ರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ಆಗಸ್ಟ್ 10 ರಿಂದ 16ರವರೆಗೆ ನಡೆಯಲಿದ್ದು, ಕಳೆದ ಎರಡು ವರ್ಷಕ್ಕಿಂತ ವಿಜೃಂಭಣೆಯಿಂದ ಆಚರಿಸುವುದಾಗಿ ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಅವರು ಹೇಳಿದ್ದಾರೆ.
Advertisement
ಮಂತ್ರಾಲಯದಲ್ಲಿ ಮಾತನಾಡಿದ ಸುಬುಧೇಂದ್ರ ತೀರ್ಥ ಶ್ರೀಗಳು, ಏಳು ದಿನ ಕಾಲ ಸಪ್ತರಾತ್ರೋತ್ಸವ ನಡೆಯಲಿದ್ದು, ಆರಾಧನಾ ಮಹೋತ್ಸವ ಹಿನ್ನೆಲೆ ಮಠದಲ್ಲಿ ಏಳು ದಿನಗಳ ಕಾಲ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮ ಜರುಗಲಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಡುಗಳ್ಳರ ಪಾಲಿಗೆ ಸಿಂಹಸ್ವಪ್ನವಾಗಿದ್ದ ಬಂಡೀಪುರದ ಹಂಟಿಂಗ್ ಸ್ಪೆಷಲಿಸ್ಟ್ ರಾಣಾ ಇನ್ನು ನೆನಪು ಮಾತ್ರ
Advertisement
Advertisement
ಆಗಸ್ಟ್ 12 ರಂದು ಪೂರ್ವಾರಾಧನೆ ಕಾರ್ಯಕ್ರಮ ನಡೆಯಲಿದ್ದು, ಅಂದು ಸಂಜೆ ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಯರ ಅನುಗ್ರಹ ಪ್ರಶಸ್ತಿ ಪ್ರಧಾನ ಹಾಗೂ ಗ್ರಂಥಗಳ ಬಿಡುಗಡೆ ನಡೆಯಲಿದೆ. ಆಗಸ್ಟ್ 13 ರಂದು ಮಧ್ಯಾರಾಧನೆ ಹಿನ್ನೆಲೆ ತಿರುಪತಿಯಿಂದ ಬರುವ ಶೇಷ ವಸ್ತ್ರವನ್ನು ರಾಯರಿಗೆ ಸಮರ್ಪಣೆ ಮಾಡಲಾಗುವುದು. ಆಗಸ್ಟ್ 14 ರಂದು ಉತ್ತರರಾಧನೆ ಹಿನ್ನೆಲೆ ಮಹಾರಥೋತ್ಸವ ನಡೆಯಲಿದೆ. ಹೆಲಿಕಾಪ್ಟರ್ ಮೂಲಕ ರಥಕ್ಕೆ ಪುಷ್ಪ ವೃಷ್ಠಿ ಮಾಡಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಹುಲಿ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಲ್ಲ – ವಿ.ಸೋಮಣ್ಣ
Advertisement
ತುಂಗಭದ್ರಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ಈ ಬಾರಿ ನದಿ ಸ್ನಾನಕ್ಕೆ ಅವಕಾಶ ನೀಡಿಲ್ಲ. ಹೀಗಾಗಿ ನದಿ ತಟದಲ್ಲಿ ಸ್ನಾನ ಘಟ್ಟದ ವ್ಯವಸ್ಥೆ ಮಾಡಲಾಗಿದೆ. ಆರಾಧನಾ ಮಹೋತ್ಸವ ಹಿನ್ನೆಲೆ ವಿವಿಧ ರಾಜ್ಯಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಬರುವ ನಿರೀಕ್ಷೆಯಿದ್ದು, ಮಂತ್ರಾಲಯಕ್ಕೆ ಬರುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ವಸತಿ, ಆರೋಗ್ಯ, ಸಾರಿಗೆ, ಕುಡಿಯುವ ನೀರು ಸೇರಿದಂತೆ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಇನ್ನೂ ಮಠಕ್ಕೆ ಕಾಣಿಕೆ, ದೇಣಿಗೆ ಸಂಗ್ರಹಿಸಲು ಯಾವುದೇ ಖಾಸಗಿ ವ್ಯಕ್ತಿಗಳನ್ನು ನೇಮಿಸಿಲ್ಲ. ಭಕ್ತರು ನೇರವಾಗಿ ಅಥವಾ ಆನ್‍ಲೈನ್ ಮೂಲಕ ಹಣ ನೀಡಿ ಅಧಿಕೃತ ರಶಿದಿ ಪಡೆಯಬೇಕು ಅಂತ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.