ಜೈಪುರ: 2026ರ ಐಪಿಎಲ್ ಟೂರ್ನಿಗೂ ಮುನ್ನವೇ ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ಮುಖ್ಯಕೋಚ್ ಹುದ್ದೆಯಿಂದ ಕೆಳಗಿಳಿದಿದ್ದಾರೆ. 2025ರ ಐಪಿಎಲ್ ಟೂರ್ನಿ ವೇಳೆ ರಾಜಸ್ಥಾನ್ ತಂಡದ ಕೋಚ್ ಆಗಿದ್ದ ದ್ರಾವಿಡ್ (Rahul Dravid) ಒಂದೇ ವರ್ಷಕ್ಕೆ ಫ್ರಾಂಚೈಸಿಯಿಂದ ಹೊರಬಂದಿದ್ದಾರೆ.
19ನೇ ಆವೃತ್ತಿಯ ಐಪಿಎಲ್‌ಗೂ ಮುನ್ನ ದ್ರಾವಿಡ್ ಹೆಡ್ ಕೋಚ್ (Head Coach) ಹುದ್ದೆಯಿಂದ ಕೆಳಗಿಳಿಯುವ ಬಗ್ಗೆ ರಾಜಸ್ಥಾನ್ ರಾಯಲ್ಸ್ ಶನಿವಾರ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ – ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ
Official Statement pic.twitter.com/qyHYVLVewz
— Rajasthan Royals (@rajasthanroyals) August 30, 2025
ರಾಜಸ್ಥಾನ್ ರಾಯಲ್ಸ್ ತಂಡದ ಪ್ರಯಾಣದಲ್ಲಿ ರಾಹುಲ್ ಹಲವು ವರ್ಷಗಳಿಂದ ಕೇಂದ್ರಬಿಂದುವಾಗಿದ್ದಾರೆ. ಅವರ ನಾಯಕತ್ವವು ಒಂದು ಪೀಳಿಗೆಯ ಆಟಗಾರರ ಮೇಲೆ ಪ್ರಭಾವ ಬೀರಿದೆ. ತಂಡದೊಳಗೆ ದೊಡ್ಡ ಮೌಲ್ಯಗಳನ್ನು ನಿರ್ಮಿಸಿದೆ ಮತ್ತು ಫ್ರಾಂಚೈಸಿಯೊಂದಿಗೆ ಅಳಿಸಲಾಗದ ಗುರುತು ಬಿಟ್ಟಿದ್ದಾರೆ. ಫ್ರಾಂಚೈಸಿ ರಚನಾತ್ಮಕ ಪರಿಶೀಲನೆಯ ಭಾಗವಾಗಿ, ರಾಹುಲ್‌ಗೆ ಫ್ರಾಂಚೈಸಿಯಲ್ಲಿ ವಿಶಾಲವಾದ ಸ್ಥಾನ ನೀಡಲಾಗಿತ್ತು, ಆದರೆ ಅದನ್ನು ತೆಗೆದುಕೊಳ್ಳದಿರಲು ಅವರು ನಿರ್ಧರಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಮತ್ತು ವಿಶ್ವದಾದ್ಯಂತ ಇರುವ ಫ್ರಾಂಚೈಸಿಯ ಎಲ್ಲಾ ಆಟಗಾರರು ಹಾಗೂ ಲಕ್ಷಾಂತರ ಅಭಿಮಾನಿಗಳು ರಾಹುಲ್ ದ್ರಾವಿಡ್ ಅವರ ಸೇವೆಗೆ ಹೃತ್ಪೂರ್ವಕ ಧನ್ಯವಾದ ಅರ್ಪಿಸಿದ್ದಾರೆ ಎಂದು ಫ್ರಾಂಚೈಸಿ ಹೇಳಿದೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ – ಅಭಿಮಾನಿಗಳಿಗೆ ಕೇರ್ ಸೆಂಟರ್ ತೆರೆಯಲಿದೆ ಆರ್‌ಸಿಬಿ
ಟೀಂ ಇಂಡಿಯಾದ ಮುಖ್ಯಕೋಚ್ ಹುದ್ದೆಯಿಂದ ಹೊರ ಬಂದ ಬಳಿಕ 2024ರ ಸೆಪ್ಟೆಂಬರ್‌ನಲ್ಲಿ ದ್ರಾವಿಡ್ ಅವರನ್ನು ಬಹು ವರ್ಷಗಳ ಒಪ್ಪಂದದ ಮೇಲೆ RR ತಂಡದ ಮುಖ್ಯಕೋಚ್ ಆಗಿ ನೇಮಕ ಮಾಡಿಕೊಳ್ಳಲಾಗಿತ್ತು. ಉದ್ಘಾಟನಾ ಆವೃತ್ತಿಯಲ್ಲಿ ಐಪಿಎಲ್ ಟ್ರೋಫಿ ಗೆದ್ದಿದ್ದ ರಾಜಸ್ಥಾನ್ ರಾಯಲ್ ಡ್ರಾವಿಡ್ ಅವರನ್ನು ಕೋಚ್ ಆಗಿ ನೇಮಿಸಿಕೊಂಡ ಬಳಿಕ ಮತ್ತೊಂದು ಪ್ರಶಸ್ತಿ ಗೆಲ್ಲುವ ನಿರೀಕ್ಷೆಯಲ್ಲಿತ್ತು. ಆದ್ರೆ 2025ರ ಐಪಿಎಲ್‌ನಲ್ಲಿ, ರಾಜಸ್ಥಾನ್ ರಾಯಲ್ಸ್ ತಂಡವು ಕಳಪೆ ಪ್ರದರ್ಶನ ನೀಡಿತು, 14 ಪಂದ್ಯಗಳಲ್ಲಿ 4 ಪಂದ್ಯಗಳನ್ನು ಗೆದ್ದು ಲೀಗ್ ಸುತ್ತಿನಲ್ಲೇ ಹೊರಬಿದ್ದಿತು.