– ʻಕೈʼ ಸಮಾವೇಶಕ್ಕೆ 3,500 ಪೊಲೀಸರ ಭದ್ರತೆ
ಬೆಳಗಾವಿ: ಐತಿಹಾಸಿಕ ಕಾರ್ಯಕ್ರಮಕ್ಕೆ ಕುಂದಾನಗರಿ ಬೆಳಗಾವಿ (Belagavi) ಸಜ್ಜಾಗಿದೆ. ಗಾಂಧಿ, ಅಂಬೇಡ್ಕರ್ ವಿಚಾರಧಾರೆಗಳನ್ನ ಮುಂದಿಟ್ಟುಕೊಂಡು ರಣಕಹಳೆ ಮೊಳಗಿಸಲು ಕಾಂಗ್ರೆಸ್ (Congress) ಸಜ್ಜಾಗಿದೆ. ರಾಜಕೀಯ ಮತ್ತು ಸಂವಿಧಾನ ರಕ್ಷಣೆ ವಿಷಯವಾಗಿ ದೇಶಕ್ಕೆ ಹೊಸ ಸಂದೇಶ ನೀಡಲು ಇಲ್ಲಿ ಮಂಗಳವಾರ (ಜ.21) ಅಯೋಜಿಸಲಾಗಿರುವ ‘ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ’ ಸಮಾವೇಶ ಹಲವು ನಿರೀಕ್ಷೆ ಮತ್ತು ಕುತೂಹಲಗಳಿಗೆ ಎಡೆ ಮಾಡಿಕೊಟ್ಟಿದೆ.
Advertisement
ಬೆಳಗಾವಿಯ ಸಿಪಿಇಡಿ ಮೈದಾನವು ‘ಜೈ ಬಾಪು ಜೈ ಭೀಮ್ ಮತ್ತು ಜೈ ಸಂವಿಧಾನ’ ಸಮಾವೇಶಕ್ಕೆ ಸಿದ್ಧವಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ – ಇಬ್ಬರು ಕಾಮುಕರು ಅರೆಸ್ಟ್
Advertisement
1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ಬೆಳಗಾವಿ ಸಾಕ್ಷಿಯಾಗಿತ್ತು. ಈಗ ಅಧಿವೇಶನದ ಶತಮಾನೋತ್ಸವದ ಭಾಗವಾಗಿ ಸಮಾವೇಶ ನಡೆಯುತ್ತಿದೆ. ‘ಕೈ’ ಪಡೆಯ ಘಟಾನುಘಟಿ ನಾಯಕರ ದಂಡೇ ಬೆಳಗಾವಿಯತ್ತ ಮುಖ ಮಾಡಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ ಶಿವಕುಮಾರ್ (DK Shivakumar) ಸಮಾವೇಶದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
Advertisement
Advertisement
ಕೆಲ ಆಂತರಿಕ ತಿಕ್ಕಾಟದ ವಿದ್ಯಮಾನಗಳ ಮಧ್ಯೆಯೂ, ನಾಯಕರು ಮತ್ತು ಕಾರ್ಯಕರ್ತರು ಸಮಾವೇಶದ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ. ಪಕ್ಷ ಸಂಘಟನೆ ಬಲವರ್ಧನೆಯ ವಿಶ್ವಾಸದಲ್ಲಿ ವರಿಷ್ಠರಿದ್ದಾರೆ. ಕಾಂಗ್ರೆಸ್ ನಾಯಕರ ಕಟೌಟು, ಪಕ್ಷದ ಧ್ವಜಗಳಿಂದ ನಗರದ ಪ್ರಮುಖ ರಸ್ತೆಗಳು ರಾರಾಜಿಸುತ್ತಿವೆ. ಇದನ್ನೂ ಓದಿ: ʻಟಿಪ್ಪು ಸುಲ್ತಾನ್ – ದಿ ಸಾಗಾ ಆಫ್ ಮೈಸೂರು’ ಪುಸ್ತಕ ಬಿಡುಗಡೆ ಮಾಡಿದ ಸಂಸದ ಯದುವೀರ್
ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಪ್ರಯುಕ್ತ ಬೆಳಗಾವಿಯಲ್ಲಿ ಕಳೆದ ವರ್ಷ ಡಿಸೆಂಬರ್ 26, 27ರಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಡಿ.26ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆದಿತ್ತು. ಆದರೆ, 27ರಂದು ನಡೆಯಬೇಕಿದ್ದ ಸಮಾವೇಶವನ್ನು ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ನಿಧನದ ಕಾರಣ ಮುಂದೂಡಲಾಗಿತ್ತು.
ರಾಹುಲ್ ಗಾಂಧಿ ಗೈರು:
ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸವಿನೆನಪಿಗೆ ಸುವರ್ಣ ವಿಧಾನಸೌಧ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ ಪ್ರತಿಮೆಯನ್ನು ಬೆಳಿಗ್ಗೆ 10.30ಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಉಪಸ್ಥಿತಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾವರಣ ಮಾಡುವುದರಲ್ಲಿದ್ದರು. ಆದ್ರೆ ಅನಾರೋಗ್ಯ ರಾಹುಲ್ ಗಾಂಧಿ ಬೆಳಗಾವಿ ಪ್ರವಾಸ ರದ್ದುಗೊಳಿಸಿದ್ದಾರೆ. ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿ ಇನ್ನಿತರ ನಾಯಕರು ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು ಉಪಸ್ಥಿತರಿರಲಿದ್ದಾರೆ. ಇದೇ ವೇಳೆ ಶತಮಾನದ ಹಿಂದೆ ನಡೆದ ಅಧಿವೇಶನದಲ್ಲಿ ಗಾಂಧೀಜಿ ಮಾಡಿದ್ದ ಅಧ್ಯಕ್ಷೀಯ ಭಾಷಣದ ಸಂದೇಶ ಮತ್ತು ‘ಗಾಂಧಿ ಭಾರತ’ ಪುಸ್ತಕ ಬಿಡುಗಡೆ ಆಗಲಿದೆ.
3,500 ಮಂದಿ ಪೊಲೀಸ್ ಭದ್ರತೆ:
ಬೆಳಗಾವಿಯಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿರುವ ಕಾಂಗ್ರೆಸ್ 2 ಲಕ್ಷ ಜನರನ್ನು ಸೇರಿಸಿ ರಣಕಹಳೆ ಮೊಳಗಿಸಲಿದೆ. ದೇಶ್ಯಾದ್ಯಂತ ಬಿಜೆಪಿ ವಿರುದ್ಧ ಜನಾಂದೋಲನಕ್ಕೆ ಬೆಳಗಾವಿಯಿಂದಲೇ ರಣಕಹಳೆ ಮೊಳಗಿಸುವುದಕ್ಕೂ ಕೈ ನಾಯಕರು ಸಜ್ಜಾಗಿದೆ. ಐತಿಹಾಸಿಕ ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ನಿಯೋಜಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ನೇತೃತ್ವದಲ್ಲಿ ಸುಮಾರು 3,500 ಜನ ಪೊಲೀಸ್ ಸಿಬ್ಬಂದಿಯನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ.