ಈಗಾಗಲೇ ಬಿಸಿಲು ಹೆಚ್ಚಾಗುತ್ತಿದ್ದು, ಜನ ಬಿಸಿಲಿನ ಶಾಖದಿಂದ ದೇಹವನ್ನು ತಂಪಾಗಿಡಲು ಅಧಿಕ ನೀರು, ಎಳನೀರು ಜ್ಯೂಸ್ ಮೊರೆ ಹೋಗಿದ್ದಾರೆ. ಜ್ಯೂಸ್, ಎಳನೀರು ಸ್ವಲ್ಪ ದುಬಾರಿಯಾದ ಹಿನ್ನೆಲೆಯಲ್ಲಿ ನೀವು ಮನೆಯಲ್ಲೇ ಕುಳಿತು ರಾಗಿ ಅಂಬಲಿ ತಯಾರಿಸಿದರೆ ಕಡಿಮೆ ಖರ್ಚಿನಲ್ಲಿ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ದೇಹವನ್ನು ತಂಪಾಗಿ ಇಡಬಹುದು. ‘ರಾಗಿ ತಿಂದರೆ ರೋಗವಿಲ್ಲ’ ಎನ್ನುವ ಗಾದೆ ಮಾತಿನಂತೆ ಬೇಸಿಗೆಯಲ್ಲಿ ರಾಗಿ ಅಂಬಲಿ ಮಾಡಿ ಕುಡಿದರೆ ದೇಹದ ತಾಪಮಾನ ಕಡಿಮೆಯಾಗುತ್ತದೆ. ಹೀಗಾಗಿ ಇಲ್ಲಿ ನಿಮಗಾಗಿ ಸುಲಭವಾಗಿ ಚೆನ್ನಾಗಿ ರಾಗಿ ಅಂಬಲಿ ಮಾಡುವ ವಿಧಾನವನ್ನು ತಿಳಿಸಲಾಗಿದೆ. ಇಲ್ಲಿ ತಿಳಿಸಿದಂತೆ ಪಾಕ ಮಾಡಿ ಅಂಬಲಿ ಸಿದ್ಧಪಡಿಸಿ ನಿಮ್ಮ ದೇಹವನ್ನು ಕೂಲಾಗಿ ಇಡಿ.
ಬೇಕಾಗುವ ಸಾಮಾಗ್ರಿಗಳು
1. ರಾಗಿ ಹಿಟ್ಟು – ಅರ್ಧ ಕಪ್
2. ಕತ್ತರಿಸಿದ ಈರುಳ್ಳಿ – ಅರ್ಧ ಕಪ್
3. ಕತ್ತರಿಸಿದ ಹಸಿ ಮೆಣಸಿನಕಾಯಿ – ಒಂದು ಚಮಚ
4. ಕತ್ತರಿಸಿದ ಕೊತ್ತಂಬರಿ ಸೊಪ್ಪು – ಎರಡು ಚಮಚ
5. ಉಪ್ಪು – ರುಚಿಗೆ ಬೇಕಾದಷ್ಟು
6. ಜೀರಿಗೆ ಪುಡಿ – ಒಂದು ಚಮಚ
7. ಕರಿಬೇವು – 6 ಎಲೆಗಳು,
8. ಮಜ್ಜಿಗೆ – ಎರಡು ಕಪ್
9. ನಿಂಬೆಹಣ್ಣು – ಒಂದು
10. ನೀರು – ಅರ್ಧ ಲೀಟರ್
Advertisement
Advertisement
ಮಾಡುವ ವಿಧಾನ
* ಮೊದಲಿಗೆ ಒಂದು ಕಪ್ ನೀರಿನಲ್ಲಿ ಅರ್ಧ ಕಪ್ ರಾಗಿ ಹಿಟ್ಟನ್ನು ಹಾಕಿ, ಗಂಟು ಬರದಂತೆ ಮಿಕ್ಸ್ ಮಾಡಿ ಇಟ್ಟುಕೊಳ್ಳಿ.
* ಅರ್ಧ ಲೀಟರ್ ನೀರನ್ನು ಕುದಿಸಿ ಅದರಲ್ಲಿ ನಾವು ಮೊದಲು ತಯಾರಿ ಮಾಡಿಕೊಂಡ ರಾಗಿ ಮಿಶ್ರಣವನ್ನು ಇದರಲ್ಲಿ ಹಾಕಿ.
* ಸುಮಾರು 7 ನಿಮಿಷಗಳ ಕಾಲ ಚೆನ್ನಾಗಿ ಉಂಡೆ ಬಾರದಂತೆ ಕುದಿಸಿರಿ.
* ಬಳಿಕ ಅದು ತಣ್ಣಗಾದ ಮೇಲೆ ಅದಕ್ಕೆ ಮಜ್ಜಿಗೆ, ಕತ್ತರಿಸಿದ ಈರುಳ್ಳಿ, ಹಸಿಮೆಣಸಿನಕಾಯಿ, ಕೊತ್ತಂಬರಿಸೊಪ್ಪು, ಕರಿಬೇವು, ರುಚಿಗೆ ಬೇಕಾದಷ್ಟು ಉಪ್ಪು, ಜೀರಿಗೆ ಪುಡಿ ಹಾಕಿ ಮಿಕ್ಸ್ ಮಾಡಿ.
* ಈಗ ಅದಕ್ಕೆ ಸ್ವಲ್ಪ ನಿಂಬೆ ಹಣ್ಣಿನ ರಸವನ್ನು ಬೆರೆಸಿ ರಾಗಿ ಅಂಬಲಿ ಸವಿಯಿರಿ.
Advertisement