ಮಂಗಳೂರು: ಅಬ್ದುಲ್ ರಹೀಂ (Abdul Rahim Murder) ಹತ್ಯೆಯಾದ ಬೆನ್ನಲ್ಲೇ ಮುಸ್ಲಿಂ ಮುಖಂಡರು (Muslim Leaders) ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ಕಾಂಗ್ರೆಸ್ (Congress) ಪಕ್ಷದಲ್ಲಿರುವ ಸಮುದಾಯದ ನಾಯಕರು ಸಾಮೂಹಿಕ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಅಬ್ದುಲ್ ರಹೀಂ ಹತ್ಯೆ| ಇಬ್ಬರು ಪರಿಚಯಸ್ಥರು ಸೇರಿ 15 ಮಂದಿ ವಿರುದ್ಧ ಎಫ್‌ಐಆರ್
ನಮಗೆ ನಿಮ್ಮ ರಾಜಕೀಯ ಬೇಡ. ಜಿಲ್ಲೆಯಲ್ಲಿ ನಮ್ಮವರ ಕೊಲೆ ಎಷ್ಟಾಗಿದೆ? ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಆಗಮಿಸಬೇಕು. ಅಮಾಯಕರ ಸಾವಿಗೆ ನ್ಯಾಯ ಕೊಡಿಬೇಕೆಂದು ಪಟ್ಟು ಹಿಡಿದಿದ್ದಾರೆ. ಮುಸ್ಲಿಂ ಮುಖಂಡರು ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಅಬ್ದುಲ್ ರಹೀಂ ಹತ್ಯೆ| ರಾತ್ರಿ ಆಸ್ಪತ್ರೆ ಮುಂದೆ ಮುಸ್ಲಿಮರ ಪ್ರತಿಭಟನೆ – ಮಂಗಳೂರಿಗೆ ಹೆಚ್ಚುವರಿ ಪೊಲೀಸರ ನಿಯೋಜನೆ
ದುಷ್ಕರ್ಮಿಗಳಿಂದ ಕೊಲೆಯಾದ ಅಬ್ದುಲ್ ರಹೀಂ ಅವರ ಮೃತದೇಹವನ್ನು ಕೊಳತ್ತಮಜಲಿಗೆ ಇಂದು ಬೆಳಗ್ಗೆ ಸಾಗಿಸಲಾಯಿತು. ಕುತ್ತಾರ್ ಮದನಿ ನಗರ ಮಸೀದಿಯಲ್ಲಿ ರಹೀಂ ಅವರ ಮಯ್ಯತ್ ಸ್ನಾನ ಮಾಡಲಾಯಿತು. ನಂತರ ಮಯ್ಯತ್ ನಮಾಝ್ ಬಳಿಕ ಪೊಲೀಸ್ ಬಂದೋಬಸ್ತ್‌ನಲ್ಲಿ ಮೃತದೇಹವನ್ನು ಮೆರವಣಿಗೆಯ ಮೂಲಕ ಸಾಗಿಸಲಾಯಿತು.