ಚೌಕಬಾರ ಕಿರುಚಿತ್ರಕ್ಕಾಗಿ ಕರ್ನಾಟಕ ಸರಕಾರದ ರಾಜ್ಯ ಪ್ರಶಸ್ತಿ ಪಡೆದಿರುವ ನಿರ್ದೇಶಕ ರಾಘು ಶಿವಮೊಗ್ಗ ಈಗ ನಟನೆಯಲ್ಲಿ ಬ್ಯುಸಿಯಾಗಿದ್ದಾರೆ. ಕಿರುತೆರೆಯಲ್ಲಿ ಧಾರಾವಾಹಿ ಮೂಲಕ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟ ಇವರು, ಅರಸಿ ಸೇರಿದಂತೆ ಅನೇಕ ಹಿಟ್ ಧಾರಾವಾಹಿಗಳಲ್ಲಿ ನಟಿಸಿದರು. ಮದರಂಗಿ, ಜನುಮದ ಜೋಡಿ ಧಾರಾವಾಹಿಗಳಿಗೆ ನಿರ್ದೇಶನ ಮಾಡಿದರು. ಅಲ್ಲಿಂದ ಸಿನಿಮಾ ರಂಗಕ್ಕೂ ಕಾಲಿಟ್ಟು ‘ಚೂರಿಕಟ್ಟೆ’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದರು. ಪ್ರವೀಣ್ ನಾಯಕನಟನಾಗಿ ನಟಿಸಿರುವ ಈ ಸಿನಿಮಾ ನೋಡುಗರ ಮೆಚ್ಚುಗೆಗೆ ಪಾತ್ರವಾಯಿತು. ಇದನ್ನೂ ಓದಿ : ಇನ್ಮುಂದೆ ಬಾಲಿವುಡ್ ನಿರ್ದೇಶಕರಿಗೆ ಸಿಗಲ್ಲ ಆಲಿಯಾ ಭಟ್
Advertisement
ಅಲ್ಲಿಂದ ರಾಘು ಮತ್ತೆ ನಟನೆಯತ್ತ ಮುಖ ಮಾಡಿದರು. ಮಂಸೋರೆ ನಿರ್ದೇಶನದ ‘ಆಕ್ಟ್ 1978’ ಸಿನಿಮಾದ ಬೆಂಜಮನ್ ಪಾತ್ರ ರಾಘು ಶಿವಮೊಗ್ಗ ವೃತ್ತಿ ಬದುಕಿಗೆ ಮತ್ತೊಂದು ತಿರುವು ನೀಡಿತು. ಅಲ್ಲಿಂದ ಇದೀಗ ನಟನೆಯಲ್ಲೇ ಬ್ಯುಸಿಯಾಗಿದ್ದಾರೆ. ಲವ್ ಯೂ ರಚ್ಚು, ರೂಮ್ ಬಾಯ್, ಸದ್ದು ವಿಚಾರಣೆ ನಡೆಯುತ್ತಿದೆ, ರಾಘವೇಂದ್ರ ಸ್ಟೋರ್ಸ್ ಸೇರಿದಂತೆ ಎಂಟು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಇದನ್ನೂ ಓದಿ : ರಾಧಿಕಾ ಪಂಡಿತ್ ಬರ್ತಡೇ ಸೆಲೆಬ್ರೆಷನ್: ಫೋಟೋ ಗ್ಯಾಲರಿ
Advertisement
Advertisement
ಸದ್ಯ ಶಿವರಾಜ್ ಕುಮಾರ್ ನಟನೆಯ ವೇದ ಚಿತ್ರದಲ್ಲೂ ರಾಘು ಶಿವಮೊಗ್ಗ ವಿಶೇಷ ಪಾತ್ರದಲ್ಲಿ ಕಾಣಿಸಲಿದ್ದಾರೆ. ನಟನೆಯ ಜತೆ ಜತೆಗೆ ಪೆಂಟಗನ್ ಸಿನಿಮಾದ ಒಂದು ಕಥೆಗೆ ಇವರ ನಿರ್ದೇಶನವಿದೆ. ಇದನ್ನೂ ಓದಿ : ಬಾಲಯ್ಯನ ಕ್ಯಾಂಪ್ ನಲ್ಲಿ ಕಾಣಿಸಿಕೊಂಡ ದುನಿಯಾ ವಿಜಯ್
Advertisement
Excited to share screen with the legendary actor #Dr_Shivarajkumar Sir in the upcoming film #VEDA
Thanks for the wonderful opportunity Director #AHarsha Sir.#Shivanna #Geetha_Pctures#Geetha_Madam pic.twitter.com/VkTSFsizMC
— Raghu Shivamogga (@Raghushivmogga) March 7, 2022
ಎ.ಹರ್ಷ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ವೇದ ಚಿತ್ರಕ್ಕೆ ಗೀತಾ ಶಿವರಾಜ್ ಕುಮಾರ್ ನಿರ್ಮಾಪಕಿ. ಶಿವರಾಜ್ ಕುಮಾರ್ ಹೀರೋ. ನೂರಾರು ಚಿತ್ರಗಳಲ್ಲಿ ನಟಿಸಿರುವ ಶಿವರಾಜ್ ಕುಮಾರ್ ಜತೆ ನಟಿಸಲು ಅವಕಾಶ ಸಿಕ್ಕಿರುವುದು ಹೆಮ್ಮೆ ತಂದಿದೆ ಎಂದಿದ್ದಾರೆ ರಾಘು. ಇದನ್ನೂ ಓದಿ : ವಾರದೊಳಗೆ 100 ಕೋಟಿ ಕ್ಲಬ್ ಸೇರಲಿದೆ ಪುನೀತ್ ನಟನೆಯ ಜೇಮ್ಸ್: ಪಕ್ಕಾ ಲೆಕ್ಕಾಚಾರ
ಸಿನಿಮಾಗಳ ನಟನೆಯ ಜತೆ ಜತೆಗೆ ತಮ್ಮ ನಿರ್ದೇಶನದ ತಯಾರಿ ಕೂಡ ನಡೆಸಿದ್ದಾರಂತೆ. ಒಟ್ಟು ಎರಡು ಕಥೆಗಳನ್ನು ಅವರು ರೆಡಿ ಮಾಡಿಕೊಂಡಿದ್ದು, ಕೈಯಲ್ಲಿರುವ ಸಿನಿಮಾಗಳ ಜತೆ ಜತೆಗೆ ನಿರ್ದೇಶನದ ಕೆಲಸಗಳನ್ನೂ ಮಾಡುತ್ತಾರಂತೆ.