ನವದೆಹಲಿ: ದೇಶಾದ್ಯಂತ ಹಲವು ರಾಜ್ಯಗಳಲ್ಲಿ ದಾಳಿ ನಡೆದ ಬಳಿಕ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಸಂಘಟನೆಯನ್ನು ಕೇಂದ್ರ ಸರ್ಕಾರ ಈ ಕ್ಷಣದಿಂದಲೇ ನಿಷೇಧ ಮಾಡುವ ಮೂಲಕ ಮಹತ್ವದ ನಿರ್ಧಾರ ಕೈಗೊಂಡಿದೆ.
ಉಗ್ರ ಸಂಘಟನೆಗಳ ಜೊತೆ ನೇರವಾದ ಸಂಬಂಧ ಹೊಂದಿದ ಹಿನ್ನೆಲೆಯಲ್ಲಿ ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳು ಕಾನೂನುಬಾಹಿರ ಸಂಘ ಎಂದು ಘೋಷಿಸಿ ತಕ್ಷಣದಿಂದ ಜಾರಿಗೆ ಬರುವಂತೆ 5 ವರ್ಷಗಳ ಅವಧಿಗೆ ನಿಷೇಧ ಮಾಡಿ ಗೃಹ ಸಚಿವಾಲಯ(Ministry of Home Affairs) ಆದೇಶ ಪ್ರಕಟಿಸಿದೆ.
Advertisement
Advertisement
ಕಾನೂನುಬಾಹಿರ ಚಟುವಟಿಕೆಗಳ (ನಿರ್ಬಂಧ) ಕಾಯ್ದೆಯ ಅಡಿ ಪಿಎಫ್‌ಐ ಅಂಗ ಸಂಸ್ಥೆಗಳಾದ ರಿಹಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್ ಕೇರಳವನ್ನು ನಿಷೇಧಿಸಲಾಗಿದೆ.
Advertisement
Advertisement
ಸೆಪ್ಟೆಂಬರ್ 22 ಮತ್ತು ಸೆಪ್ಟೆಂಬರ್ 27 ರಂದು ರಾಷ್ಟ್ರೀಯ ತನಿಖಾ ಸಂಸ್ಥೆ (NIA), ಜಾರಿ ನಿರ್ದೇಶನಾಲಯ (ED) ಮತ್ತು ರಾಜ್ಯ ಪೊಲೀಸರು PFI ಮೇಲೆ ದಾಳಿ ನಡೆಸಿತ್ತು. ಮೊದಲ ಸುತ್ತಿನ ದಾಳಿಯಲ್ಲಿ ಪಿಎಫ್‌ಐಗೆ ಸೇರಿದ 106 ಮಂದಿಯನ್ನು ಬಂಧಿಸಲಾಗಿದ್ದರೆ ಎರಡನೇ ಸುತ್ತಿನ ದಾಳಿ 247 ಮಂದಿಯನ್ನು ಬಂಧಿಸಿತ್ತು. ಇದನ್ನೂ ಓದಿ: ಶಾಂತಿ ಭಂಗ, ಅಕ್ರಮಕೂಟ ಆರೋಪದಡಿ 7 ಮಂದಿ PFI ಮುಖಂಡರು ಅರೆಸ್ಟ್ – 14 ದಿನ ನ್ಯಾಯಾಂಗ ಬಂಧನ
ನಿಷೇಧಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳಿಗೆ ಸಾಕಷ್ಟು ಪುರಾವೆಗಳು ಲಭ್ಯವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ವಿದೇಶಗಳಿಂದ ಅಕ್ರಮ ದೇಣಿಗೆ, ಸಾರ್ವಜನಿಕರ ಶಾಂತಿಗೆ ಭಂಗ, ಕಾನೂನು ಬಾಹಿರ ಚಟುವಟಿಕೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಪಿಎಫ್‌ಐ ಕಚೇರಿಗಳು ಹಾಗೂ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಲಾಗಿತ್ತು.