ನವದೆಹಲಿ: ವಿಶ್ವ ಹಿಂದೂ ಕಾಂಗ್ರೆಸ್ ಸಮ್ಮೇಳನದಲ್ಲಿ ಭಾಗಿಯಾಗುವಂತೆ ವಿಶ್ವ ಹಿಂದೂ ಪರಿಷತ್ (ವಿಹೆಚ್‍ಪಿ) ಮಾಜಿ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ಅವರನ್ನು ಆಹ್ವಾನಿಸಿದೆ.
ಚಿಕಾಗೊ ದ ವಿಶ್ವ ಧರ್ಮ ಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದ ಅವರ ಭಾಷಣದ 125 ನೇ ವರ್ಷದ ನೆನಪಿನಾರ್ಥ ವಿಹೆಚ್‍ಪಿ ಈ ಸಮ್ಮೇಳನವನ್ನು ಆಯೋಜಿಸಿದೆ.
Advertisement
4 ವರ್ಷಕ್ಕೊಮ್ಮೆ ನಡೆಯುವ ಸಮ್ಮೇಳನಕ್ಕೆ ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಟಿಬೇಟಿಯನ್ ಗುರು ದಲೈ ಲಾಮ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಹಾಲಿವುಡ್ ನಟ ರಿಚರ್ಡ್ ಗೆರೆ, ಯುಎಸ್ ಕಾಂಗ್ರೆಸ್ ನ ತುಳಸಿ ಗಬ್ಬಾರ್ಡ್ ಅವರನ್ನು ಆಹ್ವಾನಿಸಲಾಗಿದೆ.
Advertisement
ರಾಜನ್ ಅವರು ಆಹ್ವಾನವನ್ನು ಸ್ವೀಕರಿಸಿದಲ್ಲಿ ಸ್ಪೈಸ್ ಜೆಟ್ ಮುಖ್ಯಸ್ಥ ಅಜಯ್ ಸಿಂಗ್, ಪಿರಾಮಾಲ್ ಸಮೂಹದ ಮುಖ್ಯಸ್ಥ ಅಜಯ್ ಪಿರಾಮಾಲ್, ಕೆಪಿಎಮ್‍ಜಿ ಭಾರತದ ಮುಖ್ಯಸ್ಥ ಅರುಣ್ ಕುಮಾರ್ ಅವರ ಜೊತೆ ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ.
Advertisement
ಜೂನ್ 7 ರಂದು ನಡೆಯುವ ಆರ್‍ಎಸ್‍ಎಸ್ ಕಾರ್ಯಕ್ರಮಕ್ಕೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಆಹ್ವಾನಿಸಲಾಗಿದೆ. ಆಹ್ವಾನಕ್ಕೆ ಒಪ್ಪಿಗೆ ಸೂಚಿಸಿರುವುದು ಈಗ ವಿವಾದವನ್ನು ಸೃಷ್ಟಿಸಿದೆ. ಕೆಲವು ಕಾಂಗ್ರೆಸ್ ನಾಯಕರು ಅಸಮಾಧಾನಗೊಂಡಿದ್ದು ನಿರ್ಧಾರವನ್ನು ಮರು ಪರಿಶೀಲಿಸುವಂತೆ ಮುಖರ್ಜಿ ಅವರಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ:ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ ಭಾಗಿ – ಯಾರು, ಏನು ಹೇಳಿದ್ರು?
Advertisement
ರಾಜನ್ ಅವರು ರಿಸರ್ವ್ ಬ್ಯಾಂಕ್ ಗವರ್ನರ್ ಅಗಿದ್ದ ವೇಳೆ ಆರ್‍ಎಸ್‍ಎಸ್ ಅವರನ್ನ ಬಹಳ ಟೀಕೆ ಮಾಡಿದ್ದು ಈಗ ಸಮ್ಮೇಳನಕ್ಕೆ ಆಹ್ವಾನ ಮಾಡುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.