ವಿಜಯಪುರ: ಕೃಷ್ಣಾ ನದಿಯಲ್ಲಿ (Krishna River) ತೆಪ್ಪ (Raft) ಮಗುಚಿ ಐವರು ಜಲಸಮಾಧಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಐವರ ಮೃತದೇಹವನ್ನೂ ಪತ್ತೆ ಮಾಡಿ ನೀರಿನಿಂದ ಹೊರತೆಗೆದಿದ್ದು, ಕಾರ್ಯಾಚರಣೆ ಮುಕ್ತಾಯಗೊಂಡಿದೆ.
Advertisement
ಜಲ ಸಮಾಧಿಯಾಗಿದ್ದ ಐವರ ಪೈಕಿ ಮೂವರ ಶವಗಳ್ನು ಬುಧವಾರ ಹೊರ ತೆಗೆಯಲಾಗಿದೆ. ಪುಂಡಲಿಕ ಯಂಕಂಚಿ, ತಯ್ಯಬ್ ಚೌಧರಿ ಹಾಗೂ ದಶರಥ ಗೌಡರ್ ಶವಗಳನ್ನು ಈಗಾಗಲೇ ಹೊರ ತೆಗೆಯಲಾಗಿದೆ. ಇನ್ನುಳಿದ ಇಬ್ಬರಿಗಾಗಿ ಶೋಧಕಾರ್ಯ ಮುಂದುವರೆದಿತ್ತು. ಇಂದು 30 ಜನ ಸಿಬ್ಬಂದಿ ಹಾಗೂ ಐದು ಬೋಟ್‌ಗಳ ಸಹಾಯದಿಂದ ಶೋಧಕಾರ್ಯ ಪ್ರಾರಂಭಿಸಿದ್ದು, ರಫೀಕ್ ಆಲಮೇಲ (40) ಹಾಗೂ ಮೆಹಬೂಬ್ ವಾಲಿಕಾರ್ (35) ಮೃತದೇಹವನ್ನು ಪತ್ತೆಹಚ್ಚಿ ನೀರಿನಿಂದ ಹೊರತೆಗೆದಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಪ್ರಾಪ್ತರ ಬಳಕೆ ಆಗಿಲ್ಲ- ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ಪಷ್ಟನೆ
Advertisement
Advertisement
ಜುಲೈ 2ರ ಮಂಗಳವಾರ ಸಂಜೆ 4:30ರ ಸುಮಾರಿಗೆ ಘಟನೆ ನಡೆದಿತ್ತು. ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ ಏಳು ಜನ ನೀರುಪಾಲಾಗಿದ್ದರು. ಈ ಪೈಕಿ ಓರ್ವ ಈಜಿ ದಡ ಸೇರಿದ್ದರೆ ಮತ್ತೊರ್ವನನ್ನು ರಕ್ಷಣೆ ಮಾಡಲಾಗಿತ್ತು. ಇನ್ನು ಘಟನೆಯಲ್ಲಿ ಸಾವನ್ನಪ್ಪಿದವರ ಮೃತದೇಹಗಳನ್ನು ಅಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ತವರಿಗೆ ಮರಳಿದ ʼವಿಶ್ವʼ ಚಾಂಪಿಯನ್ಸ್! – ಇಂದು ಸಂಜೆ ಮುಂಬೈನಲ್ಲಿ ರೋಡ್ ಶೋ
Advertisement