’ತುಕ್ರ-ತನಿಯ’ ಕಥೆ ಹೇಳ್ತಿದ್ದಾರೆ ರಾಘು ಶಿವಮೊಗ್ಗ: ಟೈಟಲ್ ಲಾಂಚ್ ಮಾಡಿದ ದುನಿಯಾ ವಿಜಯ್

Public TV
2 Min Read
Thukra Taniya 1

ಚೂರಿಕಟ್ಟೆ, ಪೆಂಟಗನ್ ರೀತಿಯ ಹೊಸ ಬಗೆಯ ಸಿನಿಮಾಗಳನ್ನು ನಿರ್ದೇಶಿಸಿರುವ ನಟ ಕಂ ನಿರ್ದೇಶಕ ರಾಘು ಶಿವಮೊಗ್ಗ(Raghu Shivamogga) ಮೂರನೇ ಕನಸು ಇಂದು ಅನಾವರಣಗೊಂಡಿದೆ. ರಾಘು ನಿರ್ದೇಶನದ ಹೊಸ ಸಿನಿಮಾದ ಟೈಟಲ್ (Title) ಅನ್ನು ಭೀಮ ದುನಿಯಾ ವಿಜಯ್ (Duniy Vijay) ಅನಾವರಣ ಮಾಡಿ ಶುಭಾಶಯ ಕೋರಿದ್ದಾರೆ.

Praveen Tej 1

ರಾಘು ಶಿವಮೊಗ್ಗ ನಿರ್ದೇಶಿಸುತ್ತಿರುವ ಮೂರನೇ ಸಿನಿಮಾಗೆ ವಿಶೇಷ ಟೈಟಲ್ ಅನ್ನು ಆಯ್ಕೆ ಮಾಡಿಕೊಂಡಿದ್ದು, ಚಿತ್ರಕ್ಕೆ ಅವರು ‘ತುಕ್ರ ತನಿಯ’ (Thukra-Taniya) ಎಂಬ ವಿಭಿನ್ನ ಬಗೆಯ ಶೀರ್ಷಿಕೆ ಇಟ್ಟಿದ್ದಾರೆ. ತುಕ್ರ ಅಂದರೆ ಶುಕ್ರವಾರ ಹುಟ್ಟಿದವನು. ತನಿಯ ಅಂದರೆ ಶನಿವಾರ ಹುಟ್ಟಿದವನು. ಶುಕ್ರವಾರ-ಶನಿವಾರ ಹುಟ್ಟಿದ ಇಬ್ಬರ ನಡುವಿನ ಕಥಾಹಂದರ ಇದಾಗಿದೆ.

Thukra Taniya 2

ಪ್ರವೀಣ್ ತೇಜ್ (Praveen Tej) ಹಾಗೂ ಅಚ್ಯುತ್ ಕುಮಾರ್ (Achyut Kumar) ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ಈ ಚಿತ್ರವನ್ನು ಪದ್ಮಾ ಪಿಕ್ಚರ್ಸ್ ಹಾಗೂ ಗೌರಿ ಟಾಕೀಸ್ ನಡಿ ನಿರ್ಮಾಣ ಮಾಡಲಾಗುತ್ತಿದೆ. ಮಲೆನಾಡಿನ ಗ್ರಾಮೀಣ ಭಾಗದಲ್ಲಿ ಡಿಸೆಂಬರ್ ನಿಂದ ಚಿತ್ರೀಕರಣ ನಡೆಸೋದಿಕ್ಕೆ ಚಿತ್ರತಂಡ ತಯಾರಿ ನಡೆಸಿದೆ. ತುಕ್ರ ತನಿಯ ಸಿನಿಮಾಗೆ ಶಾಂತಿ ಸಾಗರ್ ಛಾಯಾಗ್ರಹಣ, ಕದ್ರಿ ಮಣಿಕಾಂತ್ ಸಂಗೀತ, ಪ್ರಕಾಶ್ ಕಾರಿಂಜ ಸಂಕಲನವಿದೆ.

Achyut Kumar

ನಿರ್ದೇಶಕನ ಕನಸ್ಹೊತ್ತು ಚಿತ್ರೋದ್ಯಮಕ್ಕೆ ಬಂದಿದ್ದ ರಾಘು, ಮೊದಲು ಚೌಕಬಾರ ಹೆಸರಿನ ಕಿರುಚಿತ್ರ ಮಾಡಿದರು. ಆ ಸಿನಿಮಾವನ್ನು ಥಿಯೇಟರ್ ಗೆ ರಿಲೀಸ್ ಮಾಡಿ, ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದರು. ಈ ಕಿರು ಚಿತ್ರಕ್ಕೆ ಕರ್ನಾಟಕ ಸರಕಾರದ ರಾಜ್ಯ ಪ್ರಶಸ್ತಿ ಕೂಡ ಬಂತು. ಸೈಮಾ ಆವಾರ್ಡ್ ಅನ್ನು ಕೂಡ ಪಡೆದುಕೊಂಡರು. ಕಿರುಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಬಂದ ಕಾರಣದಿಂದಾಗಿ ಅವರಿಗೆ ಸಿನಿಮಾ ನಿರ್ದೇಶನ ಮಾಡಲು ಅವಕಾಶ ಸಿಕ್ಕಿತು.

ಚೂರಿಕಟ್ಟೆ ರಾಘು ನಿರ್ದೇಶನದ ಮೊದಲ ಸಿನಿಮಾ. ಮೊದಲ ಸಿನಿಮಾದಲ್ಲೇ ರಾಘು ಭರವಸೆ ಮೂಡಿಸಿದರು. ಈ ಸಿನಿಮಾ ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಯಿತು. ಅವರಿಗೂ ಒಳ್ಳೆಯ ಹೆಸರು ಬಂತು. ನಂತರ ಆಕ್ಟ್ 1978 ಸಿನಿಮಾಗೆ ನಟರಾಗಿ ಪ್ರವೇಶ ಮಾಡಿದರು. ಈ ಸಿನಿಮಾದಲ್ಲಿನ ಪಾತ್ರ ಅವರನ್ನು ಬ್ಯುಸಿ ನಟನನ್ನಾಗಿ ಮಾಡಿತು. ಸಾಕಷ್ಟು ಸಿನಿಮಾಗಳಲ್ಲಿ ನಟನಾಗಿಯೇ ಬ್ಯುಸಿಯಾದರು. ಈಗ ಮತ್ತೆ ನಿರ್ದೇಶನದತ್ತ ಮುಖ ಮಾಡಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article