳ್ಳಲಿದೆ’ ಎಂದರು. ಇದನ್ನೂ ಓದಿ :ಎಂತವರಿಗೂ ಮರುಕ ಹುಟ್ಟಿಸುತ್ತೆ ಕನ್ನೇರಿ ಚಿತ್ರದ ‘ಕಾಣದ ಊರಿಗೆ ಕೂಲಿಗೆ ಹೊರಟವಳೆ’ ಹಾಡು
Advertisement
ರಾಘವ್ ಈ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದ್ದರೆ, ಸಂಜನಾ ಬುರ್ಲಿ ನಾಯಕಿ. ರಾಘವ್ ಕಾಲೇಜ್ ಹುಡುಗನಾಗಿ ಕಾಣಿಸಿಕೊಂಡಿದ್ದು, ಪಾತ್ರಕ್ಕಾಗಿ ಸಾಕಷ್ಟು ರೀತಿಯಲ್ಲಿ ತಯಾರಿ ಮಾಡಿಕೊಂಡಿದ್ದಾರೆ.