ಬೆಂಗಳೂರು: ರಾಘವೇಂದ್ರ ರಾಜ್ ಕುಮಾರ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಇವರಿಬ್ಬರ ಸೆಲ್ಫಿ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವೈರಲ್ ಆಗುತ್ತಿದೆ.
ರಾಘವೇಂದ್ರ ರಾಜ್ ಕುಮಾರ್ ಮತ್ತು ದರ್ಶನ್ ಇಬ್ಬರ ಅಪರೂಪದ ಭೇಟಿಯ ಫೋಟೋವನ್ನು ರಾಘಣ್ಣ ಅವರು ತಮ್ಮ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಜೊತೆಗೆ `ದರ್ಶನ್ ಅವರನ್ನ ಇಂದು ಭೇಟಿ ಮಾಡಿದ್ದು ಖುಷಿಯಾಗಿದೆ’ ಎಂದು ತಿಳಿಸಿದ್ದಾರೆ.
ಸ್ಯಾಂಡಲ್‍ವುಡ್ ನ ಹಿರಿಯ ನಟ ಶಶಿಕುಮಾರ್ ಅವರ ಮಗ ಆದಿತ್ಯ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಆದ್ದರಿಂದ ಅವರ ಮೊದಲ ಸಿನಿಮಾ ಮುಹೂರ್ತ ಸಮಾರಂಭ ಭಾನುವಾರ ನೆರೆವೇರಿದೆ. ಈ ಮುಹೂರ್ತದ ಕಾರ್ಯಕ್ರಮಕ್ಕೆ ರಾಘವೇಂದ್ರ ರಾಜ್ ಕುಮಾರ್, ಶಿವರಾಜ್ ಕುಮಾರ್ ಮತ್ತು ದರ್ಶನ್ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಸೆಲ್ಫಿಯನ್ನು ಕ್ಲಿಕ್ಕಿಸಿಕೊಂಡಿದ್ದಾರೆ.
ಈ ಹಿಂದೆಯೇ ದರ್ಶನ್ ಮತ್ತು ಶಿವಣ್ಣ ಇಬ್ಬರು ಶಶಿಕುಮಾರ್ ಮಗನ ಚಿತ್ರದ ಮುಹೂರ್ತಕ್ಕೆ ಬರುವುದಾಗಿ ಹೇಳಿದ್ದರು. ಅದರಂತೆಯೇ ಎಲ್ಲರು ಭಾನುವಾರ ಬಂದು ಆದಿತ್ಯ ಅವರ ಚೊಚ್ಚಲ ಸಿನಿಮಾದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದ್ದಾರೆ. ದರ್ಶನ್ ಮತ್ತು ರಾಘಣ್ಣ ಅಥವಾ ದರ್ಶನ್ ಹಾಗು ಶಿವಣ್ಣ ಭೇಟಿಯಾಗುವುದು ಅಪರೂಪ. ಇವರೆಲ್ಲರೂ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುತ್ತಾರೆ. ಆದರೆ ಈಗ ಮೂವರು ಒಟ್ಟಿಗೆ ಭೇಟಿಯಾಗಿ ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿಕೊಂಡಿದ್ದಾರೆ.
Met darshan at a muhurut took a selfie feeling happy ????❤️ pic.twitter.com/abVvq2kPu5
— Raghavendra Rajkumar (@RRK_Official_) September 2, 2018
ಈ ಸಿನಿಮಾವನ್ನು ಸಿದ್ಧಾರ್ಥ್ ಮಾರದೆಪ್ಪ ನಿರ್ದೇಶನ ಮಾಡುತ್ತಿದ್ದು, ಚಿತ್ರಕ್ಕೆ `ಮೊಡವೆ’ ಎಂದು ಹೆಸರಿಡಲಾಗಿದೆ. ಈ ಸಿನಿಮಾದಲ್ಲಿ ಅಪೂರ್ವ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಅಕ್ಟೋಬರ್ ನಲ್ಲಿ `ಮೊಡವೆ’ ಸಿನಿಮಾದ ಶೂಟಿಂಗ್ ಶುರುವಾಗಲಿದೆ. ಹಂಪಿ, ಗುಲ್ಬರ್ಗ, ಬೀದರ್, ರಾಯಚೂರು, ಬಾದಮಿ, ಸೇರಿದಂತೆ ಕೆಲವು ಭಾಗಗಳಲ್ಲಿ ಚಿತ್ರೀಕರಣ ನಡೆಯಲಿದೆ.
— Raghavendra Rajkumar (@RRK_Official_) September 2, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv