ಬೆಂಗಳೂರು: ಅಧಿವೇಶನ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆಗೆ ಕರೆದರೆ, ನಾವು ಕಲಾಪಗಳಲ್ಲಿ ಹೇಗೆ ಪಾಲ್ಗೊಳ್ಳಬೇಕು ಎಂಬ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಯವರ ಆಕ್ಷೇಪಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ.
ಅಧಿವೇಶನ ಇಲ್ಲದ ಸಂದರ್ಭದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆಗೆ ಕರೆದಾಗ ಕಾಂಗ್ರೆಸ್ ನಾಯಕರು ಸಹಕರಿಸಿದ್ದರಾ? ಆಗಲೂ ಅವರು ಇಡಿ ತನಿಖೆಗೆ ಸಹಕಾರ ನೀಡಿಲ್ಲ. ತನಿಖೆ ನಡೆಯಬಾರದು ಎಂಬುದು ಕಾಂಗ್ರೆಸ್‌ನವರ ಉದ್ದೇಶವಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ.
Advertisement
Advertisement
ಇಡಿ ತನಿಖೆಗೆ ತಡೆ ಕೋರಿ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರು ಹೈಕೋರ್ಟ್, ಸುಪ್ರೀಂ ಕೋರ್ಟ್ ಮುಂದೆಯೂ ಹೋಗಿದ್ದರು. ಆದರೆ ನ್ಯಾಯಾಲಯಗಳಲ್ಲಿ ಅವರಿಗೆ ತಡೆಯಾಜ್ಞೆ ಸಿಕ್ಕಿಲ್ಲ. ತನಿಖೆಯನ್ನು ತಡೆಯಲು ದೇಶದ ಸುಪ್ರೀಂ ಕೋರ್ಟ್ ನಿರಾಕರಿಸಿರುವಾಗ, ಇಡಿ ತನಿಖೆಯನ್ನು ನಿಲ್ಲಿಸಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.
Advertisement
ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಯಂಗ್ ಇಂಡಿಯಾ ಕಂಪನಿಯ ಸಿಇಒ ಆಗಿದ್ದಾರೆ. ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈ ಕಂಪನಿಯದ್ದು ಪ್ರಮುಖ ಪಾತ್ರವಿದೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಡಿ ತನಿಖೆಗೆ ಒಳಪಡಿಸಿದೆ. ಸಾರ್ವಜನಿಕ ಜೀವನದಲ್ಲಿರುವ ಖರ್ಗೆ ಅವರು ತನಿಖೆಗೆ ಸಹಕರಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ : ಅಮಿತ್ ಶಾ ವಿರುದ್ಧ ಸಿದ್ದು ಕಿಡಿ
Advertisement
ಕಾಂಗ್ರೆಸ್ ತನ್ನ ಪಕ್ಷದ ರಚನೆಯಲ್ಲೇ ಪ್ರಜಾಪ್ರಭುತ್ವವನ್ನು ಅನುಸರಿಸಲಿಲ್ಲ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ದೇಶದ ಪ್ರಜಾಪ್ರಭುತ್ವವನ್ನು ತಡೆಹಿಡಿದ ಕಾಂಗ್ರೆಸ್ ಪಕ್ಷ ವಿಪರ್ಯಾಸ ಎಂಬಂತೆ ಇಂದು ನಮಗೆ ಪ್ರಜಾಪ್ರಭುತ್ವದ ಪಾಠ ಮಾಡಲು ಬರುತ್ತಿದೆ.
1/2 pic.twitter.com/uhPShBxmt1
— Pralhad Joshi (@JoshiPralhad) August 5, 2022
ಅಧಿವೇಶನ ನಡೆಯುವಾಗ ಇಡಿ ಸಮನ್ಸ್ ಮಾಡಿದರೆ ಹೇಗೆ ಎಂದು ಕೇಳುವ ಖರ್ಗೆ ಅವರು, ಸೆಷನ್ ಇಲ್ಲದಿದ್ದಾಗ ತನಿಖೆಗೆ ಎಷ್ಟು ಸಹಕಾರ ನೀಡಿದ್ದಾರೆ? ಸೋನಿಯಾ, ರಾಹುಲ್ ಗಾಂಧಿ ಅವರಿಗೆ ಇಡಿ ಸಮನ್ಸ್ ನೀಡಿದಾಗ ಸದನದ ಕಲಾಪಕ್ಕೆ ಅಡ್ಡಿಪಡಿಸಿ, ಸದನ ನಡೆಯದಂತೆ ಮಾಡಿದವರು ಕಾಂಗ್ರೆಸ್‌ನವರು. ಸದನದ ಕಲಾಪ ನಡೆಯಲು ಖರ್ಗೆ ಅವರು ಎಷ್ಟು ಸಹಕಾರ ಕೊಟ್ಟಿದ್ದಾರೆ ಹೇಳಲಿ ಎಂದು ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ.
ಇಂದು ದೇಶದ ಎಲ್ಲಾ ನ್ಯಾಯಾಲಯಗಳು ಕಾಂಗ್ರೆಸ್‌ನ ಮನವಿಯನ್ನು ತಿರಸ್ಕರಿಸಿದೆ, ಆದರೂ ಕಾಂಗ್ರೆಸ್ ನ್ಯಾಯಾಂಗ ವ್ಯವಸ್ಥೆಯನ್ನೇ ನಂಬುತ್ತಿಲ್ಲ. 2/2
— Pralhad Joshi (@JoshiPralhad) August 5, 2022
ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದವರಿಂದ ನಾವು ಪ್ರಜಾಪ್ರಭುತ್ವದ ಪಾಠ ಕಲಿಯಬೇಕಾಗಿಲ್ಲ. ಕಾಂಗ್ರೆಸ್ ತನ್ನ ಪಕ್ಷದ ರಚನೆಯಲ್ಲೇ ಪ್ರಜಾಪ್ರಭುತ್ವವನ್ನು ಅನುಸರಿಸಲಿಲ್ಲ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ದೇಶದ ಪ್ರಜಾಪ್ರಭುತ್ವವನ್ನು ತಡೆ ಹಿಡಿದವರು ಯಾರು? ಇಂದು ದೇಶದ ಎಲ್ಲಾ ನ್ಯಾಯಾಲಯಗಳು ಕಾಂಗ್ರೆಸ್‌ನ ಮನವಿಯನ್ನು ತಿರಸ್ಕರಿಸಿದೆ. ಆದರೂ ಕಾಂಗ್ರೆಸ್ ನ್ಯಾಯಾಂಗ ವ್ಯವಸ್ಥೆಯನ್ನೇ ನಂಬುತ್ತಿಲ್ಲ. ಇದು ಪ್ರಜಾಪ್ರಭುತ್ವದ ವಿರೋಧಿ ಧೋರಣೆ ಅಲ್ಲವೇ ಎಂದು ಜೋಶಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮೋದಿ ಮುಂದೆ ರಾಹುಲ್ ಗಾಂಧಿ ಜೀರೋ: ರೇಣುಕಾಚಾರ್ಯ