ನವದೆಹಲಿ: ದೆಹಲಿಯಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ನಡೆದ ಪ್ರತಿಭಟನೆ ವೇಳೆ ಪೆಲೆಟ್ ಗನ್ ಬಳಕೆಗೆ ಡಿಸಿಪಿ ಆದೇಶಿಸಿರುವುದು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯ ಡೈರಿಯಲ್ಲಿ ದಾಖಲಾಗಿದೆ ಎಂದು ವರದಿಯಾಗಿದೆ.
ಕ್ಷಿಪ್ರ ಕಾರ್ಯ ಪಡೆ (ಆರ್‌ಎಎಫ್) ಜವಾನನೊಬ್ಬ ಪೆಲೆಟ್ ಗನ್‌ನಿಂದ ಗುಂಡು ಹಾರಿಸಿದ್ದಾನೆ. ಶಾಂತಿಯುತ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಲಾಗಿದೆ ಎಂದು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನಡೆಸಿದ ತನಿಖೆ ವೇಳೆ ತಿಳಿದು ಬಂದಿತ್ತು. ಇದಕ್ಕೂ ಮುನ್ನ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಪೆಲೆಟ್ ಗನ್‌ಗಳನ್ನು ಬಳಸಿಲ್ಲ ಎಂದು ಅಧಿಕಾರಿಗಳು ಹೇಳಿಕೊಂಡಿದ್ದರು. ಇದನ್ನೂ ಓದಿ: ಪ್ರತಿಭಟನೆ ನಡೆಸಿದ ಮಾತ್ರಕ್ಕೆ ಲಾಠಿಚಾರ್ಜ್ ಮಾಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ಡಿಸಿಪಿ ಆದೇಶದ ಮೇರೆಗೆ ಪ್ರತಿಭಟನಾಕಾರರನ್ನು ನಿಯಂತ್ರಿಸಲು 55 non-electrical shells, 15 electrical shells, ಐದು ಅಶ್ರುವಾಯು ಗ್ರೇನೆಡ್‌ಗಳು ಮತ್ತು ಎರಡು ಬಾರಿ ಪ್ಲಾಸ್ಟಿಕ್ ಪೆಲೆಟ್‌ಗಳನ್ನು ಹಾರಿಸಲಾಗಿದೆ ಎಂದು ಜುಲೈ 20 ರಂದು ಡೈರಿಯಲ್ಲಿ ದಾಖಲಿಸಲಾಗಿದೆ.
ಪೆಲೆಟ್‌ಗನ್ ಬಳಕೆಯಿಂದ ಹಲವಾರು ಪ್ರತಿಭಟನಾಕಾರರು ಗಂಭೀರವಾಗಿ ಗಾಯ ಗಾಯಗೊಂಡಿದ್ದಾರೆ ಎಂದು ವರದಿಯಾಗಿತ್ತು. ಇದರಲ್ಲಿ 19 ವರ್ಷದ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬನ ಕಣ್ಣಿಗೆ ಗಂಭಿರವಾದ ಗಾಯವಾಗಿತ್ತು. ಈ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕರು ತೀವ್ರವಾಗಿ ಖಂಡಿಸಿದ್ದರು.
ಪ್ರತಿಭಟನಾಕಾರರ ಮೇಲಿನ ದಾಳಿಯ ವಿಚಾರವಾಗಿ ಸುಪ್ರೀಂ ಕೋರ್ಟ್ ಪ್ರತಿಭಟನೆ ನಡೆಸಿದ ಕಾರಣಕ್ಕೆ ಲಾಠಿಚಾರ್ಜ್ (Lathicharge) ಮಾಡಲು ಸಾಧ್ಯವಿಲ್ಲ. ಇಂತಹ ನಡೆ ಸಮರ್ಥನೀಯವಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಅಭಿಪ್ರಾಯಪಟ್ಟಿತ್ತು. ಇದನ್ನೂ ಓದಿ: ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK-47 ಹಿಡಿದು ಗುಂಡು ಹಾರಿಸಿದ ಕಾನ್ಸ್‌ಟೇಬಲ್ – ವಿಡಿಯೋ ವೈರಲ್ ಬೆನ್ನಲ್ಲೇ ಅಮಾನತು
